12:16 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ: ಕಾರ್ಯಾಲಯ ಉದ್ಘಾಟನೆ

24/09/2023, 10:42

ಮಂಗಳೂರು(reporterkarnataka.com): ನವೆಂಬರ್ ತಿಂಗಳ 4 ಮತ್ತು 5ರಂದು ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರದಲ್ಲಿ ನಡೆಯುವ 25ನೇ ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಸಮ್ಮೇಳನದ ಕಾರ್ಯಾಲಯದ ಉದ್ಘಾಟಣೆ ಮತ್ತು ಸ್ವಾಗತ ಸಮಿತಿಯ ಪ್ರಥಮ ಸಭೆ ಬೆಂದೂರ್‌ವೆಲ್ ಟಾಯ್ಟಸ್ ನೊರೊನ್ಹಾ ಅವರ ರಾಹುಲ್ ಎಡ್ವರ್ಟೈರರ್ಸ್ ಕಚೇರಿಯಲ್ಲಿ ನಡೆಯಿತು.
ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷರಾದ ನಂದಗೋಪಾಲ ಶೆಣೈ ದೀಪ ಬೇಳಗಿಸಿ, ಸಮ್ಮೇಳನ ಕಾರ್ಯಾಲಯ ಮತ್ತು ಸ್ವಾಗತ ಸಮಿತಿಯ ಪ್ರಥಮ ಸಭೆಗೆ ವಿಧ್ಯುಕ್ತ ಚಾಲನೆ ನೀಡಿದರು. ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಸಾಹಿತಿ ಗೋಕುಲದಾಸ ಪ್ರಭು, ಶಾಲೆಗಳಲ್ಲಿ ಕೊಂಕಣಿ ಶಿಕ್ಷಣ ಚಳುವಳಿಯ ನೇತಾರ, ಖ್ಯಾತ ಹೃದ್ರೋಗ ತಜ್ಞ ಡಾ| ಕಸ್ತೂರಿ ಮೋಹನ ಪೈ, ಮಾತೃ ಸಂಸ್ಥೆ ಅಖಿಲ ಭಾರತ ಕೊಂಕಣಿ ಸಾಹಿತ್ಯ ಪರಿಷತ್ತಿನ ಕಾರ್ಯಾಧ್ಯಕ್ಷ ಚೇತನ್ ಆಚಾರ್ಯ, ಗೋವಾ, ಸಾಹಿತ್ಯ ಅಕಾಡೆಮಿ, ನವ ದೆಹಲಿ ಕಾರ್ಯಕಾರಿ ಸಮಿತಿ ಸದಸ್ಯ ಮತ್ತು ಕೊಂಕಣಿ ಭಾಷಾ ಮುಖ್ಯಸ್ಥ ಕವಿ ಮೆಲ್ವಿನ್ ರೊಡ್ರಿಗಸ್ ಮತ್ತು ಕೊಂಕಣಿ ಕವಿ ಮತ್ತು ಚಿಂತಕ ಟೈಟಸ್ ನೊರೊನ್ಹಾ ಈ ಸಂದರ್ಭದಲ್ಲಿ ಹಾಜರಿದ್ದರು.
ಸಾಹಿತ್ಯ ಸಮ್ಮೇಳನದ ಮಾತೃ ಸಂಸ್ಥೆ ಅಖಿಲ ಭಾರತ ಕೊಂಕಣಿ ಪರಿಷತ್ ನ ಕಾರ್ಯಾಧ್ಯಕ್ಷ ಚೇತನ್ ಆಚಾರ್ಯ, ಗೋವಾ ಅಖಿಲ ಭಾರತ ಕೊಂಕಣಿ ಪರಿಷತ್ ಸ್ಥಾಪನೆ, ಪರಿಷತ್ತಿನ ಧ್ಯೇಯೋದ್ದೇಶಗಳು, ಈ ವರೆಗೆ ಭಾರತದಾದ್ಯಂತ ನಡೆದ ಕೊಂಕಣಿ ಭಾಷಾ ಚಳುವಳಿಗಳು, ಕೊಂಕಣಿ ಭಾಷೆಗೆ ರಾಷ್ಟ್ರ‍ೀಯ ಭಾಷೆಯ ಸ್ಥಾನಮಾನ ಲಭಿಸಲು ಪರಿಷತ್ ವತಿಯಿಂದ ಹಿರಿಯರು ನಡೆಸಿದ ಹೋರಾಟ ಮತ್ತು ಕೊಂಕಣಿ ಭಾಷೆಯ ಬೆಳವಣಿಗೆಯ ನಿಟ್ಟಿನಲ್ಲಿ ಎದುರಿಸಬೇಕಾದ ಸವಾಲುಗಳು ಈ ಬಗ್ಗೆ ಚುಟುಕಾಗಿ ವಿವರಿಸಿದರು.
ಸಾಹಿತ್ಯ ಅಕಾಡೆಮಿ, ನವ ದೆಹಲಿ ಕಾರ್ಯಕಾರಿ ಸಮಿತಿ ಸದಸ್ಯ ಮತ್ತು ಕೊಂಕಣಿ ಭಾಷಾ ಮುಖ್ಯಸ್ಥ ಕವಿ ಮೆಲ್ವಿನ್ ರೊಡ್ರಿಗಸ್ ಮಂಗಳೂರಿನಲ್ಲಿ ಸುಮಾರು ಮೂರು ದಶಕಗಳ ಹಿಂದೆ ನಡೆದ ಪರಿಷತ್ತಿನ ಅಧಿವೇಶನವನ್ನು ಸ್ಮರಿಸಿ, ಇದೇ ಪ್ರಥಮ ಬಾರಿಗೆ ಮಂಗಳೂರಿನಲ್ಲಿ 25ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ರಜತ ಸಮ್ಮೇಳನವನ್ನು ಸ್ಮರಣಾರ್ಹ ಮಾಡುವ ನಿಟ್ಟಿನಲ್ಲಿ ಕೊಂಕಣಿಗಾಗಿ ಶ್ರಮಿಸುವ ಸಂಘ ಸಂಸ್ಥೆಗಳ ಸಹಕಾರ ಕೋರಿದರು.
ಕಾರ್ಯಕ್ರಮಕ್ಕೆ ವಿಶ್ವ ಕೊಂಕಣಿ ಕೇಂದ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗುರುದತ್ತ ಬಂಟ್ವಾಳ್‌ಕರ್, ಸಂತ ಅಲೋಶಿಯಸ್ ಕಾಲೇಜಿನ ಕೊಂಕಣಿ ವಿಭಾಗ ಮುಖ್ಯಸ್ಥೆ ಪ್ರೊ| ಪ್ಲೋರಾ ಕಾಸ್ತೆಲಿನೊ, ಖ್ಯಾತ ನಿರೂಪಕಿ ಸುಚಿತ್ರಾ ಎಸ್. ಶೆಣೈ, ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ವೇಂಕಟೇಶ ನಾಯಕ್, ರಾಕ್ಣೊ ಪತ್ರಿಕೆಯ ಸಂಪಾದಕ ವಂ| ರೂಪೇಶ್ ಮಾಡ್ತಾ, ಉಜ್ವಾಡ್ ಪತ್ರಿಕೆಯ ಸಂಪಾದಕ ವಂ| ಆಲ್ವಿನ್ ಕಾರ್ಮೆಲಿತ್, ಕೊಂಕಣಿ ನಾಟಕ ಸಭಾದ ಫ್ಲೋಯ್ಡ್ ಕಾಸ್ಸಿಯಾ, ಜೆರಾಲ್ದ್ ಕೊನ್ಸೆಸೊ, ಆಕಾರ್ ಸಂಸ್ಥೆಯ ದಯಾ ವಿಕ್ಟರ್ ಲೋಬೊ, ಸಾಹಿತಿ ವಿನ್ಸೆಂಟ್ ಪಿಂಟೊ, ಆಂಜೆಲೋರ್ ಮತ್ತಿತರ ಗಣ್ಯರು ಹಾಜರಿದ್ದು ಸಲಹೆ ಸೂಚನೆಗಳನ್ನು ನೀಡಿದರು.
ಸಾಹಿತ್ಯ ಅಕಾಡೆಮಿ, ನವದೆಹಲಿ ಕೊಂಕಣಿ ಭಾಷಾ ಸಲಹಾ ಸಮಿತಿ ಸದಸ್ಯ ಮತ್ತು ಪತ್ರಕರ್ತ ಎಚ್ಚೆಮ್, ಪೆರ್ನಾಲ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು