1:06 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಅಕ್ಕಿ ನೀಡದೆ ಅನ್ನಭಾಗ್ಯ ಯೋಜನೆ ತಡೆಗೆ ಕೇಂದ್ರ ಯತ್ನ: ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ

14/06/2023, 23:20

ಬೆಂಗಳೂರು(reporterkarnataka.com): ಕೇಂದ್ರ ಸರಕಾರ ಅಕ್ಕಿ ನೀಡದೆ ಅನ್ನಭಾಗ್ಯ ಯೋಜನೆ ಅನುಷ್ಠಾನಗೊಳ್ಳದಂತೆ ನೋಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
ಬೆಂಗಳೂರಿನ ಶಕ್ತಿ ಭವನದಲ್ಲಿ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರ ಅಕ್ಕಿ ಇಟ್ಟುಕೊಂಡು ಕೊಡುವುದಿಲ್ಲ ಎನ್ನುತ್ತಿದೆ. ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರಕಾರ ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲನ್ನು ಕಸಿದುಕೊಂಡಿದೆ. ಕೇಂದ್ರ ಎಷ್ಟೇ ಷಡ್ಯಂತ್ರ ಮಾಡಿದರೂ ರಾಜ್ಯದ ಜನರಿಗೆ ನಾವು ಅಕ್ಕಿ ನೀಡುವುದು ಗ್ಯಾರಂಟಿ ಎಂದು ಮುಖ್ಯಮಂತ್ರಿ ಹೇಳಿದರು.
ಕೇಂದ್ರ ಸರಕಾರವನ್ನು ಬಡವರ ವಿರೋಧಿಗಳು ಎಂದು ಕರೆಯಬೇಕು. ಕೇಂದ್ರವೇನು ಉಚಿತವಾಗಿ ಅಕ್ಕಿ ನೀಡುವುದಿಲ್ಲ. ನಾವು ಹಣ ನೀಡಿ ಅಕ್ಕಿ ಪಡೆಯುವುದು.
ಆದರೆ ಈಗ ಕರ್ನಾಟಕಕ್ಕೆ ನೀಡುವುದಿಲ್ಲ ಎನ್ನುವ ತೀರ್ಮಾನಕ್ಕೆ ಕೇಂದ್ರ ಬಂದಿದೆ.
ನಾವು ಮತ್ತೆ ಕೇಂದ್ರಕ್ಕೆ ಮನವಿ ಮಾಡುತ್ತೇವೆ ಎಂದರು.
ಕಾಂಗ್ರೆಸ್ ಸರಕಾರಕ್ಕೆ ಕೆಟ್ಟ ಹೆಸರು ತರಲು ಈ ರೀತಿಯ ಷಡ್ಯಂತ್ರಗಳನ್ನು ಮಾಡುತ್ತಿದ್ದಾರೆ .ರಾಜ್ಯ ಸರಕಾರ ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡುದಾರರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಿದ್ದ ಹಿನ್ನೆಲೆ, ಭಾರತೀಯ ಆಹಾರ ನಿಗಮಕ್ಕೆ ಪ್ರತಿ ತಿಂಗಳಿಗೆ 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿಯ ಅಗತ್ಯವಿದೆ ಎಂದು ಕೋರಿ ಜೂ.9ರಂದು ಪತ್ರ ಬರೆಯಲಾಗಿತ್ತು. ಇದಕ್ಕೆ ಜೂ.12ರಂದು ಭಾರತೀಯ ಆಹಾರ ನಿಗಮವು ಒಪ್ಪಿಗೆ ಸೂಚಿಸಿ ಕ್ವಿಂಟಾಲ್‍ಗೆ 3400 ರೂ.ದರದಲ್ಲಿ ಅಕ್ಕಿ ಪೂರೈಕೆ ಮಾಡುವುದಾಗಿ ನಮಗೆ ಪತ್ರ ಬರೆದಿತ್ತು. ಇದಾದ ನಂತರ ಕೇಂದ್ರ ಸರಕಾರ ರಾಜಕೀಯ ನಿರ್ಧಾರ ತೆಗೆದುಕೊಂಡಿದೆ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.
ಜೂ.13ರಂದು ಕೇಂದ್ರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವಾಲಯವು ಭಾರತೀಯ ಆಹಾರ ನಿಗಮಕ್ಕೆ ಪತ್ರ ಬರೆದು 15 ಲಕ್ಷ ಮೆಟ್ರಿಕ್
ಟನ್ ಗೋಧಿ ಹಾಗೂ ಅಕ್ಕಿಯನ್ನು ತೆರೆದ ಮಾರುಕಟ್ಟೆಯಲ್ಲಿ ಮಾರಾಟ ಯೋಜನೆಯಡಿ ಮಾರಾಟ ಮಾಡಲು ಸೂಚಿಸಿದೆ. ಈಶಾನ್ಯ ರಾಜ್ಯಗಳನ್ನು ಹೊರತುಪಡಿಸಿ, ಇತರ ರಾಜ್ಯಗಳಿಗೆ ಮಾರಾಟ ಮಾಡುವುದನ್ನು ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ. ಇದು ಕೇಂದ್ರದಿಂದ ಆಗುತ್ತಿರುವ ದೊಡ್ಡ ಮೋಸ. ಅನ್ನಭಾಗ್ಯ ಕಾರ್ಯಕ್ರಮವನ್ನು ಜಾರಿಗೊಳಿಸದೆ ಇರುವಂತೆ ಅಡ್ಡಿಪಡಿಸುವುದು ಇದರ ಹಿಂದಿನ ಉದ್ದೇಶ ಎಂದು ಅವರು ಆರೋಪಿಸಿದರು.
ಅಕ್ಕಿ ಬೆಳೆಯುವ ರಾಜ್ಯಗಳಾದ ಪಂಜಾಬ್, ತೆಲಂಗಾಣ, ಆಂಧ್ರ, ಛತ್ತಿಸ್‍ಗಡ, ಹರಿಯಾಣದವರಿಗೆ ಈಗಾಗಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿದ್ದಾರೆ. ಜೂ.15ಕ್ಕೆ ಸಚಿವ ಕೆ.ಎಚ್.ಮುನಿಯಪ್ಪ ತೆಲಂಗಾಣ ಮುಖ್ಯಮಂತ್ರಿಯನ್ನು ಭೇಟಿಯಾಗಲಿದ್ದಾರೆ. ಅಂತೆಯೆ ಛತ್ತೀಸ್‍ಗಢದಿಂದಲೂ ಲಭ್ಯವಿರುವ ಅಕ್ಕಿಯ ಮಾಹಿತಿ ಪಡೆಯುತ್ತೇವೆ. ಒಟ್ಟಿನಲ್ಲಿ ಜನರಿಗೆ ಅನ್ನಭಾಗ್ಯ ದೊರೆಯುವಂತೆ ಮಾಡುವುದು ನಮ್ಮ ಗುರಿ ಎಂದು ಸಿದ್ದರಾಮಯ್ಯ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು