3:33 AM Monday21 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ…

ಇತ್ತೀಚಿನ ಸುದ್ದಿ

ಅಕ್ರಮ ಸಂಬಂಧಕ್ಕೆ ಅಡ್ಡಿಯಾದಳೆಂದು ಪತ್ನಿಯನ್ನೇ ಚಾಕುನಿಂದ ಇರಿದು ಬರ್ಬರ ಕೊಲೆ!

21/07/2022, 20:47

ಹಾಸನ(reporterkarnataka.com):
ಪತಿಯೊಬ್ಬ ತನ್ನ ಪತ್ನಿಯನ್ನು ಚಾಕುವಿನಿಂದ ಬರ್ಬರವಾಗಿ ಇರಿದು ಕೊಲೆ ಮಾಡಿದ ಭಯಾನಕ ಘಟನೆ ಹಾಸನದಲ್ಲಿ ನಡೆದಿದೆ.

ಕೊಲೆಯಾದ ಗೃಹಿಣಿಯನ್ನು ಅಶ್ವಿನಿ(36) ಎಂದು ಗುರುತಿಸಲಾಗಿದೆ. 17 ವರ್ಷದ ಹಿಂದೆ ಜಗದೀಶ್ ಜೊತೆ ಪ್ರೀತಿಸಿ ಅಶ್ವಿನಿ(36) ಅವರನ್ನು ಮದುವೆಯಾಗಿದ್ದ.

ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಒಬ್ಬ ಪುತ್ರ ಹಾಗೂ ಇನ್ನೊಬ್ಬಳು ಪುತ್ರಿ.

ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ಜಗದೀಶ ಮತ್ತು ಅಶ್ವಿನಿ ಮಧ್ಯೆ ಆಗಾಗ ಜಗಳವಾಗುತ್ತಿತ್ತು. ಆರೋಪಿ ಈ ಹಿಂದೆ ಅಶ್ವಿನಿ ಮೇಲೆ ಹಲ್ಲೆ ಕೂಡ ನಡೆಸಿದ್ದನೆನ್ನಲಾಗಿದೆ. ಈ ಸಂಬಂಧ ಆಕೆ ಪೊಲೀಸರಿಗೆ ದೂರು ದಾಖಲಿಸಿದ್ದಳು. ಜಗದೀಶ ಮೆಡಿಕಲ್ ಶಾಪ್ ಒಂದನ್ನು ತೆರೆದು ನಷ್ಟ ಅನುಭವಿಸಿ ಮುಚ್ಚಿದ್ದ. ಅಶ್ವಿನಿ ಬೇರೊಂದು ಔಷಧ ಮಳಿಗೆಯಲ್ಲಿ ಕೆಲಸಕ್ಕಿದ್ದರು.

ಈ ವೇಳೆ ಬೇರೊಬ್ಬ ಮಹಿಳೆ ಜೊತೆ ಜಗದೀಶ ಸಂಪರ್ಕ ಬೆಳೆಸಿದ್ದ. ಇದನ್ನು ವಿರೋಧಿಸಿದ್ದಕ್ಕೆ ಹಲವು ಬಾರಿ ಹಲ್ಲೆ ನಡೆಸಿದ್ದ. ಮಗಳೊಂದಿಗೆ ಪ್ರತ್ಯೇಕವಾಗಿ ವಾಸವಿದ್ದು ವಿಚ್ಛೇದನ ಕೋರಿ ಕೋರ್ಟ್‌ ಮೆಟ್ಟಿಲೇರಿದ ಅಶ್ವಿನಿ ಜೀವನಾಂಶ ಕೋರಿದ್ದರು. ಜೀವನಾಂಶ ನೀಡಬೇಕಾಗುವುದೆಂಬ ಕಾರಣಕ್ಕೆ ಪತ್ನಿ ಮಗಳನ್ನು ಮನೆಗೆ ಕರೆದುಕೊಂಡು ಬಂದಿದ್ದ.

ಜೀವನಾಂಶ ಕೇಳಿದ್ದರಿಂದ ರೊಚ್ಚಿಗೆದ್ದಿದ್ದ ಜಗದೀಶ ಬುಧವಾರ ಬೆಳಿಗ್ಗೆ ಮಕ್ಕಳನ್ನು ಶಾಲೆಗೆ ಬಿಟ್ಟು ಬಂದು ಪತ್ನಿಗೂ ಮೆಡಿಕಲ್ ಶಾಪ್ ಗೆ ಬಿಟ್ಟು ಬಂದಿದ್ದ. ಮಧ್ಯಾಹ್ನ ಆಕೆಯನ್ನು ಊಟಕ್ಕೆಂದು ಮನೆಗೆ ಕರೆತಂದು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಶಾಲೆ ಬಿಟ್ಟು ಮನೆಗೆ ಬಂದ ಮಕ್ಕಳು ರಕ್ತದ ಮಡುವಿನಲ್ಲಿ ಬಿದ್ದಿದ್ದ ತಾಯಿಯನ್ನು ಕಂಡು ಅಕ್ಕಪಕ್ಕದವರಿಗೆ ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು