5:20 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ…

ಇತ್ತೀಚಿನ ಸುದ್ದಿ

ಅಗ್ನಿವೀರ ಪಡೆಯೊಂದಿಗೆ ಶಾಸಕ ಡಾ. ಭರತ್ ಶೆಟ್ಟಿ ನೇತೃತ್ವದಲ್ಲಿ ಗಾಂಧಿ ಸಂಸ್ಮರಣೆ, ಸ್ವಚ್ಛತಾ ಅಭಿಯಾನ

03/10/2024, 10:11

ಕಾವೂರು(reporterkarnataka.com): ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ದೇಶದ ಪ್ರಸಿದ್ಧ ಪ್ರಧಾನಿಗಳಲ್ಲಿ ಓರ್ವರಾದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಪ್ರಯುಕ್ತ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ದೇಶದ ಯೋಧರಾದ ಅಗ್ನಿವೀರ ಪಡೆಯೊಂದಿಗೆ
ನಗರದ ಕೆಪಿಟಿ ಬಳಿಯ ಉದಯನಗರ ಸುತ್ತಮುತ್ತ
ಸ್ವಚ್ಛತಾ ಅಭಿಯಾನ ನಡೆಸಿದರು.
ಇದೇ ಸಂದರ್ಭ ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವ ಅರ್ಪಿಸಲಾಯಿತು.
ಈ ಸಂದರ್ಭ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛತೆಯ ಪರಿಕಲ್ಪನೆಯೊಂದಿಗೆ ತಾವು ಅಧಿಕಾರ ಸ್ವೀಕರಿಸಿದ ಅವಧಿಯಿಂದ ದೇಶದಾದ್ಯಂತ ಹೊಸ ಕ್ರಾಂತಿಯಲ್ಲಿ ಮಾಡಿದ್ದಾರೆ.
ದೇಶದ ಮೂಲೆ ಮೂಲೆಗಳಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಶಕ್ತಿಯನ್ನು ತುಂಬಿದ್ದಾರೆ.
ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಕಳೆದ 15 ದಿನಗಳಿಂದ ಸೇವಾ ಪಾಕ್ಷಿಕ ಕಾರ್ಯಕ್ರಮದೊಂದಿಗೆ ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಸಿಕೊಂಡಿದ್ದಾರೆ.
ಇಂದು ಉದಯ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸ್ಥಳೀಯ ಮನಪಾ ಸದಸ್ಯರಾದ ಜಯಾನಂದ ಅಂಚನ್ , ಬಿಜೆಪಿಯ ಪದಾಧಿಕಾರಿಗಳು ಎಲ್ಲರೂ ಸೇರಿ ಸ್ವಚ್ಛತಾ ಅಭಿಯಾನವನ್ನು ನಡೆಸುತ್ತಿದ್ದಾರೆ.


ದೇಶದ ಭದ್ರತಾ ಪಡೆಯನ್ನ ಬಲಿಷ್ಠ ಗೊಳಿಸುವ ನಿಟ್ಟಿನಲ್ಲಿ ಅಗ್ನಿವೀರ ಪಡೆಯನ್ನು ಪ್ರಧಾನಿ ಮೋದಿಯವರು ಆರಂಭಿಸಿದ್ದು ಅವರ ಒಂದು ತಂಡ ನಮ್ಮೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿರುವುದು ಶ್ಲಾಘನೀಯ ಎಂದರು.
ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರ ಮಂಡಲದ ಬಿಜೆಪಿ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಮಾಜಿ ಮೇಯರ್ ಜಯಾನಂದ ಅಂಚನ್, ಬಿಜೆಪಿ ಪ್ರಮುಖರಾದ ಪೂಜಾ ಪೈ, ರಣದೀಪ್ ಕಾಂಚನ್, ಶಾನ್ ವಾಝ್ ಹುಸೈನ್, ರಮೇಶ್, ಮಂಡಲದ ಕಾರ್ಯಾಲಯದ ಕಾರ್ಯದರ್ಶಿ ಉಮೇಶ್ ಶೆಟ್ಟಿ ಹಾಗೂ ವಾರ್ಡಿನ ಅಧ್ಯಕ್ಷರಾದ ಹರಿಪ್ರಸಾದ್ ಪ್ರಧಾನ ಕಾರ್ಯದರ್ಶಿ ದಿವ್ಯ ಸುನಿಲ್, ಶಕ್ತಿ ಕೇಂದ್ರದ ಸದಸ್ಯರಾದ ಸರೋಜಿನಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು