ಇತ್ತೀಚಿನ ಸುದ್ದಿ
ಅಕ್ರಮ ಆಸ್ತಿ ಆರೋಪ: ವಾಣಿಜ್ಯ ತೆರಿಗೆ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: ದಾಖಲೆಗಳ ಪರಿಶೀಲನೆ
31/01/2024, 09:54
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಮೇಲೆ
ವಾಣಿಜ್ಯ ಅಧಿಕಾರಿ ನೇತ್ರಾವತಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದೆ.
ತರೀಕೆರೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿರುವ ನೇತ್ರಾವತಿ ಅವರ ಕಡೂರು ಪಟ್ಟಣದಲ್ಲಿರುವ ಮನೆ ಮೇಲೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಅಧಿಕಾರಿಗಳು
ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ.
ನೇತ್ರಾವತಿ ಅವರು 13 ವರ್ಷದಿಂದ ಅಧಿಕ ಅಸ್ತಿ ಹೊಂದಿರುವ ಆರೋಪದಡಿಯಲ್ಲಿ ದಾಳಿ ನಡೆದಿದೆ. ಲೋಕಾಯುಕ್ತ ಇನ್ಸ್ ಸ್ಪೆಕ್ಟರ್ ಅನಿಲ್ ರಾಥೋಡ್ ದಾಳಿಯ ನೇತೃತ್ವ ವಹಿಸಿದ್ದರು.