9:39 PM Wednesday26 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಏರ್ ಪೋರ್ಟ್ ನಲ್ಲಿ ಉದ್ಯೋಗದ ಭರವಸೆ: ವಂಡ್ಸೆಯ ಯುವತಿಗೆ 5 ಲಕ್ಷ ರೂ. ವಂಚನೆ

05/12/2021, 20:28

ಉಡುಪಿ(reporterkarnataka.com): ಏರ್ ಪೋರ್ಟ್‌ನಲ್ಲಿ ಉದ್ಯೋಗ ನೀಡುವುದಾಗಿ ಅಪರಿಚಿತ ವ್ಯಕ್ತಿಯೋರ್ವ ಕಳುಹಿಸಿದ ಜಿ-ಮೇಲ್ ಸಂದೇಶವನ್ನು ನಂಬಿ ಯುವತಿಯೊಬ್ಬಳು ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ಕುಂದಾಪುರ ತಾಲೂಕಿನ ವಂಡ್ಸೆ ಗ್ರಾಮದ ಕೈಕಾಣ ಎಂಬಲ್ಲಿ ನಡೆದಿದೆ.

ವಂಡ್ಸೆ ಗ್ರಾಮದ ಕೈಕಾಣ ನಿವಾಸಿ ಅನುಷಾ (21) ವಂಚನೆಗೊಳಗಾದ ಯುವತಿ. ಇವರಿಗೆ 2021 ನೇ ಆಗಸ್ಟ್ ತಿಂಗಳಿನಲ್ಲಿ ಬೆಂಗಳೂರು ಏರ್ ಪೋರ್ಟ್‌ನಲ್ಲಿ ಉದ್ಯೋಗ ನೀಡುವುದಾಗಿ  ಜಿ-ಮೇಲ್ ಸಂದೇಶವೊಂದು ಬಂದಿತ್ತು.

ಅದರಲಿದ್ದ ಮೊಬೈಲ್ ಸಂಖ್ಯೆಗೆ ಸಂಪರ್ಕಿಸಿದ್ದು, ಆಗ ಪರಿಚಿತ ವ್ಯಕ್ತಿ ಉದ್ಯೋಗದ ಕ್ಲಿಯರೆನ್ಸ್ ಮತ್ತು ಇತರೇ ಚಾರ್ಜ್‌ ಎಂದು ಹೇಳಿ ಅನುಷಾ ಅವರಿಂದ ಗೂಗಲ್ ಪೇ ಮೂಲಕ ₹65 ಸಾವಿರ ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ. ಆ ಬಳಿಕ ವಂಚಕರು ₹25 ಲಕ್ಷ ಬಹುಮಾನ ಗೆದ್ದಿದ್ದೀರಿ ಎಂಬುದಾಗಿ ವಾಟ್ಸ್ ಅಪ್ ನಲ್ಲಿ ಅನುಷಾ ಅವರಿಗೆ ಸಂದೇಶವನ್ನು ಕಳುಹಿಸಿದ್ದು, ಅದನ್ನು ನಂಬಿದ ಅನುಷಾ ವಂಚಕರ ಬ್ಯಾಂಕ್ ಖಾತೆಗೆ ಮತ್ತೆ ₹ 5,01,540 ಹಣ ಪಾವತಿಸಿದ್ದಾರೆ.

ವಂಚಕರು ಉದ್ಯೋಗ ಭರವಸೆ ಹಾಗೂ ಬಹುಮಾನದ ಗೆದ್ದಿದ್ದೀರಿ ಎಂದು ನಂಬಿಸಿ ಅನುಷಾ ಅವರಿಂದ ಒಟ್ಟು ₹ 5,66,540 ದೋಚಿ ಮೋಸ ಮಾಡಿದ್ದಾರೆ. ಈ ಬಗ್ಗೆ ಅನುಷಾ ನೀಡಿದ ದೂರಿನಂತೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು