ಇತ್ತೀಚಿನ ಸುದ್ದಿ
ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ
22/03/2026, 20:26
ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು
info.reporterkarnataka@gmail.com
ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಮಸ್ಕಿ ಜೊತೆಗೆ ತಾಲ್ಲೂಕಿನ ತುರ್ವಿಹಾಳ ಪಟ್ಟಣ ಪಂಚಾಯಿತಿಯ ಹೆಚ್ಚುವರಿ ಹೊಣೆ ನೀಡಿದ್ದು, ಆಡಳಿತದ ಮೇಲೆ ಪರಿಣಾಮ ಉಂಟು ಮಾಡಲಿದೆ ಎಂದು ನಾಗರಿಕರು ಅಭಿಪ್ರಾಯಪಟ್ಟಿದ್ದಾರೆ.
ಮುಖ್ಯಾಧಿಕಾರಿ ವಾರದಲ್ಲಿ ಕೇವಲ ಎರಡು–ಮೂರು ದಿನ ಮಾತ್ರ ಮಸ್ಕಿ ಪುರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಉಳಿದ ದಿನ ತುರ್ವಿಹಾಳದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಅರ್ಜಿಗಳು ವಿಲೇವಾರಿಯಾಗದ ಕಾರಣ ಬಾಕಿ ಉಳಿಯುತ್ತಿವೆ. ಸಣ್ಣಪುಟ್ಟ ಕೆಲಸಗಳಿಗೂ ಜನರು ಪುರಸಭೆಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಪುರಸಭೆ ವ್ಯಾಪ್ತಿಯಲ್ಲಿ ನೀರು, ರಸ್ತೆ ಹಾಗೂ ಸ್ವಚ್ಛತೆ ಸೇರಿದಂತೆ ಮೂಲ ಸೌಕರ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ತಕ್ಷಣ ಪರಿಹಾರ ದೊರಕುತ್ತಿ ಲ್ಲ. ಇದು ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಮುಖ್ಯಾ ಧಿಕಾರಿ ಪೂರ್ಣಕಾಲಿಕವಾಗಿ ಲಭ್ಯವಿರದ ಕಾರಣ ಅಧಿಕಾರಿಗಳ ನಡುವೆ ಸಮನ್ವಯ ಕೊರತೆ ಉಂಟಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಜನಪ್ರತಿನಿಧಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಮಸ್ಕಿ ಪುರಸಭೆಗೆ ಪ್ರತ್ಯೇಕ ಪೂರ್ಣಕಾಲಿಕ ಮುಖ್ಯಾಧಿಕಾರಿಯನ್ನು ನೇಮಿ ಸಬೇಕು ಎಂದು ಆಗ್ರಹಿಸಿದ್ದಾರೆ. ಪಟ್ಟಣದ ವೇಗದ ಅಭಿವೃದ್ಧಿಗಾಗಿ ಆಡಳಿತ ವ್ಯವಸ್ಥೆಯನ್ನು ಬಲಪಡಿಸುವುದು ಅವಶ್ಯಕ ಎಂಬ ವ್ಯಕ್ತವಾಗಿದೆ.












