5:18 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಅಧ್ಯಯನ ಹಾಗೂ ತಾದ್ಯಾತ್ಮಕತೆ ಇಲ್ಲದೆ ಯಶಸ್ಸು ಅಸಾಧ್ಯ: ಸಾಹಿತಿ ತುರುವೇಕೆರೆ ಪ್ರಸಾದ್

03/09/2023, 12:22

ಮಂಗಳೂರು(reporterkarnataka.com): ಸಾಹಿತ್ಯ, ಕಿರುತೆರೆ ಮತ್ತು ಸಿನಿಮಾರಂಗದ ಬರವಣಿಗೆ ಕ್ಷೇತ್ರದಲ್ಲಿ ನಿರಂತರ ಅಧ್ಯಯನ ಹಾಗೂ ತಾದ್ಯಾತ್ಮಕತೆ ಇಲ್ಲದೆ ಯಶಸ್ಸು ಖಂಡಿತ ಅಸಾಧ್ಯ. ಹಾಗಾಗಿ ವಿಪುಲ ಅವಕಾಶ ಇರುವ ಇದಕ್ಕೆ ಪಾದಾರ್ಪಣೆ ಮಾಡುವ ಯುವ ಜನತೆ ಇದನ್ನು ಸ್ಪಷ್ಟ ಮನಗಂಡು ಮುನ್ನಡೆಯಬೇಕೆಂದು ಹಿರಿಯ ಸಾಹಿತಿ ತುರುವೇಕೆರೆ ಪ್ರಸಾದ್ ಹೇಳಿದರು.
ಅವರು ಮಂಗಳೂರಿನ ಕಲ್ಲಚ್ಚು ಪ್ರಕಾಶನದ 14ನೇಯ ಆವೃತ್ತಿಯ 2023ರ ಪ್ರತಿಷ್ಠಿತ “ಕಲ್ಲಚ್ಚು ಪ್ರಶಸ್ತಿ” ಸ್ವೀಕರಿಸಿ, ಕಿರುತೆರೆ ಚಲನಚಿತ್ರ ರಂಗದ ಬರವಣಿಗೆ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾಹಿತ್ಯದ ಮೂಲಮಂತ್ರವಾಗಿರುವ ಕನ್ನಡ ಶಾಲೆಗಳನ್ನು ಉಳಿಸುವ ಕೈಂಕರ್ಯವನ್ನು ನಾವು ಕಟಿಬದ್ದರಾಗಿ ಮಾಡುವಂತೆ ಕರೆ ನೀಡಿದರು.

ಗೋವಿಂದದಾಸ ಕಾಲೇಜು ಪ್ರಾಂಶುಪಾಲ ಪ್ರೊ. ಪಿ. ಕೃಷ್ಣಮೂರ್ತಿ ಅಭಿನಂದನ ಮಾತುಗಳಾನ್ನಡಿದರು. ಈ ಸಂದರ್ಭದಲ್ಲಿ “ಮೊಹಬ್ಬತ್ ಕಾ ದಾಗ “ಕಥಾಸಂಕಲನ ಬಿಡುಗಡೆಗೊಂಡಿತು. ವಿಶ್ರಾಂತ ಪ್ರಾಂಶುಪಾಲ ಡಾ. ಸತ್ಯನಾರಾಯಣ ಮಲ್ಲಿಪಟ್ಟಣ. ಡಾ. ವಿಜಯಲಕ್ಷ್ಮಿ ನೇರಳಕೋಡಿ, ಶ್ರೀನಿಧಿ ಆರ್. ಎಸ್., ಮೌಶೀರ್ ಅಹಮದ್ ಸಾಮಣಿಗೆ, ಡಾ. ಮೀನಾಕ್ಷಿ ರಾಮಚಂದ್ರ, ಪೊ. ಡಾ. ಝೀಟಾ ಲೋಬೊ, ಲೇಖಕ ಎನ್. ವಿ. ಪೌಲೋಸ್, ಮಾರ್ಷಲ್ ಡಿಸೋಜ, ಕಲಾವಿದರಾದ ವಿಜಯಕುಮಾರ್ ಕೊಡಿಯಲ್ ಬೈಲ್, ರಾಜೇಂದ್ರ ಕೇದಿಗೆ ಮೊದಲಾದವರು ಉಪಸ್ಥಿತರಿದ್ದರು.
ಮಹೇಶ ಆರ್. ನಾಯಕ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಯುವಚಿತ್ರ ಕಲಾವಿದೆ ಬೆಂಗಳೂರಿನ ಶಾರ್ವೀ ನಾೃಕ್ ಅವರನ್ನು ಅಭಿನಂದಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು