1:09 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಅಜ್ಜಿಬೆಟ್ಟು ಸರಕಾರಿ ಪ್ರಾಥಮಿಕ ಶಾಲೆಯ ಶಿಥಿಲವಾದ ಕಂಪೌಂಡ್ ಭಾಗಶಃ ಕುಸಿತ; ವಾಲಿಕೊಂಡ ಗೇಟ್: ಟಾಯ್ಲೆಟ್ ಇನ್ ಡೇಂಜರ್

12/06/2024, 20:07

ಯಾದವ ಕುಲಾಲ್ ಅಗ್ರಬೈಲು ಬಿ.ಸಿ. ರೋಡ್

info.reporterkarnataka@gmail.com

ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಥಿಲವಾದ ಕಂಪೌಂಡ್ ಜತೆ ಇರುವ ಗೇಟ್ ಬುಧವಾರ ಮಧ್ಯಾಹ್ನ ಮಳೆಯೊಂದಿಗೆ ಬಲವಾದ ಗಾಳಿ ಬೀಸಿದ ಸಂದರ್ಭ ಭಾಗಶಃ ಕುಸಿದಿದೆ.


ಇದರಿಂದ ಗೇಟ್ ವಾಲಿಕೊಂಡಿದ್ದು, ಅದಕ್ಕೆ ಜೋಡಿಕೊಂಡು ಇರುವ ಕಲ್ಲುಗಳೂ ಸಡಿಲಗೊಂಡಿವೆ. ಈ ಗೇಟ್ ಪಕ್ಕದಲ್ಲೇ ಶಾಲಾ ಮಕ್ಕಳ ಶೌಚಾಲಯವಿದ್ದು, ಅಲ್ಲಿಗೆ ತೆರಳುವ ಪುಟ್ಟ ಮಕ್ಕಳು ಈ ಗೇಟ್ ಸನಿಹವೇ ತೆರಳುತ್ತಿದ್ದು, ಇದು ಅಪಾಯಕಾರಿಯಾಗಿ ಪರಿಣಮಿಸುತ್ತಿದೆ. ಇದೀಗ ಮಕ್ಕಳು ಜೀವಭಯದಲ್ಲೇ ತೆರಳಬೇಕಾಗಿದ್ದು, ಶೀಘ್ರ ದುರಸ್ತಿಯಾಗದಿದ್ದರೆ, ಅಪಾಯ ಉಂಟಾಗಬಹುದು. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ತುರ್ತಾಗಿ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಶಾಲಾಭಿವೃದ್ಧಿ ಸಮಿತಿ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮತ್ತೊಮ್ಮೆ ಮನವಿ ಮಾಡಲಾಗಿದೆ. ಶಾಲಾ ಆವರಣ ಗೋಡೆಯ ಬಗ್ಗೆ ಇತ್ತೀಚೆಗಷ್ಟೇ ರಿಪೋರ್ಟರ್ ಕರ್ನಾಟಕ ವರದಿ ಮಾಡಿ ಎಚ್ಚರಿಕೆ ನೀಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು