11:52 PM Friday18 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಅದೊಂದು ಫೋನ್ ಕರೆ ಮಾಜಿ ಸಿಎಂ ಶೆಟ್ಟರ್ ಅವರನ್ನು ರಾಹುಲ್ ಜತೆ ನಿಂತು ಫೋಟೋ ಕ್ಲಿಕ್ಕಿಸುವಂತೆ ಮಾಡಿತು!!

23/04/2023, 22:48

ಅಶೋಕ್ ಕಲ್ಲಡ್ಕ ಮಂಗಳೂರು

info.reporterkarnataka@gmail.com

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜತೆ ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳುತ್ತಾರೆಂದು ಮೊನ್ನೆ ಮೊನ್ನೆ ವರೆಗೂ ಯಾರಿಗೂ ಊಹಿಸಲು ಕೂಡ ಸಾಧ್ಯವಾಗಲಿಲ್ಲ. ಬಿಜೆಪಿಗರಿಗೆ ಬಿಡಿ, ಕಾಂಗ್ರೆಸಿಗರಿಗೂ ಇಂತಹದ್ದೊಂದು ಚಮತ್ಕಾರ ನಡೆಯುತ್ತದೆ ಎಂದು ಗೊತ್ತಿರಲಿಲ್ಲ. ಆದರೆ ಪವಾಡದ ರೀತಿಯಲ್ಲಿ ರಾಜ್ಯದಲ್ಲಿ ರಾಜಕೀಯ ವಿದ್ಯಮಾನ ನಡೆದು ಹೋಗಿದೆ.
ದಿಲ್ಲಿ ಬಿಜೆಪಿ ಹೈಕಮಾಂಡ್ ನಿಂದ ಬಂದ ಆ ಫೋನ್ ಕರೆ ಶೆಟ್ಟರ್ ಅವರ ರಾಜಕೀಯ ಬದುಕಿನ ದಿಕ್ಕನ್ನೇ ಬದಲಾಯಿಸಿ ಬಿಟ್ಟಿತು. ಹೈಕಮಾಂಡ್ ನಿಂದ ಬಂದ ಕರೆಯಲ್ಲಿ ಶೆಟ್ಟರ್ ಅವರಿಗೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಹೊಸಬರಿಗೆ ಅವಕಾಶ ನೀಡಬೇಕೆಂದು ತಿಳಿಸಲಾಯಿತು. ಇದು ಜಗದೀಶ್ ಶೆಟ್ಟರ್ ಅವರ ಹೃದಯದಲ್ಲಿ ಜ್ವಾಲಾಮುಖಿಯನ್ನೇ ಸೃಷ್ಟಿಸಿಬಿಟ್ಟಿತು. ಅದೇ ಜ್ವಾಲೆಯ ಕಿಡಿ ಶೆಟ್ಟರ್ ಅವರನ್ನು ತನ್ನ ರಾಜಕೀಯ ಜೀವನದುದ್ದಕ್ಕೂ ವಿರೋಧಿಸುತ್ತಲೇ ಬಂದ ಕಾಂಗ್ರೆಸ್ ನ ರಾಹುಲ್ ಗಾಂಧಿ ಅವರ ಜತೆ ನಿಂತು ಫೋಟೋ ಕ್ಲಿಕ್ಕಿಸುವಂತೆ ಮಾಡಿಯೇ ಬಿಟ್ಟಿತು.
ಬಿಜೆಪಿ ಮತ್ತು ಕಾಂಗ್ರೆಸ್ ಉತ್ತರ ಮತ್ತು ದಕ್ಷಿಣ ಧ್ರುವಗಳಿದ್ದಂತೆ. ಒಂದು ಹಿಂದುತ್ವ ಎಂದು ಹೇಳಿದರೆ, ಇನ್ನೊಂದು ಸೆಕ್ಯುಲರ್ ಎನ್ನುತ್ತದೆ.
ಇಲ್ಲಿ ಧ್ರುವೀಕರಣ ಎಂದಿಗೂ ಅಸಾಧ್ಯ. ಅದೇ ರೀತಿ ಸುಮಾರು 40 ವರ್ಷಗಳಿಂದ ಬಿಜೆಪಿಯಲ್ಲಿದ್ದ ಶೆಟ್ಟರ್ ಅವರು ಕಟ್ಟರ್ ಆರೆಸ್ಸೆಸ್ಸಿಗ. ಮಿತ ಭಾಷಿಯಾದ ಶೆಟ್ಟರ್ ಅನಾವಶ್ಯಕವಾಗಿ ಕಾಂಗ್ರೆಸ್ ಪಕ್ಷವನ್ನು ಟೀಕಿಸಿದವರಲ್ಲ. ಆದರೆ ತೀರಾ ಅಗತ್ಯ ಬಿದ್ದಾಗಲೆಲ್ಲ ಕಾಂಗ್ರೆಸ್ ಪಕ್ಷವನ್ನು ಹಿಗ್ಗಾಮುಗ್ಗಾ ಜಾಡಿಸುತ್ತಿದ್ದರು. ಕಾಂಗ್ರೆಸ್ ಐಸಿಯುನಲ್ಲಿದೆ ಎಂದು ಕೂಡ ಇತ್ತೀಚೆಗೆ ಲೇವಡಿ ಮಾಡಿದ್ದರು.

ಶೆಟ್ಟರ್ ಅವರಿಗೆ ತನ್ನ ಸ್ವಾಭಿಮಾನಕ್ಕೆ ಚ್ಯುತಿ ಬರುತ್ತದೆ ಎಂಬುದು ಗೊತ್ತಾದ ಕೂಡಲೇ ಬಿಜೆಪಿ ವಿರುದ್ಧ ಬಂಡಾಯ ಸಾರಿದ್ದಾರೆ. ಬಿಜೆಪಿ ಹೈಕಮಾಂಡಿನ ನಿಲುವನ್ನು ಧಿಕ್ಕರಿಸಿ ವಿರೋಧಿ ಪಾಳಯವನ್ನು ಸೇರಿಕೊಂಡಿದ್ದಾರೆ. ಹಾಗೆ ಬಾಗಲಕೋಟೆಯ ಕೂಡಲಸಂಗಮದಲ್ಲಿ ಭಾನುವಾರ ನಡೆದ ಬಸವೇಶ್ವರ ಜಯಂತಿ ಕಾರ್ಯಕ್ರಮಕ್ಕೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹುಬ್ಬಳ್ಳಿಗೆ ಆಗಮಿಸಿದ್ದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿ ಅವರನ್ನು ಬರಮಾಡಿಕೊಂಡ ಶೆಟ್ಟರ್ ಅವರು ರಾಹುಲ್ ಜತೆ ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾರೆ. ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಕೂಡ ಜತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು