10:23 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಅಗಲಿದ ಪತ್ರಕರ್ತ ಗುಡಿಹಳ್ಳಿ ನಾಗರಾಜ: ಕೂಡ್ಲಿಗಿ ಪತ್ರಕರ್ತರಿಂದ ಸಂತಾಪ, ನುಡಿನಮನ ಸಲ್ಲಿಕೆ

27/08/2021, 11:16

ವಿ.ಜಿ. ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ಹಿರಿಯ ಪತ್ರಕರ್ತ, ಬಂಡಾಯ ಸಾಹಿತ್ಯ ಸಂಘಟನೆಯ ರಾಜ್ಯ ಸಂಚಾಲಕ ಹಾಗೂ ಕನ್ನಡ ಸಂಸ್ಕೃತಿ ಸಾಹಿತ್ಯ ಲೋಕದೊಂದಿಗೆ ಗುರುತಿಸಿಕೊಂಡಿದ್ದ ಗುಡಿಹಳ್ಳಿ ನಾಗರಾಜ ಗುರುವಾರ ನಿಧನಕ್ಕೆ ಕರ್ನಾಟ ಪತ್ರಕರ್ತರ ಸಂಘದ ಕೂಡ್ಲಿಗಿ ಘಟಕದ ಪದಾಧಿಕಾರಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

ಅವರು ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ರಾಜ್ಯೋತ್ಸವ ಪ್ರಶಸ್ತಿ, ಕೆಂಪೇಗೌಡ, ಮುರುಘ ರಾಜೇಂದ್ರ, ನಾಟಕ ಅಕಾಡೆಮಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಕರ್ನಾಟಕದ ವೃತ್ತಿ ರಂಗಭೂಮಿಯ ಬಗ್ಗೆ ಅಳವಾದ ಜ್ಞಾನ ಹೊಂದಿದ್ದ, ಹಲವು ನಟ-ನಟಿಯರ ಜೀವನಚರಿತ್ರೆಗಳನ್ನು ಬರೆದಿದ್ದ ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ್ ಬೆಂಗಳೂರಿನಲ್ಲಿ  ಗುರುವಾರ ನಿಧನರಾಗಿದ್ದಾರೆ.

ಅವರಿಗೆ 67 ವರ್ಷ ವಯಸಾಗಿತ್ತು ಹರಪನಹಳ್ಳಿ ತಾಲ್ಲೂಕು ಗುಡಿಹಳ್ಳಿ ಅವರ ಹುಟ್ಟೂರು. ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಎಂಎ ಇಂಗ್ಲಿಷ್ ಪದವಿ ಪಡೆದು, ಹರಪನಹಳ್ಳಿಯಲ್ಲಿ ಮೂರು ವರ್ಷ (1980-83) ಉಪನ್ಯಾಸಕರಾಗಿದ್ದರು.

1983ರಲ್ಲಿ ಪ್ರಜಾವಾಣಿ ಸೇರಿ ಸುಮಾರು 31 ವರ್ಷ ಕಾಲ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು. ಎಂ.ಪಿ.ಪ್ರಕಾಶ ಸೇರಿದಂತೆ ರಾಜ್ಯದ ಪ್ರಭಾವಿಗಳ ಆತ್ಮೀಯ ಒಡನಾಡಿಗಳಾಗಿದ್ದರು. ಕರ್ನಾಟಕ ರಂಗಭೂಮಿಯ ಬಗ್ಗೆ ಅಪಾರ ಪ್ರೀತಿ ಮತ್ತು ಅಭಿಮಾನಗಳನ್ನು ಗುಡಿಹಳ್ಳಿ ನಾಗರಾಜ ಹೊಂದಿದ್ದರು.

ಶ್ರದ್ಧಾಂಜಲಿ ಅರ್ಪಣೆ: ಗುಡಿಹಳ್ಳಿ ನಾಗರಾಜರವರ ಅಗಲಿಕೆ ಹಿನ್ನಲೆಯಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ಕೂಡ್ಲಿಗಿ ಘಟಕದ ಪದಾಧಿಕಾರಿಗಳು ಶ್ರದ್ಧಾಂಜಲಿ ಅರ್ಪಿಸಿದ್ದಾರೆ,

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬೆಳ್ಳಗಟ್ಟೆ ಕೃಷ್ಣಪ್ಪ ನುಡಿನಮನ ಅರ್ಪಿಸಿದರು.ಗುಡಿಹಳ್ಳಿ ನಾಗರಾಜರ ಅಗಲಿಕೆ ಪತ್ರಕರ್ತರ ಸಂಘಕ್ಕೆ ಅಘಾತವನ್ನುಂಟು ಮಾಡಿದೆ.

ಅವರು ಹದಿನೈದಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ರಂಗನೇಪಥ್ಯ ಎಂಬ ಮಾಸಪತ್ರಿಕೆ ಪ್ರಕಟಿಸುತ್ತಿದ್ದರು, ನಾಲ್ಕು ರಂಗತಂಡಗಳ ನೇತೃತ್ವವನ್ನೂ ವಹಿಸಿಕೊಂಡಿದ್ದರು.

ರಂಗನಾಟಕ ಪ್ರಯೋಗ ಸಾರ್ಥಕತೆ, ಮಾಲತಿಶ್ರೀ ಮೈಸೂರು ಆತ್ಮಕತೆ (ತೆರೆ ಸರಿದಾಗ),ಮರಿಯಮ್ಮನಹಳ್ಳಿ ಡಾ.ನಾಗರತ್ನಮ್ಮ ಆತ್ಮಕತೆ (ರಂಗಸಿರಿ),ಗುಬ್ಬಿ ವೀರಣ್ಣ, ಡಾ.ಲಕ್ಷ್ಮಣದಾಸ್,ಗಾನಕೋಗಿಲೆ, ಅನುಪಮ ಅಭಿನೇತ್ರಿ ಸುಭದ್ರಮ್ಮ ಮನ್ಸೂರು,ಮೇಕಪ್‍ಮನ್ ಸುಬ್ಬಣ್ಣ,ರಂಗನೇವರಿಕೆ, ರಂಗಸಂದರ್ಶನ,ರಂಗದಿಗ್ಗಜರು, ಚಿಂದೋಡಿ ಲೀಲಾ,ಕಲಾಗ್ರಾಮ, ಜನಪರ ರಂಗಭೂಮಿ,ರಂಗಸೆಲೆ ಸೇರಿದಂತೆ ಹಲವು ಪುಸ್ತಕಗಳನ್ನು ಬರೆದಿದ್ದಾರೆ.

ಅವರ ಅಗಲಿಕೆಯಿಂದ ಕನ್ನಡದ ಸಾರಸ್ವತ ಲೋಕಕ್ಕೆ,ವೃತ್ತಿ ರಂಗಭೂಮಿ,ಪತ್ರಿಕಾ ರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.

ದೇವರು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಎಂದು  ಗುಡಿಹಳ್ಳಿ ನಾಗರಾಜರಿಗೆ ಅರ್ಪಿಸಿದ್ದಾರೆ,ಈ ಸಂದರ್ಭದಲ್ಲಿ ಸಂಘದ ಹಿರಿಯ ಪತ್ರಕರ್ತರು ಹಾಗೂ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು