10:45 PM Monday8 - December 2025
ಬ್ರೇಕಿಂಗ್ ನ್ಯೂಸ್
ಕಿದ್ವಾಯಿ ಆಸ್ಪತ್ರೆ: ಒಂದೇ ಮೂತ್ರಪಿಂಡ ಹೊಂದಿದ್ದ ವಿಲ್ಮ್ಸ್ ಟ್ಯೂಮರ್ ಕಾಯಿಲೆಪೀಡಿತ ಬಾಲಕನಿಗೆ ಯಶಸ್ವಿ… ​ಬೆಂಗಳೂರಿನಲ್ಲಿ ವಾಹನಗಳ ಸಂಖ್ಯಾ ಸ್ಫೋಟ: 1.47 ಕೋಟಿ ಜನಸಂಖ್ಯೆ; 1.23 ಕೋಟಿ ವಾಹನಗಳ… ಬೆಳಗಾವಿ ಚಳಿಗಾಲದ ಅಧಿವೇಶನದ ನಾಳೆಯಿಂದ ಆರಂಭ: ಕುಂದನಗರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ ನನ್ನದು ಕೃಷ್ಣತತ್ವ, ಕಾಂಗ್ರೆಸ್ ಪಕ್ಷದ್ದು ಕಂಸತತ್ವ; ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ: ಕೇಂದ್ರ… Bagalkote | ಸಿದ್ಧಶ್ರೀ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಭಾವಿ ಸಭೆ : ಚಲನಚಿತ್ರಗಳ ಆಹ್ವಾನ Kodagu | ಮಡಿಕೇರಿ: ಆಕಸ್ಮಿಕ ಗುಂಡಿನ ಚೂರು ತಗುಲಿ ಇಬ್ಬರು ಯುವಕರಿಗೆ ಗಾಯ ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಸಚಿವ ಡಾ. ಶರಣಪ್ರಕಾಶ್‌ ಒತ್ತಾಯ ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ಭಾರತ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Shivamogga | ಬಸ್ ಚಾಲಕನ ಅತೀ ವೇಗ, ಅಜಾಗರೂಕತೆ: ಬೈಕ್ ಸವಾರ ಗಂಭೀರ ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ…

ಇತ್ತೀಚಿನ ಸುದ್ದಿ

ಅಧಿಕಾರ ದಾಹದಿಂದ ಪಾದಯಾತ್ರೆ ಹಮ್ಮಿಕೊಂಡಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

06/08/2024, 23:06

ಬೆಂಗಳೂರು(reporterkarnataka.com): ರಾಜ್ಯದ ಇತಿಹಾಸದಲ್ಲಿ ಇಂಥ ಬೃಹತ್ ಪಾದಯಾತ್ರೆಯನ್ನು ಯಾರೂ ಹಮ್ಮಿಕೊಂಡಿರಲಿಲ್ಲ. ಯಾವುದೇ ಅಧಿಕಾರ ದಾಹದಿಂದ ನಮ್ಮ ಈ ಪಾದಯಾತ್ರೆ ಹಮ್ಮಿಕೊಂಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು.
ನಾಲ್ಕನೇ ದಿನವಾದ ಇಂದು ಮೈಸೂರು ಚಲೋ ಪಾದಯಾತ್ರೆಯ ಸಂದರ್ಭದಲ್ಲಿ ಅವರು ಮಾತನಾಡಿದರು.
ಭ್ರಷ್ಟ ಕಾಂಗ್ರೆಸ್ ಸರಕಾರ ಮತ್ತು ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕಿತ್ತೆಸೆಯಬೇಕೆಂದು ಸಂಕಲ್ಪದೊಂದಿಗೆ ಈ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.
ರಾಜ್ಯದ ಆರೂವರೆ ಕೋಟಿ ಜನರಿಗೆ ಚುನಾಯಿತ ಸರಕಾರ ಇದೆ ಎಂದು ಅನಿಸುತ್ತಿಲ್ಲ. ಕಾಂಗ್ರೆಸ್‌ನವರು ಅನೇಕ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿದೆ. ಕಳೆದ 14 ತಿಂಗಳಿನಲ್ಲಿ ರಾಜ್ಯದಲ್ಲಿ ವಿದ್ಯುತ್ ದರ ಏರಿಸಿದ್ದಾರೆ. ಹಾಲಿನ ದರ ಹೆಚ್ಚಿಸಿದರೂ ಅದರ ಪ್ರಯೋಜನ ರೈತರು, ಹೈನುಗಾರರಿಗೆ ಲಭಿಸಿಲ್ಲ. ಯಡಿಯೂರಪ್ಪನವರು, ಬಿಜೆಪಿ ಸರಕಾರವು ಹಾಲು ಉತ್ಪಾದಕರಿಗೆ 5 ರೂ. ಪ್ರೋತ್ಸಾಹಧನ ಕೊಡುತ್ತಿತ್ತು ಎಂದು ವಿವರಿಸಿದರು.
ಸಿದ್ದರಾಮಯ್ಯನವರು ರೈತರ ಬಗ್ಗೆ ಮೊಸಳೆಕಣ್ಣೀರು ಹಾಕುತ್ತಿದ್ದಾರೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ 1200 ಕೋಟಿ ರೂ. ಹಾಗೇ ಉಳಿಸಿಕೊಂಡಿದ್ದಾರೆ. ನೋಂದಣಿ ಶುಲ್ಕ ಹೆಚ್ಚಾಗಿದೆ. ಅಕ್ಕಿ, ದವಸ ಧಾನ್ಯವೂ ದುಬಾರಿಯಾಗಿದೆ. 1 ಲಕ್ಷ 95 ಸಾವಿರ ಕೋಟಿ ಸಾಲವನ್ನು ಸಿದ್ದರಾಮಯ್ಯನವರ ಸರಕಾರ ಮಾಡಿದೆ ಎಂದು ಟೀಕಿಸಿದರು.
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಎಸ್. ಇಂದ್ರೇಶ್ ಕುಮಾರ್, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು, ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಸಂಸದರು, ಶಾಸಕರು, ಮಾಜಿ ಜನಪ್ರತಿನಿಧಿಗಳು, ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು. ರಾಜ್ಯದ ವಿವಿಧ ಭಾಗಗಳಿಂದ ಬಂದ ಕಾರ್ಯಕರ್ತರಿಗೆ ಅವರು ಕೃತಜ್ಞತೆ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು