9:57 PM Wednesday17 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಆಹಾರ ಅರಸಿ ಬರುವ ಕಾಡಾನೆ: ಒಂಟಿ ಸಲಗದಿಂದ ಒಂದೂವರೆ ಎಕರೆ ಅಡಿಕೆ, ಕಾಫಿ ತೋಟ ನಾಶ!!

29/07/2023, 12:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆಹಾರವನ್ನು ಅರಸಿ ಕಾಫಿ ತೋಟಗಳಿಗೆ ನುಗ್ಗುತ್ತಿರುವ ಕಾಡಾನೆಗಳಿಂದ ಎಂತಹ ಅನಾಹುತ ಆಗುತ್ತದೆ ಎಂಬುದು ಈ ದೃಶ್ಯವನ್ನು ನೋಡಿದರೆ ತಿಳಿಯುತ್ತದೆ. ಒಂದೇ ಒಂದು ಕಾಡಾನೆ ಎರಡು ದಿನಗಳಲ್ಲಿ ಬರೋಬ್ಬರಿ ಒಂದೂವರೆ ಎಕರೆ ಜಾಗದಲ್ಲಿ ಬೆಳೆದು ನಿಂತಿದ್ದ ಅಡಿಕೆ ಮತ್ತು ಕಾಫಿ ಗಿಡಗಳನ್ನು ಸಂಪೂರ್ಣ ಹಾಳುಗೆಡಹಿದೆ.


ಮೂಡಿಗೆರೆ ತಾಲ್ಲೂಕಿನ ಬೈದುವಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಬೈದುವಳ್ಳಿಯಲ್ಲಿ ಹೆಚ್. ಕೆ. ರಮೇಶ್ ಹಳೇಕೆರೆ ಇವರ ತೋಟದಲ್ಲಿ ಇದ್ದ ಬಗನೆ ಮರವನ್ನು ತಿನ್ನಲ್ಲು ಬಂದಿರುವ ಒಂಟಿ ಸಲಗ ಬಗನೆ ಮರವನ್ನು ತಿನ್ನುವ ಭರದಲ್ಲಿ ಸುಮಾರು ಒಂದೂವರೆ ಎಕರೆ ಪ್ರದೇಶವನ್ನು ಸಂಪೂರ್ಣ ನಜ್ಜುಗುಜ್ಜು ಮಾಡಿದೆ.
ಆನೆ ತೋಟದಲ್ಲಿ ಮನಬಂದಂತೆ ತಿರುಗಾಡಿದ್ದು, ನೂರೈವತ್ತು ಹೆಚ್ಚು ಅಡಿಕೆ ಮರಗಳು, ಇನ್ನೂರೈವತ್ತಕ್ಕೂ ಹೆಚ್ಚು ರೋಬಸ್ಟಾ ಕಾಫಿ ಗಿಡಗಳನ್ನು ಬುಡಮೇಲು ಮಾಡಿದೆ.
ಕಷ್ಟಪಟ್ಟು ಬೆಳೆಸಿದ್ದ ಗಿಡಗಳು ಒಂದೇ ರಾತ್ರಿಯಲ್ಲಿ ನಿರ್ನಾಮ ಮಾಡಿರುವುದನ್ನು ಕಂಡು ತೋಟದ ಮಾಲೀಕರು ತೀವ್ರವಾಗಿ ಮನನೊಂದಿದ್ದಾರೆ.
ಸ್ಥಳಕ್ಕೆ ಮೂಡಿಗೆರೆ ವಲಯ ಅರಣ್ಯ ಅಧಿಕಾರಿ ಮೋಹನ್ ಕುಮಾರ್ ಮತ್ತು ಅರಣ್ಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆನೆ ಮಾಡಿರುವ ನಷ್ಟವನ್ನು ಕಂಡು ಸ್ವತಃ ಅರಣ್ಯ ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ. ನಷ್ಟಕ್ಕೊಳಗಾದ ರೈತರಿಗೆ ಸೂಕ್ತ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದ್ದಾರೆ.
ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎರಡು ಕಾಡಾನೆಗಳು ನಿರಂತರವಾಗಿ ರೈತರ ಜಮೀನಿಗೆ ಲಗ್ಗೆ ಇಡುತ್ತಿದ್ದು, ಅಪಾರ ಹಾನಿ ಉಂಟುಮಾಡುತ್ತಿವೆ. ಈ ಕಾಡಾನೆಗಳನ್ನು ಹಿಡಿದು ಬೇರೆಡೆಗೆ ಸಾಗಿಸಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ. ಊರುಬಗೆ ಸಮೀಪ ಅರ್ಜುನ್ ಎಂಬುವವರನ್ನು ಕಾಡಾನೆ ದಾಳಿ ನಡೆಸಿ ಕೊಂದು ಹಾಕಿದ ಘಟನೆ ನಡೆದು ವರ್ಷವಾಗುತ್ತಾ ಬಂದಿದೆ.
ಇಲ್ಲಿಂದ ಒಂದು ಕಾಡಾನೆಯನ್ನು ಸೆರೆಹಿಡಿದು ಸಾಗಿಸಲಾಗಿದೆ. ಇಲ್ಲಿ ಉಪಟಳ ನೀಡುತ್ತಿದ್ದ ಬೈರ ಎನ್ನುವ ಆನೆಯನ್ನು ಹಿಡಿಯಲಾಗಿದೆ ಎಂದು ಅರಣ್ಯ ಅಧಿಕಾರಿಗಳು ಹೇಳಿದ್ದರು. ಆದರೆ ಸ್ಥಳೀಯರು ಹೇಳುವ ಪ್ರಕಾರ ಭೈರ ಸೆರೆಯಾಗಿಲ್ಲ. ಇದೀಗ ಉಪಟಳ ನೀಡುತ್ತಿರುವ ಒಂಟಿಸಲಗವೇ ಭೈರ ಆನೆ ಎನ್ನುತ್ತಿದ್ದಾರೆ.
ಹಾಗಾಗಿ ಅರಣ್ಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಈ ¨ಗ್ಗೆ ಕ್ರಮ ಜರುಗಿಸಿ ಜನರಿಗೆ ಉಪಟಳ ನೀಡುತ್ತಿರುವ ಕಾಡಾನೆಗಳನ್ನು ಹಿಡಿದು ಸ್ಥಳಾಂತರಿಸಲು ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು