9:44 PM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಅಜೆಕಾರಿನಲ್ಲಿ ಫೆಬ್ರವರಿ 25ರಂದು ಬೃಹತ್ ಹೃದಯ ತಪಾಸಣಾ ಶಿಬಿರ

23/02/2024, 13:19

ಕಾರ್ಕಳ(reporterkarnataka.com): ಕೊರೊನಾ ಕಾಲಘಟ್ಟದ ಬಳಿಕ ದೇಶದಲ್ಲಿ ಹೃದಯಘಾತಕ್ಕೆ ಬಲಿಯಾಗುವವರ ಸಂಖ್ಯೆ ತೀವ್ರ ಏರುಗತಿಯಲ್ಲಿ ಸಾಗುತ್ತಿದ್ದು, ನಗರಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ಬೇಕಾದ ಸುಸಜ್ಜಿತ ಆಸ್ಪತ್ರೆಗಳು ಇವೆ.ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಸುಸಜ್ಜಿತ ಆಸ್ಪತ್ರೆಗಳು ಇಲ್ಲ. ಈ ಹಿನ್ನೆಲೆಯಲ್ಲಿ ಹೃದಯಕ್ಕೆ  ಸ್ಥಳೀಯ ಸಂಘ ಸಂಸ್ಥೆಗಳು  ಸೇರಿದಂತೆ ಈ  ಬೃಹತ್ ಹೃದಯ ತಪಾಸಣಾ ಶಿಬಿರಕ್ಕೆ ಕೈಜೋಡಿಸಿವೆ.
ಅಜೆಕಾರು ಶ್ರೀ ರಾಮ ಮಂದಿರ ಟ್ರಸ್ಟ್, ಅಜೆಕಾರು ಸಾರ್ವಜನಿಕ ಶಾರದ ಮಹೋತ್ಸವ ಸಮಿತಿ , ಡಾ. ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ಮಾಹೆ ಮಣಿಪಾಲ, ಕಾರ್ಡಿಯಾಲಜಿ ಅಟ್ ಡೋರ್ಸ್ಟೆಪ್ ಫೌಂಡೇಶನ್ (ಕ್ಯಾಡ್) ಸಂಸ್ಥೆ ಇದರ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ಹೆಸರಾಂತ ಹೃದಯ ತಜ್ಞ ಡಾ. ಪದ್ಮನಾಭ ಕಾಮತ್ ಅವರ ತಂಡದಿಂದ ನೇತೃತ್ವದಲ್ಲಿ ಫೆ.25ರಂದು ಅಜೆಕಾರು ರಾಮ ಮಂದಿರದಲ್ಲಿ ಬೃಹತ್ ಉಚಿತ ಹೃದಯ ತಪಾಸಣಾ ಶಿಬಿರವು ಬೆ.8ರಿಂದ ಮಧ್ಯಾಹ್ನ 12.30 ವರೆಗೆ ನಡೆಯಲಿದೆ.
ಪ್ರಾಥಮಿಕ ಆರೋಗ್ಯ ಕೇಂದ್ರ ಅಜೆಕಾರು, ಪ್ರಾಥಮಿಕ ಆರೋಗ್ಯ ಕೇಂದ್ರ ದೊಂಡೆರಂಗಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಮುನಿಯಾಲು, ಪ್ರಾಥಮಿಕ ಆರೋಗ್ಯ ಕೇಂದ್ರ ಹಿರ್ಗಾನ , ಇದರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸಾರ್ವಜನಿಕರು ಪ್ರಯೋಜನ ಪಡೆಯಬಹುದಾಗಿದೆ.
ಸುಮಾರು ಒಂದು ಸಾವಿರಕ್ಕೂ ಹೆಚ್ಚು ಹೃದ್ರೋಗ ತಪಾಸಣಾ  ಶಿಬಿರಗಳನ್ನು ಆಯೋಜಿಸಿ   ಯಶಸ್ವಿ ಯಾಗಿರುವ ಮಂಗಳೂರಿನ ಡಾ. ಪದ್ಮನಾಭ ಕಾಮತ್ ತಂಡವೇ ನೇತೃತ್ವ ವಹಿಸಿದೆ.
ಸಾಮಾನ್ಯ ಹೃದಯ ತಪಾಸಣೆ, ಮಧುಮೇಹ ಮತ್ತು ರಕ್ತದೊತ್ತಡದಿಂದ ಬಳಲುತ್ತಿರುವವರು, ಹೃದಯ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವವರು, ಹೃದಯ ಚಿಕಿತ್ಸೆಗೆ ಒಳಗಾದವರು, ಕೆಂಜಿನಿಟಲ್ ಹಾರ್ಡ್ ರಿಮಾಟಿಕ್ ಹಾರ್ಟ್ ತೊಂದರೆಗೆ ಒಳಗಾದರು,ಹೃದಯ ತೊಂದರೆ ಸಂಬಂಧಿತ ಎಲ್ಲಾ ಮಾಹಿತಿಗಳನ್ನು ಪಡೆಯಬಹುದಾಗಿದೆ.
ಫೆ.19ರಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯ ನಿಗದಿಪಡಿಸಿದ ಸೋಮವಾರದಿಂದ ಗ್ರಾಮ‌ ವ್ಯಾಪ್ತಿಗಳ ಎಲ್ಲಾ ಇಸಿಜಿ ಕೇಂದ್ರ ಗಳಲ್ಲಿ ಪೂರ್ವದಲ್ಲಿ ರಿಜಿಸ್ಟ್ರಾರ್ ಮಾಡಬಹುದು. ಇದರಿಂದಾಗಿ ಸಲಹೆ ಸೂಚನೆಗಳನ್ನು ವೇಗವಾಗಿ ಪಡೆಯಲು ಸಾಧ್ಯವಾಗಲಿದೆ. ಅಜೆಕಾರು ವ್ಯಾಪ್ತಿಯಲ್ಲಿ 4 ಇಸಿಜಿ ಕೇಂದ್ರಗಳಿದ್ದು ಹೆಚ್ಚಿನ ಪ್ರಯೋಜನ ಪಡೆಯಬಹುದಾಗಿದೆ.
ಪ್ರತಿಯೊಂದು ಗ್ರಾಮೀಣ ಅರೋಗ್ಯ ಶಿಬಿರವು ತನ್ನದೇ ಆದ ಒಂದು ವೈಶಿಷ್ಟ್ಯತೆ ಹೊಂದಿದೆ.
ನಾನು ಮಾಡುವ ಪ್ರಯತ್ನ ಕೇವಲ ವೈದ್ಯನಾಗಿ ಅಲ್ಲಾ . ಪ್ರತಿಯೊಂದು ಶಿಬಿರ ದಲ್ಲಿ ನಾನು ಸ್ವಯಂಸೇವಕನಾಗಿ ದುಡಿದಿದ್ದೇನೆ. ಆರೋಗ್ಯವೇ ನಮ್ಮ ಆಸ್ತಿಯಾಗಿದೆ. ನಾವೆಲ್ಲರೂ ಜಾತಿ ಮತ ಧರ್ಮ ತೊರೆದು ಈ ಶಿಬಿರದಲ್ಲಿ ಭಾಗವಹಿಸೋಣ.

ಇತ್ತೀಚಿನ ಸುದ್ದಿ

ಜಾಹೀರಾತು