4:43 PM Wednesday24 - December 2025
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ

ಇತ್ತೀಚಿನ ಸುದ್ದಿ

ಅಫ್ಘಾನಿಸ್ತಾನ ನಂಗಾಹರ್ ಪ್ರದೇಶದಲ್ಲಿ ಐಸಿಎಸ್‌ಕೆ ಉಗ್ರರ ಮೇಲೆ ಅಮೆರಿಕಾ ಏರ್ ಸ್ಟ್ರೈಕ್

28/08/2021, 13:42

Reporterkarnataka.com
ಅಫ್ಘಾನಿಸ್ತಾನ ನಂಗಾಹರ್ ಪ್ರಾಂತ್ಯದ ಮೇಲೆ ಅಮೆರಿಕಾ ಏರ್ ಸ್ಟ್ರೈಕ್ ನಡೆಸಿರುವ ಕುರಿತು ಮಾಹಿತಿ ಸಿಕ್ಕಿದೆ. ಆತ್ಮಾಹುತಿ ಬಾಂಬ್ ಸ್ಪೋಟ ನಡೆದ 36 ಗಂಟೆಗಳಲ್ಲಿ ಉಗ್ರರ ಮೇಲೆ ಪ್ರತೀಕಾರದ ದಾಳಿಯಾಗಿದೆ.

ಮೊನ್ನೆ ಕಾಬೂಲ್ ಏರ್​ಪೋರ್ಟ್ ಮೇಲೆ ದಾಳಿ ನಡೆಸಿದ್ದ ಐಸಿಎಸ್ ಖೋರಾಸನ ಉಗ್ರರನ್ನು ಮಟ್ಟ ಹಾಕುತ್ತೇವೆ ಎಂದು ಶಪಥ ಮಾಡಿದ್ದ ಅಮೆರಿಕಾ 36 ಗಂಟೆಗಳಲ್ಲಿ ದಾಳಿ ನಡೆಸಿ ಸೇಡು ತೀರಿಸಿಕೊಂಡಂತಾಗಿದೆ.

ಏರ್​ಪೋರ್ಟ್ ಸಮೀಪ ಹೋಗದಂತೆ ತಾಲಿಬಾನ್ ತಡೆಯೊಡ್ಡಿದ್ದು, ಕಾಬೂಲ್ ಏರ್​ಪೋರ್ಟ್ ಗೇಟ್ ಬಳಿ ಹೋಗದಂತೆ ಆಮೆರಿಕಾದ ನಾಗರಿಕರಿಗೆ ಎಚ್ಚರಿಕೆಯನ್ನೂ ನೀಡಲಾಗಿದೆ. ಬೇರೆ ಬೇರೆ ದೇಶಗಳ ಗುಪ್ತಚರ ಇಲಾಖೆಗಳು ಏರ್​ಪೋರ್ಟ್ ಬಳಿ ದೊಡ್ಡ ಸ್ಪೋಟ ನಡೆಸಲು ಐಸಿಎಸ್ ಸಂಚು ಹೂಡಿದೆ ಎಂಬ ಮಾಹಿತಿ ನೀಡಿರುವ ಕಾರಣ ಈ ತೆರನಾದ ಬಿಗಿಭದ್ರತೆ ಕೈಗೊಳ್ಳಲಾಗಿದೆ.

ಸ್ಫೊಟ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಸಂಘಟನೆಗೆ ನಿನ್ನೆಯಷ್ಟೇ ಖಡಕ್​ ಎಚ್ಚರಿಕೆ ನೀಡಿದ್ದ ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಅಮೆರಿಕ ವಿರುದ್ಧ ದಾಳಿ ಮಾಡಿದವರು ಎಚ್ಚರಿಕೆಯಿಂದ ಇರಿ. ನಮ್ಮ ವಿರುದ್ಧ ದಾಳಿ ಮಾಡಿದವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ನಿಮ್ಮನ್ನು ನಾವು ಎಂದಿಗೂ ಮರೆಯುವುದಿಲ್ಲ. ನೀವು ಎಲ್ಲೇ ಅವಿತಿದ್ದರೂ ಹೆಕ್ಕಿ ಹೆಕ್ಕಿ ಕೊಲ್ಲುತ್ತೇವೆ ಎಂದು ಹೇಳಿದ್ದರು.

ಉಗ್ರರ ಇಂತಹ ದಾಳಿಗಳಿಂದ ಅಮೆರಿಕ ಕಂಗೆಡುವುದಿಲ್ಲ. ಜನರನ್ನು ಸ್ಥಳಾಂತರ ಮಾಡುವುದನ್ನೂ ನಿಲ್ಲಿಸುವುದಿಲ್ಲ. ನೀವು ಏನೇ ಮಾಡಿದರೂ ನಾವು ಜನರನ್ನು ಸ್ಥಳಾಂತರ ಮಾಡಿಯೇ ತೀರುತ್ತೇವೆ. ಈಗಾಗಲೇ ಐಸಿಸ್-ಕೆ ವಿರುದ್ಧ ಕಾರ್ಯಾಚರಣೆಗೆ ಯೋಜನೆ ರೂಪಿಸಲು ಸೂಚಿಸಲಾಗಿದೆ. ನಾವು ಎಲ್ಲಿ ಹೊಡೆಯಬೇಕು, ಹೇಗೆ ಹೊಡೆಯಬೇಕು, ಎಷ್ಟೊತ್ತಿಗೆ ಹೊಡೆಯಬೇಕೋ ಅಷ್ಟೊತ್ತಿಗೆ ಹೊಡೆಯುತ್ತೇವೆ. ನಮ್ಮ ವಿರುದ್ಧ ಐಸಿಸ್​ ಉಗ್ರರು ಗೆಲುವು ಸಾಧಿಸುವುದಕ್ಕೆ ಸಾಧ್ಯವೇ ಇಲ್ಲ ಎಂದು ಕಿಡಿಕಾರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು