ಇತ್ತೀಚಿನ ಸುದ್ದಿ
ಎಐಸಿಸಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ
26/10/2022, 22:18

ಹೊಸದಿಲ್ಲಿ(reporterkarnataka.com):ಎಐಸಿಸಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು ದೆಹಲಿಯಲ್ಲಿ ಅಧಿಕಾರ ಸ್ವೀಕರಿಸಿದರು.
24 ವರ್ಷಗಳ ಬಳಿಕ ಕನ್ನಡಿಗರೊಬ್ಬರು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಚುಕ್ಕಾಣಿ ಹಿಡಿದಿದ್ದಾರೆ. ಎಸ್.ನಿಜಲಿಂಗಪ್ಪ ಅವರು ಅಧ್ಯಕ್ಷರಾಗಿದ್ದರು.
ಮಲ್ಲಿಕಾರ್ಜುನ ಖರ್ಗೆ ಅವರು ಯುಪಿಎ ಸರಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಪಕ್ಷದ ಹಂಗಾಮಿ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಸೋನಿಯಾ ಗಾಂಧಿ ಅವರು ಖರ್ಗೆ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುಂತಾದವರು ಉಪಸ್ಥಿತರಿದ್ದರು.