1:13 PM Saturday13 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಅಧಿಕಾರ ನೀಡಿದರೆ ಕರ್ನಾಟಕವನ್ನು ದೇಶದಲ್ಲೇ ಅಭಿವೃದ್ಧಿ ಪರ ರಾಜ್ಯ ಮಾಡುವೆ: ಮಾಜಿ ಸಿಎಂ ಕುಮಾರಸ್ವಾಮಿ

21/08/2021, 21:16

ಮೈಸೂರು(reporterkarnataka.com):ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಗೆ ಸಂಪೂರ್ಣ ಬಹುಮತ ನೀಡಿದರೆ ರಾಜ್ಯದಲ್ಲಿ ಕಾಂತ್ರಿಕಾರಿ ಬೆಳವಣಿಗೆ ತಂದು ದೇಶದಲ್ಲೇ ಅಭಿವೃದ್ದಿ ಪರ ರಾಜ್ಯ ಮಾಡುತ್ತೇನೆ ಎಂದು ಮಾಜಿ ಮುಖ‍್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ದಾಬಸ್ ಪೇಟೆ ಸಮೀಪದ ಸೋಂಪುರ ಹೋಬಳಿಯ ಕೆಂಗಲ್ ಗ್ರಾಮದಲ್ಲಿ ನಡೆದ ಶ್ರೀ ಲಕ್ಷ್ಮಿವೆಂಕಟೇಶ್ವರಸ್ವಾಮಿ ಮತ್ತು ಶ್ರೀ ಕೃಷ್ಣ- ರುಕ್ಮಿಣಿಯ ಜೀರ್ಣೋದ್ಧಾರಗೊಂಡ ದೇವಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಾನು ರಾಜಕೀಯಕ್ಕೆ ಬಂದದ್ದು ಆಕಸ್ಮಿಕ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ, ಅಧಿಕಾರದಲ್ಲಿದ್ದಾಗ ನಾನು ಜನರಿಗೆ ಮೋಸ ಮಾಡಿಲ್ಲ ಎಂದರು.

ಮೊದಲ ಬಾರಿಗೆ ನಾನು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಮೈತ್ರಿ ಸರಕಾರ ನನಗೆ ಸಹಕಾರ ನೀಡಿತ್ತು. ಆದರೆ, ಎರಡನೇ ಬಾರಿ ಸಿಎಂ ಆದ ಸಂದರ್ಭ ಮೈತ್ರಿ ಸರ್ಕಾರದಿಂದ ನನಗೆ ಸಹಕಾರ ದೊರೆಯಲಿಲ್ಲ. ಇಲ್ಲಸಲ್ಲದ ಕಷ್ಟಗಳನ್ನು ನೀಡಲಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

ರೈತರ ಕಷ್ಟಗಳು ಶಾಶ್ವತವಾಗಿ ಬಗೆಹರಿಸಲು ಸಾಲಮನ್ನಾದಿಂದ ಸಾಧ್ಯವಿಲ್ಲ. ರೈತರು ಸಾಲಗಾರನಾಗದೆ ಇರುವ ಹಾಗೆ ಸರ್ಕಾರ ಚಿಂತನೆ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು