11:38 PM Tuesday28 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಆದೇಶ ಪಾಲಿಸದ ಕೆಲವು ಎಂಜಿನಿಯರಿಂಗ್ ಕಾಲೇಜು: ಮಳೆಗೆ ನೀಡಿದ ರಜೆ ಕಡ್ಡಾಯ ಪಾಲನೆಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ

08/07/2022, 19:37

ಮಂಗಳೂರು(reporterkarnataka.com): ಜಿಲ್ಲೆಯಲ್ಲಿ ಪ್ರಸಕ್ತವಾಗಿ ಅತಿ ಹೆಚ್ಚು ಪ್ರಮಾಣದ ಮಳೆಯಾಗುತ್ತಿರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆ ಹಾಗೂ  ಮುನ್ನೆಚ್ಚರಿಕಾ ಕ್ರಮವಾಗಿ ರಜೆ ನೀಡಲಾಗುತ್ತಿದೆ, ಅದನ್ನು ಸಂಬಂಧಿಸಿದ ಕಾಲೇಜುಗಳ ಆಡಳಿತ ಮಂಡಳಿವರು  ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಜಿಲ್ಲೆಯ ಎಲ್ಲಾ ಎಂಜಿನಿಯರಿಂಗ್ ಕಾಲೇಜುಗಳ ಮುಖ್ಯಸ್ಥರು ಹಾಗೂ  ಪ್ರಾಂಶುಪಾಲರಿಗೆ ತಾಕೀತು ಮಾಡಿದರು.

ಅವರು ಶುಕ್ರವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿ ವಿಕೋಪ ನಿರ್ವಹಣೆಯಡಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜುಗಳ ಪ್ರಾಂಶುಪಾಲರೊಂದಿಗೆ ಹಮ್ಮಿಕೊಳ್ಳಲಾದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಜಿಲ್ಲೆಯ ಎಲ್ಲಾ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿಗೆ ಬರುವ ವ್ಯವಸ್ಥೆಯನ್ನು ಮೊದಲು ಸಮೀಕ್ಷೆ ಮಾಡಬೇಕು, ಅವರುಗಳು ಹಳ್ಳಿ, ಹಾಸ್ಟೇಲ್ ನಿಂದ ಅಥವಾ ಇತರೆ ವ್ಯವಸ್ಥೆಗಳು ಸೇರಿದಂತೆ ಕಾಲೇಜಿಗೆ ಹೇಗೆ ಬರುತ್ತಿದ್ದಾರೆ ಎಂಬುದನ್ನು ಕಂಡುಕೊಳ್ಳಬೇಕು, ಜಿಲ್ಲಾಡಳಿತ ರಜೆ ಘೋಷಿಸಿದಾಗ ಕಡ್ಡಾಯವಾಗಿ ರಜೆ ನೀಡಲೇಬೇಕು, ಉಲ್ಲಂಘಿಸಿದ್ದಲ್ಲೀ ವಿಪತ್ತು ನಿರ್ವಹಣಾ ಅಧಿನಿಯಮದ 24-34ರ ನಿಯಮಗಳನುಸಾರ  ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು. ಜಿಲ್ಲಾಡಳಿತ ಒಂದು ಭಾರಿ ಆದೇಶ ಹೊರಡಿಸಿದರೆ ಅದು ಅಧಿಕೃತ ಹಾಗೂ ಅಂತಿಮ ಅದನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾ ನಗರ ಪಾಲಿಕೆ ಪ್ರಭಾರ ಆಯುಕ್ತ ಪ್ರಶಾಂತ್ ಮಿಶ್ರ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸುಧಾಕರ್, ಮಂಗಳೂರು ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಸ್. ಗುರುಪ್ರಸಾದ್, ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ್ ಸೇರಿದಂತೆ ವಿವಿಧ ಕಾಲೇಜಿನ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರುಗಳು ಉಪಸ್ಥಿತರಿದ್ದರು.

…..

*44ನೇ ಚೆಸ್ ಒಲಂಪಿಯಾಡ್ ಅಂಗವಾಗಿ 19ರಂದು ಜಿಲ್ಲಾ ಮಟ್ಟದ ಟಾರ್ಚ್ ರಿಲೇ: ಅಗತ್ಯ ಸಿದ್ದತೆಗಳಿಗೆ ಎಡಿಸಿ ಸೂಚನೆ*

ಮಂಗಳೂರು,ಜು.08(ಕ.ವಾ):- ದೇಶದಲ್ಲಿ ಚೆಸ್ ಕ್ರೀಡೆಗೆ ಉತ್ತೇಜನ ನೀಡುವ ದೃಷ್ಟಿಯಲ್ಲಿ ಇದೇ ಜುಲೈ 19 ರಿಂದ ನವದೆಹಲಿಯಲ್ಲಿ ಪ್ರಾರಂಭವಾಗುತ್ತಿರುವ 44ನೇ ಚೆಸ್ ಒಲಂಪಿಯಾಡ್ ಕ್ರೀಡಾಕೂಟದ ಹಿನ್ನಲೆಯಲ್ಲಿ ಅಂದೇ ಮಂಗಳೂರಿನಲ್ಲಿ ಸಂಘಟಿಸಲಾಗುತ್ತಿರುವ ಜಿಲ್ಲಾ ಮಟ್ಟದ ಟಾರ್ಚ್ ರಿಲೇ ಕಾರ್ಯಕ್ರಮದ ಯಶಸ್ವಿಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಕೆ.ಎಚ್. ಕೃಷ್ಣಮೂತಿ ಅವರು ತಿಳಿಸಿದರು. 

 ಅವರು ಜು.8ರ ಶುಕ್ರವಾರ ನಗರದ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿ ಈ ಕುರಿತು ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಇತ್ತೀಚಿನ ಸುದ್ದಿ

ಜಾಹೀರಾತು