1:51 PM Tuesday8 - July 2025
ಬ್ರೇಕಿಂಗ್ ನ್ಯೂಸ್
ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ…

ಇತ್ತೀಚಿನ ಸುದ್ದಿ

ಅಗತ್ಯ ಮೂಲ ಸೌಕರ್ಯಗಳ ನಿರ್ಮಾಣಕ್ಕೆ ರಾಜ್ಯ ಸರಕಾರ ಸದಾ ಸಿದ್ದ: ಶಾಸಕ ವೇದವ್ಯಾಸ ಕಾಮತ್

20/01/2023, 22:18

ಮಂಗಳೂರು(reporterkarnataka.com): ರೈತರ ಅಭ್ಯುದಯಕ್ಕಾಗಿ ಕೃಷಿ ಇಲಾಖೆಯಿಂದ ಸರ್ಕಾರ ರೂಪಿಸುವ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಅಗತ್ಯವಿರುವ ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸದಾ ಸಿದ್ಧವಿದ್ದು, ಆ ದಿಸೆಯಲ್ಲಿ ಜಿಲ್ಲೆಯ ಸಮಗ್ರ ಕೃಷಿ ಪದ್ದತಿ ಉತ್ಕøಷ್ಟತಾ ಕೇಂದ್ರವನ್ನು ನಿರ್ಮಿಸಲಾಗುತ್ತಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.

ಅವರು ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಹಾಗೂ ನಬಾರ್ಡ್ ವತಿಯಿಂದ ಪಡೀಲು ಸಮೀಪದ ಅಳಪೆ ಗ್ರಾಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಕೃಷಿ ಪದ್ಧತಿ ಉತ್ಕøಷ್ಟತಾ ಕೇಂದ್ರದ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಮಂಗಳೂರಿನ ಹೃದಯ ಭಾಗದಲ್ಲಿ ಅಂದಾಜು 13,000 ಚದರ ಅಡಿಯಲ್ಲಿ 3.88 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಬೃಹತ್ ಸುಸಜ್ಜಿತ ಕಟ್ಟಡವನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದ ಅವರು, ಈ ಕಟ್ಟಡ ನಿರ್ಮಾಣದಿಂದ ಜಿಲ್ಲೆಯ ಕೃಷಿಕರಿಗೆ ಸಾಕಷ್ಟು ಅನುಕೂಲಗಳಾಗಲಿವೆ, ಜಿಲ್ಲೆಯಲ್ಲಿ ಸಾಕಷ್ಟು ಸಣ್ಣ ಸಣ್ಣ ಕೃಷಿಕರಿದ್ದು ಅವರ ಕೃಷಿ ಚಟುವಟಿಕೆಗಳಿಗೆ ಪೂರಕ ಕ್ರಮಗಳ ಕೈಗೊಳ್ಳುವ ಸಂಶೋಧನೆ, ಲ್ಯಾಬೋರೇಟರಿ, ಯಾವ ಮಣ್ಣಿನಲ್ಲಿ ಯಾವ ರೀತಿಯ ಬೆಳೆಗಳನ್ನು ಬೆಳೆಯ ಬೇಕು ಎನ್ನುವ ಬಗ್ಗೆ ತರಬೇತಿ, ರೈತರಿಗೆ ಆದಾಯ ತಂದು ಕೊಡುವ ಬೆಳೆಗಳ ಬಗ್ಗೆ ಚರ್ಚೆಗಳು ಸೇರಿದಂತೆ ಇತರೆ ಕೆಲಸ ಕಾರ್ಯಗಳಿಗೆ ಸೆಮಿನಾರ್ ಹಾಲ್, ಎಕ್ಸಿಬಿಷನ್ ಹಾಲ್‍ಗಳ ನಿರ್ಮಾಣವಾಗಲಿದೆ ಎಂದರು.


ಕೃಷಿಕರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರವು ಸಾಕಷ್ಟು ಯೋಜನೆಗಳನ್ನು ರೂಪಿಸಿವೆ, ಮುಖ್ಯವಾಗಿ ಪ್ರಧಾನಮಂತ್ರಿಗಳು ಕೃಷಿ ಸಮ್ಮಾನ್ ಯೋಜನೆಯಡಿ 6,000 ರೂ.ಗಳನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಿ ಪ್ರೋತ್ಸಾಹಿಸುತ್ತಿದ್ದಾರೆ, ಅದರಂತೆ ರಾಜ್ಯ ಸರ್ಕಾರವು ಆರು ಸಾವಿರದೊಂದಿಗೆ 4,000 ರೂ.ಗಳನ್ನು ಸೇರಿಸಿ ಒಟ್ಟು 10 ಸಾವಿರ ರೂ.ಗಳನ್ನು ರೈತರಿಗೆ ನೀಡಿ ಪ್ರೋತ್ಸಾಹಿಸಲಾಗುತ್ತಿದೆ, ರೈತರ ಖಾತೆಗೆ ಸರ್ಕಾರದಿಂದ ನೇರವಾಗಿ ಹಣ ಬಿಡುಗಡೆ ಮಾಡುವ ವ್ಯವಸ್ಥೆ ಈ ಹಿಂದೆ ಇರಲಿಲ್ಲ, ಈ ಯೋಜನೆಯ ಅನುಷ್ಠಾನದಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದವಾಗದಂತೆ ಕೃಷಿ ಸಮ್ಮಾನ್ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದರು.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರು, ಮಹಾನಗರ ಪಾಲಿಕೆ ಸದಸ್ಯ ಸಂದಿಪ್ ಗರೋಡಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸೀತಾ ಎಂ.ಸಿ., ಕರ್ನಾಟಕ ಗೃಹ ಮಂಡಳಿಯ ಕಾರ್ಯನಿರ್ವಾಹಕ ಅಭಿಯಂತರಾದ ಮಂಗಳಾ ಸೇರಿದಂತೆ ಹಲವು ಗಣ್ಯರು ವೇದಿಕೆಯಲ್ಲಿದ್ದರು.

ಕೃಷಿ ಇಲಾಖೆಯ ಉಪ ನಿರ್ದೇಶಕರಾದ ಭಾರತಮ್ಮ ಜಿ.ಯು. ಸ್ವಾಗತಿಸಿದರು. ಮಂಗಳೂರು ತಾಲೂಕು ಸಹಾಯಕ ನಿರ್ದೇಶಕರಾದ ವೀಣಾ ಕೆಆರ್ ನಿರೂಪಿಸಿದರು. ಶಶಿಕಲಾ ಪ್ರಾರ್ಥಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು