1:45 PM Saturday14 - November 2026
ಬ್ರೇಕಿಂಗ್ ನ್ಯೂಸ್
ಮೆಟ್ರೋ ಅನುದಾನ ತಾರತಮ್ಯ ಆರೋಪಕ್ಕೆ ಪ್ರಧಾನಿ ನಯವಾದ ತಿರುಗೇಟು: ಈಗ ಸೆಂಚುರಿ ಬಾರಿಸಿದೆ… ಚಿಕ್ಕಮಗಳೂರು | ತರೀಕೆರೆ‌ ಬಳಿ ಮಣ್ಣಿನಗುಡ್ಡೆಗೆ ಬೈಕ್ ಡಿಕ್ಕಿ: ಪುತ್ರಿ ಸಾವು; ತಂದೆ… ಎಚ್​.ಡಿ.ಕುಮಾರಸ್ವಾಮಿ ಆರೋಪಕ್ಕೆ ಹಾಸನ ಜಿಲ್ಲಾಧಿಕಾರಿ ತಿರುಗೇಟು: ಪಿಎ ವಾಟ್ಸಪ್​ ಚಾಟ್​ ಬಗ್ಗೆ ಡಿಸಿ… ಮುಖ್ಯಮಂತ್ರಿ ಡಿಕೆಶಿ ಹಾಸನಾಂಬೆ ದರ್ಶನ ಪಡೆಯುತ್ತಿರುವ ವೀಡಿಯೋಗೆ ಭಕ್ತರಿಂದ ಚಪ್ಪಲಿ ಎಸೆತ: ಸರತಿ… ಕೊಡಗಿನ ಜನತೆಗೆ ಬೆಲೆ ಏರಿಕೆ ನಡುವೆಯೇ ಮತ್ತೊಂದು ಶಾಕ್: ಖಾಸಗಿ ಬಸ್ ದರ… Bangalore | ಹಾಕಿ ದಿಗ್ಗಜ ಕೊಡಗಿನ ಎಂ.ಎಂ. ಸೋಮಯ್ಯ ಮನೆಯಲ್ಲಿದ್ದ ಒಲಿಂಪಿಕ್ಸ್ ಚಿನ್ನದ… ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ

ಇತ್ತೀಚಿನ ಸುದ್ದಿ

ಯಮದೂತನಾದ ಅಡ್ವೇಂಚರ್ ಬೋಟ್: ಲೈಫ್ ಜಾಕೆಟ್ ಇದ್ದರೂ ಉಳಿಯಲಿಲ್ಲ ದಂಪತಿಯ ಪ್ರಾಣ

14/11/2026, 13:43

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಇದನ್ನೇ ವಿಧಿಯ ಕ್ರೂರ ಅಟ್ಟಹಾಸ ಅನ್ನುವುದು. ಈ ದಂಪತಿ ಇಬ್ಬರು ಮಕ್ಕಳೊಂದಿಗೆ ದೂರದ ಗುಜರಾತ್ ನಿಂದ ಕೊಡಗಿನ ಪ್ರವಾಸಕ್ಕೆ ಬಂದವರು.ಇಲ್ಲಿ ಕಳೆದ ಉಲ್ಲಾಸದ ನೆನಪಿನೊಂದಿಗೆ ಮರಳಿ ಹೋಗಬೇಕಾಗಿತ್ತು. ಆದರೆ ಲೈಫ್ ಜಾಕೆಟ್ ಧರಿಸಿದ್ದರೂ, ಬೋಟ್ ಮಗುಚಿ ಜಲರಾಶಿಯೊಳಗೆ ಬಿದ್ದಾಗ ಮೇಲಕ್ಕೆ ಬರಲಾಗದೆ ಮರಳಿ ಬಾರದ ಊರಿಗೆ ಪಯಣಿಸಿದ್ದಾರೆ.
ಗುಜರಾತ್ ಮೂಲದ ಧರ್ಮೇಶ್ (50) ಹಾಗೂ ಅವರ ಪತ್ನಿ ನಿಮ್ಮಿ (48) ದಂಪತಿಯೇ ಈ ರೀತಿ ಜೀವ ತೆತ್ತಿರುವ ನತದೃಷ್ಟರು. ಅವರೊಂದಿಗೆ ಇದ್ದ ಇಬ್ಬರು ಮಕ್ಕಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

*ನೀರಿನಲ್ಲಿ ತಿರುವು ತೆಗೆದುಕೊಳ್ಳುವಾಗ ಕಾದುಕುಳಿತಿದ್ದ ಜವರಾಯ:*
ಗುಜರಾತ್‌ನಿಂದ ಕೊಡಗು ಪ್ರವಾಸಕ್ಕೆ ಬಂದಿದ್ದ ಧರ್ಮೇಶ್, ಪತ್ನಿ ನಿಮ್ಮಿ ಹಾಗೂ ಇಬ್ಬರು ಮಕ್ಕಳು ಹಾರಂಗಿ ಹಿನ್ನೀರಿನಲ್ಲಿರುವ ‘ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್’ ನಲ್ಲಿ ಬೋಟಿಂಗ್ ಆಟವಾಡುತ್ತಿದ್ದರು. ಬೋಟ್ ನೀರಿನಲ್ಲಿ ವೇಗವಾಗಿ ತಿರುವು ತೆಗೆದುಕೊಳ್ಳುತ್ತಿದ್ದಾಗ ನಿಯಂತ್ರಣ ತಪ್ಪಿ ಏಕಾಏಕಿ ಮಗುಚಿ ಬಿದ್ದಿದೆ. ಪರಿಣಾಮ ಬೋಟ್‌ನಲ್ಲಿದ್ದ ನಾಲ್ವರೂ ಹಿನ್ನೀರಿಗೆ ಬಿದ್ದಿದ್ದಾರೆ.
ಬೋಟಿಂಗ್ ಮಾಡುವಾಗ ಸುರಕ್ಷತಾ ದೃಷ್ಟಿಯಿಂದ ನಾಲ್ವರೂ ಲೈಫ್ ಜಾಕೆಟ್ ಧರಿಸಿದ್ದರು. ಬೋಟ್ ಮಗುಚಿದ ತಕ್ಷಣ ನೀರಿನಲ್ಲಿ ತೇಲುತ್ತಿದ್ದ ಇಬ್ಬರು ಮಕ್ಕಳನ್ನು ಸ್ಥಳೀಯರು ಹಾಗೂ ಸಿಬ್ಬಂದಿ ತಕ್ಷಣವೇ ರಕ್ಷಿಸಿ ದಡಕ್ಕೆ ಕರೆತಂದಿದ್ದಾರೆ. ಆದರೆ, ದುರದೃಷ್ಟವಶಾತ್ ಪತಿ ಧರ್ಮೇಶ್ ಮತ್ತು ಪತ್ನಿ ನಿಮ್ಮಿ ಅವರು ಪಲ್ಟಿಯಾದ ಬೋಟ್‌ನ ಅಡಿಯಲ್ಲಿ ಸಿಲುಕಿಕೊಂಡಿದ್ದರಿಂದ ಮೇಲೆ ಬರಲಾಗದೆ ನೀರಿನಲ್ಲಿ ಉಸಿರುಗಟ್ಟಿ ಜೀವ ಚೆಲ್ಲಿದ್ದಾರೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ನೀರಿನಲ್ಲಿ ಮುಳುಗಿದ್ದ ದಂಪತಿಯ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರಕ್ಕೆ ರವಾನಿಸಲಾಯಿತು. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಹಾಗೂ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು