10:25 AM Saturday15 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ಆಗುಂಬೆ ಸಮೀಪದ ಬಿದರಗೋಡು ಬಳಿ ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು

13/08/2024, 16:40

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ

info.reporterkarnataka@gmail.com

ಪಿಕಪ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತವಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಅಗಸರಕೋಣೆ ಬಳಿ ನಡೆದಿದೆ.


ಆಗುಂಬೆ ವ್ಯಾಪ್ತಿಯ ಬಿದರಗೋಡು ಸಮೀಪದ ಅಗಸರ ಕೋಣೆಯ ಬಳಿ ಮಂಗಳವಾರ ಮಧ್ಯಾಹ್ನ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ಪಿಕಪ್ ನಡುವೆ ಅಪಘಾತ ಸಂಭವಿಸಿದೆ. ಅತೀ ವೇಗದ ಚಾಲನೆಯಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು ಅಪಘಾತದ ರಭಸಕ್ಕೆ ಸ್ಥಳದಲ್ಲೇ ಬೈಕ್ ನಲ್ಲಿದ್ದ ಒಬ್ಬ ಹಾಗೂ ಪಿಕಪ್ ನಲ್ಲಿದ್ದ ಮತ್ತೊರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತಪಟ್ಟವರು ಅಗಸರಕೋಣೆಯ ಶರತ್ ಹಾಗೂ ಮತ್ತೊಬ್ಬರು ಸಂತೋಷ್ ಕೇರಳದ ಮೂಲದವರು ಎಂದು ತಿಳಿದು ಬಂದಿದೆ. ಪಿಕಪ್ ವಾಹನದ ಚಾಲಕ ಪರಾರಿಯಾಗಿದ್ದಾನೆ. ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು