ಇತ್ತೀಚಿನ ಸುದ್ದಿ
ಅಧಿಕಾರಿಗಳ ಬಿಲ್ಡಪ್ಗೆ ಮುಖ್ಯಮಂತ್ರಿ ಬ್ರೇಕ್: ಮಾಧ್ಯಮಗಳಲ್ಲಿ ವೈಯಕ್ತಿಕ ಪ್ರಚಾರಕ್ಕೆ ರಾಜ್ಯ ಸರಕಾರ ನಿಷೇಧ
19/09/2021, 09:53
ಬೆಂಗಳೂರು(reporterkarnataka.com): ಪ್ರಚಾರಪ್ರಿಯ ಸರಕಾರಿ ಅಧಿಕಾರಿಗಳಿಗೆ ರಾಜ್ಯ ಸರಕಾರ ಸಣ್ಣ ಶಾಕ್ ನೀಡಿದೆ. ಪತ್ರಿಕೆ, ಟಿವಿ ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ತಮ್ಮ ಇಲಾಖೆಯ/ಸರ್ಕಾರದ ಸಾಧನೆಗಳನ್ನು, ವೈಯಕ್ತಿಕ ಸಾಧನೆಗಳೆಂಬಂತೆ ಪ್ರದರ್ಶಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.
ಸರಕಾರಿ ಅಧಿಕಾರಿಗಳು ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವುದನ್ನು ಹೊರತುಪಡಿಸಿ, ಪತ್ರಿಕಾಗೋಷ್ಠಿ/ಪತ್ರಿಕಾ ಪ್ರಕಟಣೆ ಮೂಲಕ ಅನಪೇಕ್ಷಿತ ಹೇಳಿಕೆಗಳನ್ನು ನೀಡುವುದನ್ನು, ಕುಂದು ಕೊರತೆಗಳನ್ನು ವ್ಯಕ್ತಪಡಿಸಲು ಮಾಧ್ಯಮಗಳನ್ನು ಬಳಸುವುದಕ್ಕೆ ನಿಷೇಧ ಹೇರಲಾಗಿದೆ.
ಸಾಮಾಜಿಕ ಮಾಧ್ಯಮಗಳ ಮೂಲಕ ಇಲಾಖೆಯ/ಸರ್ಕಾರದ ಸಾಧನೆಗಳನ್ನು, ವೈಯಕ್ತಿಕ ಸಾಧನೆಗಳೆಂಬಂತೆ ಪ್ರದರ್ಶಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದ್ದು. ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪ್ರಸಾರ ಮಾಡಬೇಕಾದ ಸಂದರ್ಭದಲ್ಲಿ, ಸರ್ಕಾರದ/ಆಡಳಿತದ ಹೆಸರಿನಲ್ಲಿ ತೆರೆಯಲಾದ ಖಾತೆಗಳನ್ನು ಮಾತ್ರ ಬಳಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ತಮ್ಮ ಅಧಿಕೃತ ಸರಕಾರದ ಹೆಸರಿನ ಸಾಮಾಜಿಕ ಮಾಧ್ಯಮಗಳನ್ನು ಬಳಸಬೇಕೆಂದು ಹೇಳಿದೆ.