7:16 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಅಧ್ಯಕ್ಷರಾಗಲು ಪ್ಯಾನ್–ಇಂಡಿಯಾ ವರ್ಚಸ್ಸು ಹೊಂದಿರುವ ರಾಹುಲ್ ಗಾಂಧಿ ಮಾತ್ರ ಅರ್ಹರು: ಖರ್ಗೆ

27/08/2022, 19:05

ಬೆಂಗಳೂರು(reporterkarnataka.com): ರಾಹುಲ್ ಗಾಂಧಿಯಂತೆ ಪ್ಯಾನ್–ಇಂಡಿಯಾ ವರ್ಚಸ್ಸು ಹೊಂದಿರುವವರು ಬೇರೆ ಯಾರೂ ಇಲ್ಲ. ಆದ್ದರಿಂದ ಅವರನ್ನೇ ಪುನಃ ಕಾಂಗ್ರೆಸ್ ಅಧ್ಯಕ್ಷರಾಗುವಂತೆ ಒತ್ತಾಯಿಸಲಾಗುವುದು ಎಂದು ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಪಕ್ಷದ ಮತ್ತು ದೇಶದ ಹಿತಕ್ಕಾಗಿ ಮತ್ತು ಆರ್ ಎಸ್ ಎಸ್ –ಬಿಜೆಪಿ ವಿರುದ್ಧದ ಹೋರಾಟಕ್ಕಾಗಿ ಅಧಿಕಾರ ವಹಿಸಿಕೊಳ್ಳುವಂತೆ ಅವರ ಬಳಿ ವಿನಂತಿಸಲಾಗುವುದು ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನುಡಿದರು.

ಪಕ್ಷವನ್ನು ಮುನ್ನಡೆಸುವವರು ದೇಶಾದ್ಯಂತ ಪರಿಚಿತರಾಗಿರಬೇಕು. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ, ಪಶ್ಚಿಮ ಬಂಗಾಳದಿಂದ ಗುಜರಾತ್ವರೆಗೆ ಬೆಂಬಲ ಹೊಂದಿರಬೇಕು. ಪಕ್ಷದಲ್ಲಿ ಸಂಪೂರ್ಣವಾದ ಮನ್ನಣೆ ಇರಬೇಕು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು