7:55 AM Sunday22 - December 2024
ಬ್ರೇಕಿಂಗ್ ನ್ಯೂಸ್
ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು… ಅರಣ್ಯ ಹಕ್ಕು ಕಾಯ್ದೆಯಡಿ ಇದುವರೆಗೆ 16,665 ಪ್ರಕರಣಗಳಲ್ಲಿ ಹಕ್ಕುಪತ್ರ ವಿತರಣೆ: ಸದನದಲ್ಲಿ ಸಿಎಂ…

ಇತ್ತೀಚಿನ ಸುದ್ದಿ

ಅಖಿಲ ಭಾರತ ಕೊಂಕಣಿ ರಜತ ಸಮ್ಮೇಳನದ ಲಾಂಛನ ಬಿಡುಗಡೆ: ಆನ್ ಲೈನ್ ನೋಂದಣಿ ಆರಂಭ

06/10/2023, 21:26

ಮಂಗಳೂರು(reporterkarnataka.com): ಸಾಹಿತ್ಯ ಸಮ್ಮೇಳನಗಳು ಭಾಷೆ ಮತ್ತು ಸಾಹಿತ್ಯದ ವೈವಿಧ್ಯತೆಯನ್ನು ಸಂಭ್ರಮಿಸುವ ಹಬ್ಬ ಗಳಾಗಿದ್ದು , 1939ರಲ್ಲಿ ಕುಮಟಾದ ವಕೀಲ ಮಾಧವ ಮಂಜುನಾಥ ಶಾನುಭಾಗರ ದೂರದೃಷ್ಟಿಯ ಫಲಶೃತಿ ಅಖಿಲ ಭಾರತ ಕೊಂಕಣಿ ಪರಿಷತ್
ಈ ವರೆಗೆ ದೇಶದ ನಾನಾ ಭಾಗಗಳಲ್ಲಿ 24 ರಾಷ್ಟ್ರ ಮಟ್ಟದ ಕೊಂಕಣಿ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಿದ್ದು, 2023 ನವೆಂಬರ್ 4 ಮತ್ತು 5ರಂದು ಎರಡು ದಿನ, ನಗರದ ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ 25ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನ ನಡೆಯಲಿದೆ.


ದೇಶದ ವಿವಿಧ ಭಾಗಗಳಿಂದ ಸುಮಾರು 800 ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ವಿದ್ಯಾರ್ಥಿಗಳಿಗೆ ವಿಶೇಷ ವಿನಾಯತಿ ನೀಡಲಾಗಿದೆ. ಪ್ರತಿನಿಧಿಗಳಿಗೆ ವಸತಿ ಮತ್ತು ಊಟದ ವ್ಯವಸ್ಥೆ ಮಾಡಲಾಗಿದ್ದು ಒನ್ಲೈನ್ ಮೂ ಲಕ ನೋಂದಣಿ ಆರಂಭಿಸಲಾಗಿದೆ ಎಂದು 25 ನೇ
ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೊಂಕಣಿ ಕವಿ, ಚಿಂತಕ, ರಾಹುಲ್ ಎಡ್ವಟೈಸರ್ಸ್ ಮಾಲಕ ಟೈಟಸ್ ನೊರೊನ್ಹಾ ಮಾಹಿತಿ ನೀಡಿದರು .
25ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ
ಸಮ್ಮೇಳನದ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.
ಸಂತ ಅಲೋಶಿಯಸ್ ಕಾಲೇಜಿನ ಕೊಂಕಣಿ ಸಂಸ್ಥೆಯ ಸಂಚಾಲಕ ಖ್ಯಾತ ಕಲಾವಿದ ಪಿಂಟೊ ವಾಮಂಜೂರ್ ಸಮ್ಮೇ ಳನದ ಲಾಂಛನವನ್ನು ತಯಾರಿಸಿದ್ದಾರೆ. ಹಿರಿಯ ಪತ್ರಕರ್ತರಾದ , 1974ರಲ್ಲಿ ಕರ್ನಾಟಕದಲ್ಲಿ ಕೊಂಕಣಿ ಭಾಷಾ ಮಂಡಳದ ಸ್ಥಾಪನೆಗಾಗಿ ಶ್ರಮಿಸಿದ ವಿಮಲಾ ವಿ. ಪೈ ಜೀವನ ಸಿದ್ದಿ ಪ್ರಶಸ್ತಿ ಪುರಸ್ಕೃತ, ರಾಕ್ಣೊ ಪತ್ರಿಕೆಯ ವಿಶ್ರಾಂತ ಸಂಪಾದಕ ಫಾ | ಮಾ ರ್ಕ್ ವಾಲ್ಡರ್ ಸಮ್ಮೇಳನದ ಲಾಂಛನ ಬಿಡುಗಡೆ ಮಾಡಿದರು. ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ನಂದಗೋಪಾಲ ಶೆಣೈ ಮಾಹಿತಿ ಪುಸ್ತಕ ಬಿಡುಗಡೆ ಮಾಡಿದರು. ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಹಿರಿಯ ಸಾಹಿತಿ ಗೋಕುಲದಾಸ ಪ್ರಭು ನೋಂದಣಿ ಪುಸ್ತಕ ಬಿಡುಗಡೆ ಮಾಡಿದರು. ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ನೊ ) ಅಧ್ಯಕ್ಷ ಆಲ್ವಿನ್ ಡಿಸೋಜಾ,ಪಾನೀರ್ ಕ್ಯೂ ಆರ್ ಕೋಡ್
ಮೂಲಕ ಒನ್ಲೈನ್ ನೋಂದಣಿಗೆ ವಿಧ್ಯುಕ್ತ ಚಾಲನೆ ನೀಡಿದರು . ಅಖಿಲ ಭಾರತ ಕೊಂಕಣಿ ಪರಿಷತ್ ಅಧ್ಯಕ್ಷ ಅರುಣ್ ಉಭಯ್ಕರ್ ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು .
ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಪತ್ರಕರ್ತ ಎಚ್. ಎಂ . ಪೆರ್ನಾ ಲ್ ಸ್ವಾಗತಿಸಿ ಅತಿಥಿಗಳ ಪರಿಚಯ ಮಾಡಿದರು . ಸಾಹಿತ್ಯ ಅಕಾಡೆಮಿ, ಹೊಸದಿಲ್ಲಿ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಕೊಂಕಣಿ ಭಾಷಾ ಮುಖ್ಯಸ್ಥ ಕವಿ ಮೆಲ್ವಿನ್ ರೊ ಡ್ರಿಗಸ್
ಕಾರ್ಯಕ್ರಮ ನಿರೂಪಿಸಿದರು . ವಿಶ್ವ ಕೊಂಕಣಿ ಕೇಂದ್ರದ ಮುಖ್ಯ ಕಾರ್ಯನಿರ್ವಹಣಾಧಿಕಾ ರಿ ಗುರುದತ್ತ ಬಂಟ್ವಾಳ್ಕರ್ ವಂದಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು