4:41 PM Tuesday22 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

*ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ: ಸಿಬ್ಬಂದಿ, ಪ್ರಯಾಣಿಕರು ಸೇರಿ 14 ಮಂದಿಗೆ ಗಾಯ*

04/08/2026, 20:10

ನವದೆಹಲಿ(reporterkarnataka.com): ಏರ್ ಇಂಡಿಯಾ ವಿಮಾನವೊಂದು ಆಗಸದಲ್ಲಿ ಬಿರುಗಾಳಿಗೆ ಸಿಲುಕಿ, 300 ಅಡಿ ಕೆಳಕ್ಕೆ ಕುಸಿದು ಪಲ್ಟಿಯಾದ ಘಟನೆ ನಡೆದಿದ್ದು, ಪ್ರಯಾಣಿಕರು ಮತ್ತು ವಿಮಾನದ ಸಿಬ್ಬಂದಿ ಸೇರಿದಂತೆ 14 ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ವಿಮಾನವು ಇದ್ದಕ್ಕಿದ್ದಂತೆ ಸುಮಾರು 300 ಅಡಿಗಳಷ್ಟು ಆಳಕ್ಕೆ ಕುಸಿದಿದೆ. ಒಳಗಿದ್ದ ಪ್ರಯಾಣಿಕರು ತೀವ್ರ ಆತಂಕಕ್ಕೊಳಗಾಗಿದ್ದಾರೆ. ಸೀಟ್ ಬೆಲ್ಟ್ ಧರಿಸದಿದ್ದ ಪ್ರಯಾಣಿಕರು ಹಾಗೂ ಕರ್ತವ್ಯದಲ್ಲಿದ್ದ ವಿಮಾನದ ಸಿಬ್ಬಂದಿ ವಿಮಾನದ ಸೀಲಿಂಗ್​ಗೆ ಬಡಿದು ಗಾಯಗೊಂಡಿದ್ದಾರೆ.
ವಿಮಾನದಲ್ಲಿ ಉಂಟಾದ ಆತಂಕದ ನಡುವೆಯೂ ಏರ್ ಇಂಡಿಯಾ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯುವಲ್ಲಿ ಯಶಸ್ವಿಯಾಗಿದೆ. ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗುತ್ತಿದ್ದಂತೆಯೇ ತುರ್ತು ವೈದ್ಯಕೀಯ ತಂಡವು ಸ್ಥಳಕ್ಕೆ ಧಾವಿಸಿ, ಗಾಯಗೊಂಡವರಿಗೆ ತಕ್ಷಣದ ಪ್ರಥಮ ಚಿಕಿತ್ಸೆ ನೀಡಿದೆ. ತೀವ್ರವಾಗಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಮಾನದ ಒಳಗಿನ ಸೀಲಿಂಗ್ ಪ್ಯಾನೆಲ್‌ಗಳು ಜಖಂಗೊಂಡಿವೆ. ಮಾಹಿತಿಯ ಪ್ರಕಾರ, ಹಾರಾಟದ ಸಮಯದಲ್ಲಿ ವಿಮಾನವು ತಕ್ಷಣವೇ ಸುಮಾರು 300 ಅಡಿ ಕೆಳಕ್ಕೆ ಧುಮುಕಿದೆ ಎಂದು ಪೈಲಟ್ ತಿಳಿಸಿದ್ದಾರೆ. ಆಗಸದಲ್ಲೇ ವಿಮಾನ ಪಲ್ಟಿ ಹೊಡೆಯುತ್ತಾ ಕುಸಿದ ಕಾರಣದಿಂದ ಶೇ. 80ರಷ್ಟು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಒಟ್ಟು 14 ಜನರಿಗೆ ಹೆಚ್ಚಿನ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಆ ವಿಮಾನದಲ್ಲಿನ ಪ್ರಯಾಣಿಕರು ಏರ್ ಇಂಡಿಯಾ ಸಂಸ್ಥೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು