1:47 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಅಗ್ನಿ ದುರಂತಕ್ಕೀಡಾದ ಗಂಗೊಳ್ಳಿ ಬಂದರಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ: ಸುಮಾರು 13 ಕೋಟಿ ನಷ್ಟ ಅಂದಾಜು

17/11/2023, 21:13

ಗಂಗೊಳ್ಳಿ(reporterkarnataka.com): ಗಂಗೊಳ್ಳಿ ಬಂದರು ಅಗ್ನಿ ದುರಂತದಿಂದ ಸುಮಾರು 13 ಕೋಟಿ ನಷ್ಟ ಉಂಟಾಗಿದೆ ಎಂದು ಜಿಲ್ಲಾ ಉಸ್ತುವಾರಿ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.


ಗಂಗೊಳ್ಳಿಯ ಬಂದರಿನಲ್ಲಿ ಅಗ್ನಿ ದುರಂತ ನಡೆದ ಸ್ಥಳಕ್ಕೆ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರೂ ಆಗಿರುವ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಭೇಟಿ ನೀಡಿದರು. ಅಗ್ನಿ ಆಕಸ್ಮಿಕ ನಡೆದ ಸ್ಥಳವನ್ನು ವೀಕ್ಷಿಸಿದ ಸಚಿವರು, ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಮೀನುಗಾರರೊಂದಿಗೆ ಚರ್ಚೆ ನಡೆಸಿದರು‌.
ತ್ವರಿತಗತಿಯಲ್ಲಿ ಪರಿಹಾರ:
ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು,
ಅಗ್ನಿ ದುರಂತದಿಂದ ಸುಮಾರು 13 ರಿಂದ 15 ಕೋಟಿ ರೂ ನಷ್ಟ ಅಂದಾಜಿಸಲಾಗಿದೆ. ಇನ್ನು 15‌ ದಿನಗಳಲ್ಲಿ ಪರಿಹಾರ ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು. ಸ್ಥಳದಲ್ಲಿದ್ದ ಮೀನುಗಾರರು ಹಾಗೂ ಬೋಟ್ ಕಳೆದುಕೊಂಡ ಮಾಲೀಕರಿಗೆ ಸ್ವಾಂತನ ಹೇಳಿದರು.
9 ಬೋಟ್ ಗಳು, ಎರಡು ದೋಣಿಗಳು ಸಂಪೂರ್ಣ ಸುಟ್ಟಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ‌ ಸಚಿವರು, ಈ ಕುರಿತು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಮೀನುಗಾರಿಕೆ ಮತ್ತು ಬಂದರು ಸಚಿವರೊಂದಿಗೆ ಚರ್ಚಿಸಿ ಪರಿಹಾರ ಒದಗಿಸಲಾಗುವುದು ಎಂದರು.
ಮುಂದೆ ಇಂತಹ ದುರ್ಘಟನೆ ಮರುಕಳಿಸಬಾರದು. ಮುನ್ನೆಚ್ಚರಿಕೆ ಕ್ರಮವಾಗಿ ಬಂದರಿನಲ್ಲಿ ಅಗ್ನಿ ಶಾಮಕ ದಳ ಸ್ಥಾಪನೆಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಈ ವೇಳೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಮುಖಂಡರಾದ ಗೋಪಾಲ ಪೂಜಾರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು