ಇತ್ತೀಚಿನ ಸುದ್ದಿ
ವಾಯುಭಾರ ಕುಸಿತ: ಚಿತ್ರದುರ್ಗ ಜಿಲ್ಲೆಯಲ್ಲಿ ರೆಡ್ ಅಲರ್ಟ್; ದ.ಕ., ಉಡುಪಿ ಸಹಿತ 11 ಜೆಲ್ಲೆಗಳಲ್ಲಿ ಆರೆಂಜ್ ಅಲರ್ಟ್
19/05/2025, 18:43

ಬೆಂಗಳೂರು(reporterkarnataka.com): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಸೇರಿದಂತೆ 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಮೇ 19 ಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಭಾರಿಯಿಂದ ಅತೀ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಹಾವೇರಿ, ಧಾರವಾಡ, ಗದಗ ಮತ್ತು ಬೆಳಗಾವಿಗಳಲ್ಲಿ ಆರೆಂಜ್ ಅಲರ್ಟ್ ಇದೆ. ಈ11 ಜಿಲ್ಲೆಗಳನ್ನು ಮೇ 19ರಿಂದ 22 ರವರೆಗೆ ಆರೆಂಜ್ ಅಲರ್ಟ್‌ನಲ್ಲಿ ಇರಿಸಲಾಗಿದೆ. ಈ ಪ್ರದೇಶಗಳಲ್ಲಿ ಗುಡುಗುಸಹಿತ ಬಲವಾದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಮೇ 19 ಮತ್ತು 20 ರಂದು ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮಿಂಚು ಮತ್ತು ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.