5:12 PM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಆಧ್ಯಾತ್ಮ ಚಿಂತನೆಗೆ ಉತ್ತಮ ಪುಸ್ತಕಗಳ ಓದುವುದು ಅಗತ್ಯ: ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ

11/03/2024, 20:04

ಬಂಟ್ವಾಳ(reporterkarnataka.com): ಶರೀರಕ್ಕೆ ವಯಸ್ಸಾಗುವುದು ಸಹಜ. ಆದರೆ ಆತ್ಮಬೋಧೆ ಇದ್ದಾಗ ಎಲ್ಲರ ಮನಸ್ಸು ದೃಢವಾಗಿರುತ್ತದೆ. ಹಿರಿಯರು ಒಂದೆಡೆ ಸೇರಿದಾಗ ಪ್ರಾಪಂಚಿಕ ವಿಚಾರಗಳ ಬಗ್ಗೆ ಮಾತ್ರ ಚರ್ಚಿಸದೆ ಭಗವಂತನ ನಾಮಸ್ಮರಣೆ ಮಾಡಬೇಕು. ಜೊತೆಗೆ ಆಧ್ಯಾತ್ಮಿಕ ಚಿಂತನೆಗಾಗಿ ಉತ್ತಮ ಪುಸ್ತಕಗಳನ್ನು ಓದಬೇಕು. ಇದರಿಂದ ಹಿರಿಯರು ಮಾನಸಿಕವಾಗಿ ಸದೃಢವಾಗಲು ಸಾಧ್ಯವೆಂದು ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ ಹೇಳಿದರು.
ಪೊಳಲಿಯ ಶ್ರೀ ರಾಮಕೃಷ್ಣ ತಪೋವನದ ಸಭಾಭವನದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಕೇಂದ್ರ ಸಮಿತಿಯ ಸಭೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ ಕಯ್ಯಾರು ನಾರಾಯಣ ಭಟ್ ಪ್ರತಿಷ್ಠಾನದ ಕಾರ್ಯ ಯೋಜನೆಗಳನ್ನು ಕಾರ್ಯಗತಗೊಳಿಸುವುದರೊಂದಿಗೆ ವಿವಿಧೋದ್ದೇಶ ಸಹಕಾರಿ ಸಂಘ ಆರಂಭಿಸಲು ಸದಸ್ಯರ ಬೆಂಬಲವು ಅಗತ್ಯವೆಂದು ತಿಳಿಸಿದರು.
ಪಿ.ವೆಂಕಟೇಶ ನಾವುಡ ಮತ್ತು ಯಶವಂತ ಪೊಳಲಿ ಮಾತನಾಡಿ, ಪ್ರತಿಷ್ಠಾನದ ಕಾರ್ಯಕ್ರಮಗಳಿಗೆ ಸಹಕಾರ ನೀಡುವುದಾಗಿ ತಿಳಿಸಿದರು.
ಪ್ರತಿಷ್ಠಾನದ ಉಪಾಧ್ಯಕ್ಷರಾದ ಎಂ. ಜಯರಾಮ ಭಂಡಾರಿ ಧರ್ಮಸ್ಥಳ, ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಸೀತಾರಾಮ ಶೆಟ್ಟಿ ಉಜಿರೆ , ಗಣೇಶ್ ಭಟ್ ಕುತ್ರೊಟ್ಟು , ಸೀತಾರಾಮ ಶೆಟ್ಟಿ ,ಅನಾರು ಕೃಷ್ಣಶರ್ಮ, ರಾಜಮಣಿ ರಾಮಕುಂಜ, ಭಾರತಿ ರಾಮಕುಂಜ, ಕೆ .ಉದಯ ಶಂಕರ್ ರೈ ಪುಣಚ, ಕಸ್ತೂರಿ ಲೋಕೇಶ ಹೆಗ್ದೆ,ಚಂದ್ರಶೇಖರ ಆಳ್ವ ಪಡುಮಲೆ, ಕೆ.ರಾಮಕೃಷ್ಣ ನಾಯಕ್ ಉಪಸ್ಥಿತರಿದ್ದರು.
ಪ್ರತಿಷ್ಠಾನದ ಸಹ ಸಂಚಾಲಕ ಭಾಸ್ಕರ್ ಬಾರ್ಯ ಸ್ವಾಗತಿಸಿದರು. ಉಪಾಧ್ಯಕ್ಷರಾದ ಲೋಕೇಶ್ ಹೆಗ್ಡೆ ಪುತ್ತೂರು ವಂದಿಸಿದರು. ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು