7:06 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ ವಿಮಾನ

12/06/2025, 17:06


ನವದೆಹಲಿ(reporterkarnataka.com):
ಸುಮಾರು
242 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್ ಲೈನರ್ ವಿಮಾನವು ಗುಜರಾತಿನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಸಮಯದಲ್ಲಿ ವಸತಿ ಪ್ರದೇಶದಲ್ಲಿ ಪತನಗೊಂಡಿದೆ.
ವಿಮಾನವು ಲಂಡನ್‌ಗೆ ಹೋಗುತ್ತಿತ್ತು. 232 ಪ್ರಯಾಣಿಕರು ಮತ್ತು 10 ಸಿಬ್ಬಂದಿ ಇದ್ದರು.
ವಿಮಾನವು ಕೆಳಕ್ಕೆ ಹಾರುವ ಮತ್ತು ಎತ್ತರವನ್ನು ಪಡೆಯಲು ಹೆಣಗಾಡುತ್ತಿರುವ ವಿಮಾನವು ನೆಲವನ್ನು ಅಪ್ಪಳಿ ಬೆಂಕಿಯ ಚೆಂಡಿನಂರಾಗಿ ಸ್ಫೋಟಗೊಳ್ಳುವ ವೀಡಿಯೊವೊಂದು ವೈರಲ್ ಆಗಿದೆ. ವಿಮಾನವು ಸುಮಾರು ಐದು ನಿಮಿಷಗಳ ಕಾಲ ಹಾರಾಟ ನಡೆಸಿತು, ಅದು ಮಧ್ಯಾಹ್ನ 1.38ಕ್ಕೆ ಪತನಗೊಂಡಿತು.
ಇದೀಗ ವಿಮಾನ ಪತನಗೊಂಡ ಪ್ರದೇಶದಲ್ಲಿ ದಟ್ಟ ಹೊಗೆ ಮೇಲೇರುತ್ತಿದೆ. ಕನಿಷ್ಠ ಎರಡು ಡಜನ್ ಆಂಬ್ಯುಲೆನ್ಸ್‌ಗಳು ಘಟನಾ ಸ್ಥಳಕ್ಕೆ ಧಾವಿಸಿವೆ. ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪೊಲೀಸರು ಆ ಪ್ರದೇಶದಿಂದ ಸಂಚಾರ ಮಾರ್ಗ ಬದಲಿಸಿದ್ದಾರೆ.
ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪು ಅವರು ಪರಿಸ್ಥಿತಿ ಅವಲೋಕನ ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು