5:43 PM Saturday17 - January 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ…

ಇತ್ತೀಚಿನ ಸುದ್ದಿ

Agriculture | ನಿರುದ್ಯೋಗ ನಿವಾರಣೆಗೆ ಕೃಷಿ ಕ್ಷೇತ್ರ ಆಸರೆ; ಸಚಿವ ಎನ್.ಚಲುವರಾಯಸ್ವಾಮಿ

13/06/2025, 00:04

ಬೆಂಗಳೂರು(reporterkarnataka.com): ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ವ್ಯಾಪಾರ ಕ್ಷೇತ್ರಗಳು ಆಸರೆಯಾಗಿವೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.


ನಗರದ ಟೌನ್ ಹಾಲ್ ನಲ್ಲಿ ಕೆಪೆಕ್ ಹಾಗೂ ಖೆತಿವಾಲ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಕೃಷಿ ಜಾಗೃತಿ ಕಾರ್ಯಗಾರ ಮತ್ತು ಖೆತಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಸಚಿವರು ಮಾತನಾಡಿದ್ದರು.
ಕೃಷಿ ಮತ್ತು ಕೃಷಿ ಉತ್ಪನ್ನಗಳ ಮಾರುಕಟ್ಟೆ ವಹಿವಾಟು ವ್ಯವಸ್ಥೆಯಲ್ಲಿ ಹೆಚ್ಚಿನ ಉದ್ಯೋಗಗಳು ಸೃಷ್ಟಿಯಾಗುತ್ತಿವೆ ಜೊತೆಗೆ ಸ್ವ-ಉದ್ಯೋಗಗಳ ಅವಕಾಶಗಳು ಹೆಚ್ಚುತ್ತಿವೆ ಯುವ ಸಮುದಾಯ ಇದನ್ನು ಸದ್ಬಳಿಕೆ ಮಾಡಿಕೊಳ್ಳಬೇಕು ಎಂದು ಅವರು ನುಡಿದರು.
ಸಾಂಪ್ರದಾಯಕ ಕೃಷಿಯೊಂದಿಗೆ ತಂತ್ರಜ್ಞಾನ, ವೈಜ್ಞಾನಿಕ ಪದ್ದತಿಗಳ ಅಳವಡಿಕೆಯಿಂದ ಸಮಯ, ಶ್ರಮದ ಉಳಿತಾಯದ ಜೊತೆಗೆ ಆದಾಯ ಹೆಚ್ಚಿತ್ತಿದೆ. ರೈತರು ತಮ್ಮ ಉತ್ಪನ್ನಗಳ ಮೌಲ್ಯವರ್ಧನೆಗೂ ಆದ್ಯತೆ ನೀಡಬೇಕಾಗಿದೆ. ಮಾರುಕಟ್ಟೆಯ ಬಗ್ಗೆ ಜ್ಞಾನ ವಿಸ್ತಾರಗೊಳ್ಳಬೇಕು ಎಂದು ಎನ್. ಚಲುವರಾಯಸ್ವಾಮಿ ನುಡಿದರು.
ಕೆಪೆಕ್ ಕೂಡ ರೈತರ ಉತ್ಪನಗಳ ಮೌಲ್ಯವರ್ಧನೆ, ರಫ್ತು ಹಾಗೂ ಆಹಾರ ಉತ್ಪನಗಳ ತಯಾರಿಕೆ ಉದ್ಯಮದ ಪ್ರೋತ್ಸಾಹಕ್ಕೆ ಹಿಂದೆಂದಿಗಿಂತಲೂ ಹೆಚ್ಚಿನ ಆದ್ಯತೆ ನೀಡುತ್ತಿದೆ. ಇದರೊಂದಿಗೆ ಖೆತಿವಾಲ ಸಂಸ್ಥೆ ಕೆಪೆಕ್ ಫಲಾನುಭವಿಗಳಿಗೆ ದೇಸಿ ಹಾಗೂ, ಅಂತರರಾಷ್ಟ್ರೀಯ ಮಾರುಕಟ್ಟೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿರುವುದು ಅಭಿನಂದನಾರ್ಹ ಎಂದು ಅವರು ತಿಳಿಸಿದ್ದರು.
ಕೆಪೆಕ್ ನಲ್ಲಿ PMFME ಯೋಜನೆಯಡಿಯಲ್ಲಿ ಕಿರು ಆಹಾರ ಸಂಸ್ಕರಣೆ ಉದ್ಯಮ ಸ್ಥಾಪಿಸಲು ಅವಕಾಶವಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಒಟ್ಟು 15 ಲಕ್ಷ ರೂಪಾಯಿ ಸಬ್ಸಿಡಿ ಕೂಡ ದೊರೆಯಲಿದೆ. ಇದಕ್ಕಾಗಿ 206 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಈ ಅವಕಾಶವನ್ನು ರೈತರ ಮಕ್ಕಳು ಸದ್ಬಳಿಕೆ ಮಾಡಿಕೊಳ್ಳಬೇಕು ಎಂದು ಕೃಷಿ ಸಚಿವರು ಕರೆ ನೀಡಿದರು.
ಕೆಪೆಕ್ ನಲ್ಲಿ ಈ ವರ್ಷ 5 ಸಾವಿರ ಹೊಸ ಆಹಾರ ಉದ್ಯಮಗಳ ಸೃಷ್ಟಿಯ ಗುರಿ ಹೊಂದಲಾಗಿದೆ ಇದಲ್ಲದೆ ಕೃಷಿ ಇಲಾಖೆಯಲ್ಲಿಯು ಹಲವು ವಿನೂತನ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಕೃಷಿ ನವೋದ್ಯಮ ರೂ.8 ಕೋಟಿ ಸಹಾಯಧನದಲ್ಲಿ 40 ನವೋದ್ಯಮಗಳ ಸ್ಥಾಪಿಸಲಾಗಿದೆ ಎಂದು ಸಚಿವ ಎನ್.ಚಲುವರಾಯಸ್ವಾಮಿಯವರು ಮಾಹಿತಿ ನೀಡಿದರು.
ರೂ.128 ಕೋಟಿ ವೆಚ್ಚದಲ್ಲಿ 344 ಹಾರ್ವೆಸ್ಟರ್ ಹಬ್ ವಿತರಣೆ ಮಾಡಲಾಗಿದೆ ರೈತರನ್ನು ಯಾಂತ್ರಿಕವಾಗಿಯು ಸಬಲರನ್ನಾಗಿ ಮಾಡಲು ರಾಜ್ಯ ಸರ್ಕಾರ 900 ಕೋಟಿ ವೆಚ್ಚದಲ್ಲಿ ಈಗಾಗಲೇ ಕೃಷಿ ಯಂತ್ರೋಪಕರಣಗಳು, 1075 ಕೋಟಿ ರೂಪಾಯಿ ವೆಚ್ಚದಲ್ಲಿ ಸೂಕ್ಷ್ಮ ನೀರಾವರಿ ಪರಿಕರಗಳನ್ನು ವಿತರಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಜಲಾನಯನ ಇಲಾಖೆ ನಿರ್ದೇಶಕರಾದ ಬಂಥನಾಳ, ಕೆಪಕ್ ವ್ಯವಸ್ಥಾಪಕ ನಿರ್ದೇಶಕರಾದ ಶಿವಕುಮಾರ್, ನರ್ಬಾಡ್ ವ್ಯವಸ್ಥಾಪಕ ನಿರ್ದೇಶಕರಾದ ಪ್ರಕಾಶ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕರಾದ ವಿ.ಎನ್. ಶರ್ಮಾ ಮತ್ತು ಎಸ್.ಎಲ್.ಬಿ.ಸಿ ಸಂಯೋಜಕರಾದ ಭಾಸ್ಕರ್ ಭಟ್ಟಾಚಾರ್ಯ ಮತ್ತಿತರರು ಉಪಸ್ಥಿತರಿದ್ದರು.
ಇದೆ ವೇಳೆ ಖೆತಿ ಪುರಸ್ಕಾರಕ್ಕೆ ಭಾಜನರಾದ ಅಧಿಕಾರಿಗಳು, ಸಂಸ್ಥೆಯ ಪ್ರತಿನಿಧಿಗಳನ್ನು ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು