6:33 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಆಹಾರ ಪದ್ಧತಿ ಪ್ರತಿಯೊಬ್ಬರ ಹಕ್ಕು, ಸರಕಾರ ಹಸ್ತಕ್ಷೇಪ ನಡೆಸದು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ 

10/12/2021, 19:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆಹಾರ ಪದ್ದತಿ ಅವರವರ ಹಕ್ಕು, ಇದಕ್ಕೆ ಒತ್ತಡ ಹೇರುವುದು ಸರಿಯಲ್ಲ. ಸರ್ಕಾರ ಯಾವುದೇ ವ್ಯಕ್ತಿಗಳು ಒತ್ತಡ ತಂದು ಅವರ ಆಹಾರ ಬದಲಾಯಿಸಲು ಆಗುವುದಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಮೊಟ್ಟೆ ವಿವಾದಕ್ಕೆಸಂಬಂಧಿಸಿದಂತೆ ಕೇಂದ್ರ ಸಚಿವೆ ಕರಂದ್ಲಾಜೆ ಶುಕ್ರವಾರ ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಮಾಧ್ಯಮ ಜತೆ ಮಾತನಾಡಿದರು.

ಮಕ್ಕಳ‌ ಆಹಾರವನ್ನು ತಾಯಿಗೆ ಬಿಡಬೇಕು.ತಾಯಿಗಿಂತ ಮಕ್ಕಳನ್ನ ಚೆನ್ನಾಗಿ‌ ಯಾರೂ ನೋಡಿಕೊಳ್ಳಲ್ಲ.ಮೊಟ್ಟೆ ಬದಲು ಆ ತಾಯಿ ಕೈಗೆ ದುಡ್ಡು ಕೊಟ್ಟರೆ, ಇನ್ನು ಚೆನ್ನಾಗಿ ಆಹಾರವನ್ನ ಹಾಕಬಹುದು. ಈ ಬಗ್ಗೆಯೂ ಚರ್ಚೆ ಆಗಬೇಕು ಎಂದು ಸಚಿವೆ ಅಡ್ಡಗೋಡೆ ಮೇಲೆ ದೀಪ ಇಟ್ಟ ಹಾಗೆ ಮಾತನಾಡಿದರು.

ಮೊಟ್ಟೆ ಕೊಡುವುದು ಕೆಲ‌ ಸಮಾಜಕ್ಕೆ ‌ನೋವು ತರುತ್ತೆ ಅಂದ್ರೆ ಸರ್ಕಾರ ಮರುಪರಿಶೀಲನೆ ಮಾಡಬೇಕು. ಈ ಬಗ್ಗೆ ಸಿಎಂ‌ ಜತೆ ಚರ್ಚೆ ನಡೆಸಿ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ಅವರು ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು