6:33 PM Saturday3 - May 2025
ಬ್ರೇಕಿಂಗ್ ನ್ಯೂಸ್
ತನಿಖೆಯ ಮುನ್ನವೇ ಫಾಝಿಲ್ ಕುಟುಂಬಕ್ಕೆ ಕ್ಲೀನ್ ಚಿಟ್; ಸ್ಪೀಕರ್ ಖಾದರ್ ತಕ್ಷಣ ರಾಜೀನಾಮೆ… Chikkamagaluru | ಪೆಹಲ್ಗಾಮ್ ದಾಳಿ: ಆಲ್ದೂರು ಪಟ್ಟಣ ಬಂದ್; ವ್ಯಾಪಾರ-ವಹಿವಾಟು ಸ್ತಬ್ದ; ವಾರದ… Kerala | ಪ್ರಧಾನಿ ಮೋದಿ – ಕೇರಳ ಸಿಎಂ ಪಿಣರಾಯಿ ವಿಜಯನ್ ಒಂದೇ… Karnataka High Court | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಗೆ ಅಶ್ಲೀಲ ಪದ… ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ…ರಾಮೇಶ್ವರಾ…ಅನ್ನದಾನೇಶ್ವರಾ: ಮನೆ ದೇವರ ಲಾವಣಿ ಹಾಡಿದ ಸಿಎಂ ಸಿದ್ದರಾಮಯ್ಯ Chikkamagaluru | ಜಯಪುರ ಅತ್ತಿಕುಡಿಗೆ ರಸ್ತೆ ಬದಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ Mangaluru | ಹುಟ್ಟೂರು ಬಂಟ್ವಾಳದತ್ತ ಸುಹಾಸ್ ಶೆಟ್ಟಿ ಪಾರ್ಥಿವ ಶರೀರ ಮೆರವಣಿಗೆ: ಬಿಗಿ… ಸುಹಾಸ್ ಶೆಟ್ಟಿ ಕೊಲೆ: ದ.ಕ. ಬಂದ್ ಗೆ ವಿಎಚ್ ಪಿ, ಭಜರಂಗದಳ ಕರೆ Breaking : ಬಜಪೆ : ಮಾರಕಾಯುಧಗಳಿಂದ ಹೊಡೆದು ಯುವಕನ ಕೊಲೆ ಕಾಂಗ್ರೆಸ್ ಪಕ್ಷದ ಜಾತಿ ಗಣತಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವುದು ಖರ್ಗೆ, ರಾಹುಲ್…

ಇತ್ತೀಚಿನ ಸುದ್ದಿ

Agricultur | ಮೇ ಅಂತ್ಯದವರೆಗೆ ಬೆಂಬಲ ಬೆಲೆ ತೊಗರಿ ಖರೀದಿ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್

01/05/2025, 12:31

ಬೆಂಗಳೂರು(reporterkarnataka.com): ಬೆಂಬಲ ಬೆಲೆ ತೊಗರಿ ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಮೇ ತಿಂಗಳ ಅಂತ್ಯದವರೆಗೆ ಖರೀದಿ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ.
ಖರೀದಿ ಅವಧಿ ಮೇ 1ಕ್ಕೆ ಅಂತ್ಯವಾಗಲಿದ್ದು, ನಿಗದಿತ ಖರೀದಿ ಪ್ರಮಾಣ ಇನ್ನೂ ಆಗದ ಕಾರಣ ಖರೀದಿ ಅವಧಿ ವಿಸ್ತರಣೆ ಮಾಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಒಂದು ತಿಂಗಳು ವಿಸ್ತರಣೆ ಮಾಡಲಾಗಿದೆ.
ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯಲ್ಲಿ 3.06 ಲಕ್ಷ ಮೆಟ್ರಿಕ್‌ ಟನ್‌ ತೊಗರಿ ಖರೀದಿಗೆ ಅನುಮತಿ ನೀಡಿದ್ದು, ಇದುವರೆಗೆ ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ 1.83 ಲಕ್ಷ ಮೆಟ್ರಿಕ್‌ ಟನ್‌ ಖರೀದಿ ಮಾಡಲಾಗಿದೆ. ಇನ್ನೂ 2.70 ಲಕ್ಷ ಮೆಟ್ರಿಕ್ ಟನ್ ಪ್ರಮಾಣದಷ್ಟು ತೊಗರಿಯನ್ನು ರೈತರು ನೋಂದಣಿ ಮಾಡಿಸಿಕೊಂಡಿದ್ದು, ಇನ್ನೂ ಸುಮಾರು 93 ಸಾವಿರ ಮೆಟ್ರಿಕ್‌ ಟನ್‌ ಖರೀದಿ ಮಾಡಬೇಕಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಪ್ರತಿ ಟನ್‌ಗೆ ರೂ 7,550 ನಿಗದಿಪಡಿಸಿದ್ದು, ಈ ಬೆಲೆ ಕಡಿಮೆಯಾಗಿದ್ದು, ಹೆಚ್ಚಳ ಮಾಡಬೇಕು ಎಂದು ರೈತರು ಬೇಡಿಕೆ ಇಟ್ಟಿದ್ದರು. ರೈತರ ಬೇಡಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ಪ್ರೋತ್ಸಾಹ ಧನ ಘೋಷಣೆ ಮಾಡಲು ಮನವಿ ಮಾಡಿದಾಗ ಬೇಡಿಕೆಗೆ ಸ್ಪಂದಿಸಿ ಪ್ರತಿ ಕ್ವಿಂಟಾಲ್‌ಗೆ ರೂ 450 ಪ್ರೋತ್ಸಾಹ ಧನ ಘೋಷಣೆ ಮಾಡಿದ್ದು, ಒಟ್ಟು ಪ್ರತಿ ಕ್ವಿಂಟಾಲ್‌ಗೆ ರೂ 8000ಗಳಂತೆ ಖರೀದಿ ಮಾಡಲಾಗುತ್ತಿದೆ. ರೈತರು ಈ ಅವಕಾಶ ಬಳಕೆ ಮಾಡಿಕೊಂಡು ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ತೊಗರಿ ಮಾರಾಟ ಮಾಡಬಹುದು ಎಂದು ಸಚಿವ ಶಿವಾನಂದ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು