3:27 AM Tuesday8 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

ವಾಯುಭಾರ ಕುಸಿತ: ಚಿತ್ರದುರ್ಗ ಜಿಲ್ಲೆಯಲ್ಲಿ ರೆಡ್ ಅಲರ್ಟ್; ದ.ಕ., ಉಡುಪಿ ಸಹಿತ 11 ಜೆಲ್ಲೆಗಳಲ್ಲಿ ಆರೆಂಜ್ ಅಲರ್ಟ್

19/05/2025, 18:43

ಬೆಂಗಳೂರು(reporterkarnataka.com): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಸೇರಿದಂತೆ 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಮೇ 19 ಕ್ಕೆ ರೆಡ್ ಅಲರ್ಟ್‌ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಭಾರಿಯಿಂದ ಅತೀ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಹಾವೇರಿ, ಧಾರವಾಡ, ಗದಗ ಮತ್ತು ಬೆಳಗಾವಿಗಳಲ್ಲಿ ಆರೆಂಜ್ ಅಲರ್ಟ್ ಇದೆ. ಈ11 ಜಿಲ್ಲೆಗಳನ್ನು ಮೇ 19ರಿಂದ 22 ರವರೆಗೆ ಆರೆಂಜ್ ಅಲರ್ಟ್‌ನಲ್ಲಿ ಇರಿಸಲಾಗಿದೆ. ಈ ಪ್ರದೇಶಗಳಲ್ಲಿ ಗುಡುಗುಸಹಿತ ಬಲವಾದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಮೇ 19 ಮತ್ತು 20 ರಂದು ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮಿಂಚು ಮತ್ತು ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು