3:29 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಆಗುಂಬೆ: ಮದ್ಯಪಾನ ಸೇವಿಸಿ ವಾಹನ ಚಲಾವಣೆ; ಚಾಲಕನಿಗೆ 10 ಸಾವಿರ ದಂಡ

28/08/2024, 19:53

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಮದ್ಯಪಾನ ಸೇವನೆ ಮಾಡಿ ವಾಹನ ಚಾಲನೆ ಮಾಡಿದ ಕಾರಣಕ್ಕೆ ಪೊಲೀಸರು ಪ್ರಕರಣ ದಾಖಲಿಸಿ ದಂಡ ವಿಧಿಸಿದ್ದಾರೆ.

ಆಗುಂಬೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಂಗನಾಥ್ ಅಂತರಗಟ್ಟಿ ಮತ್ತು ತಂಡದವರಿಂದ ವಾಹನ ತಪಾಸಣೆ ವೇಳೆ ಮದ್ಯಪಾನ ಮಾಡಿ ವಾಹನ ಚಲಾಯಿಸುತಿದ್ದ ಮಹೇಶ್ ಎಂಬ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ರೂ.10,000 ದಂಡ ವಿಧಿಸಲಾಗಿದೆ.
ಎಸ್ ಐ ನಾಗೇಶ್, ದಿವಾಕರ್, ಅನಿಲ್ ರವರು ವಾಹನ ತಪಾಸಣೆ ಮಾಡುತ್ತಿದ್ದ ವೇಳೆ KA 05-AF-0250 ಸಂಖ್ಯೆಯ ಇನ್ನೋವಾ ಕಾರಿನ ಚಾಲಕ ಮಹೇಶ್ ಎಂಬಾತ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ್ದು, ಪ್ರಕರಣ ದಾಖಲಿಸಿ ನ್ಯಾಯಲಯಕ್ಕೆ ವರದಿ ಮಾಡಿದ್ದ ಹಿನ್ನಲೆಯಲ್ಲಿ
ದಿನಾಂಕ 27.08.2024 ರಂದು ಪ್ರಥಮ ದರ್ಜೆ ವ್ಯವಹಾರಗಳ ನ್ಯಾಯಾಲಯ ಮತ್ತು ಜೆಎಂಎಫ್‌ಸಿ ತೀರ್ಥಹಳ್ಳಿ ನ್ಯಾಯಲಯ ನ್ಯಾಯಾಧೀಶರು 10.000 ರೂ ದಂಡ ವಿಧಿಸಿ ಆದೇಶಿಸಿದ್ದಾರೆ.
ಇನ್ನೂ ಒಂದೇ ತಿಂಗಳಿನಲ್ಲಿ ಆಗುಂಬೆ ಭಾಗದಲ್ಲಿ ಇದು ಮೂರನೇ ಪ್ರಕರಣ ಆಗಿದ್ದು ಸಂಚಾರ ನಿಯಮ ಮೀರುವ ವಾಹನ ಸವಾರರಿಗೆ ಇನ್ನು ಕಠಿಣ ಕ್ರಮ ಜರುಗಿಸಲು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು