8:41 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅಗ್ನಿವೀರ್ ವಾಯು ಪಡೆ ಪ್ರವೇಶ ಆಯ್ಕೆ ಪರೀಕ್ಷೆ: ಅರ್ಜಿ ಆಹ್ವಾನ; ಜುಲೈ 31 ಕೊನೆಯ ದಿನ

08/07/2025, 13:10

ಮಡಿಕೇರಿ(reporterkarnataka.com): ಭಾರತೀಯ ವಾಯು ಪಡೆಯಿಂದ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಅಥವಾ ಡಿಪ್ಲೋಮಾ ವಿಭಾಗದ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಷ್, ಆಟೋಮೊಬೈಲ್, ಕಂಪ್ಯೂಟರ್ ಸೈನ್ಸ್, ಇನ್‍ಸ್ಟ್ರುಮೆಂಟ್ ಟೆಕ್ನಾಲಜಿ, ಇನ್ಪಾರ್ಮೇಶನ್ ಟೆಕ್ನಾಲಜಿಯಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆ ಆಗಿರಬೇಕು. ಇಲ್ಲವೇ 02 ವರ್ಷದ ವೃತ್ತಿಪರ ಕೋರ್ಸ್‍ಗಳಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯಗಳನ್ನು ವ್ಯಾಸಂಗ ಮಾಡಿ ಶೇ.50 ರಷ್ಟು ಅಥವಾ ಯಾವುದೇ ಪಿಯುಸಿ ವಿಭಾಗದಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.
ಅಭ್ಯರ್ಥಿಯು 2005ರ ಜುಲೈ, 02 ರಿಂದ 2009ರ ಜನವರಿ, 02 ರ ನಡುವೆ ಜನಿಸಿರಬೇಕು. (ಎರಡೂ ದಿನಾಂಕಗಳು ಸೇರಿದಂತೆ) ಅರ್ಜಿ ಶುಲ್ಕ 550 ರೂ.ಗಳಾಗಿದೆ. ಆಸಕ್ತ ಅಭ್ಯರ್ಥಿಗಳು ಸಂಪೂರ್ಣ ವಿವರ ಮತ್ತು ಸೂಚನೆಗಳಿಗೆ ವೆಬ್‍ಸೈಟ್ https://agnipathvayu.cdac.in ನೋಡಬಹುದು. ವೆಬ್‍ಸೈಟ್‍ನಲ್ಲಿ 2025 ರ ಜುಲೈ, 11 ರಿಂದ 31 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು