10:14 PM Sunday15 - March 2026
ಬ್ರೇಕಿಂಗ್ ನ್ಯೂಸ್
ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು

ಇತ್ತೀಚಿನ ಸುದ್ದಿ

Indo- Pak | ಪಾಕ್ ವಶದಲ್ಲಿದ್ದ ಭಾರತೀಯ ಯೋಧ ಪಿ.ಕೆ. ಶಾ ಬಿಡುಗಡೆ: 21 ದಿನಗಳ ಬಳಿಕ ಸ್ವದೇಶಕ್ಕೆ ವಾಪಾಸ್ !

14/05/2025, 20:56

ವಾಘಾ(reporterkarnataka.com): ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಿಸಿದ ಬಳಿಕ ಮಹತ್ವದ ಬೆಳವಣಿಗೆ ನಡೆದಿದ್ದು, ಪಾಕಿಸ್ತಾನದ ತನ್ನ ವಶದಲ್ಲಿರುವ ಬಿಎಸ್ ಎಫ್ ಗೆ ಸೇರಿದ ಭಾರತೀಯ ಯೋಧ ಪಿ.ಕೆ. ಶಾ ಅವರನ್ನು ಬುಧವಾರ ಬೆಳಗ್ಗೆ ಬಿಡುಗಡೆ ಮಾಡಿದೆ.
ಯೋಧ ಪಿ.ಕೆ ಶಾ ಅವರನ್ನು ಇಂದು ಬೆಳಗ್ಗೆ 10.30ಕ್ಕೆ ಭಾರತಕ್ಕೆ ಹಸ್ತಾಂತರ ಮಾಡಲಾಯಿತು. 21 ದಿನಗಳ ಹಿಂದೆ ಪಂಜಾಬ್​ನ ಫಿರೋಜ್​ಪುರ ಗಡಿಯಲ್ಲಿ ಪಾಕಿಸ್ತಾನ, ಭಾರತೀಯ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ವಶಕ್ಕೆ ಪಡೆದಿತ್ತು. ಕಳೆದ ಏಪ್ರಿಲ್ 23ರಂದು ಭೂ ಸೇನೆಯ 182ನೇ ಬೆಟಾಲಿಯನ್‌ ಯೋಧ ಪಿ.ಕೆ. ಶಾ ಅವರು ಆಕಸ್ಮಿಕವಾಗಿ ಭಾರತದ ಗಡಿಯನ್ನು ದಾಟಿ, ಪಾಕಿಸ್ತಾನದ ಗಡಿ ರೇಖೆಯನ್ನು ಪ್ರವೇಶ ಮಾಡಿದ್ದರು. ಗಡಿ ದಾಟಿದ್ದ ತಪ್ಪಿಗೆ ಪಿ.ಕೆ. ಶಾ ಅವರನ್ನು ಪಾಕಿಸ್ತಾನದ ರೇಂಜರ್ಸ್ ಬಂಧಿಸಿದ್ದರು. ಭಾರತ- ಪಾಕ್ ಸಂಘರ್ಷ ನಡೆದು ಕದನ ವಿರಾಮದ ಬಳಿಕ ಪಾಕಿಸ್ತಾನ ಭಾರತದ ಷರತ್ತುಗಳಿಗೆ ಒಪ್ಪಿಕೊಂಡಿದೆ. ಹೀಗಾಗಿ ಅಟ್ಟಾರಿ ವಾಘಾ ಗಡಿ ಮೂಲಕ ಯೋಧ ಪಿ.ಕೆ. ಶಾ ಅವರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಿದೆ.
ಯೋಧ ಪಿ.ಕೆ. ಶಾ ಅವರನ್ನು ಪ್ರೋಟೋಕಾಲ್ ಪ್ರಕಾರ ಭಾರತೀಯ ಸೇನೆಗೆ ಹಸ್ತಾಂತರ ಮಾಡಲಾಗಿದೆ. 21 ದಿನಗಳ ಕಾಲ ಪಾಕಿಸ್ತಾನದ ವಶದಲ್ಲಿದ್ದ ಪಿ.ಕೆ. ಶಾ ಅವರು ಸದ್ಯ ಸೇನಾ ಕಣ್ಗಾವಲಿನಲ್ಲಿದ್ದಾರೆ. ಭಾರತೀಯ ಯೋಧ ವೈರಿ ರಾಷ್ಟ್ರದಿಂದ ಸುರಕ್ಷಿತವಾಗಿ ಬಿಡುಗಡೆಯಾಗಿರೋದು ಹೆಮ್ಮೆಯ ವಿಚಾರವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು