ಇತ್ತೀಚಿನ ಸುದ್ದಿ
ಅಕ್ರಮ ಗೋಸಾಗಾಟ ತಡೆಯಲು ಪೊಲೀಸ್ ಇಲಾಖೆಗೆ ಶಾಸಕ ವೇದವ್ಯಾಸ ಕಾಮತ್ ಸೂಚನೆ
04/07/2022, 17:09

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಅಕ್ರಮ ಗೋಸಾಗಾಟ ಹಾಗೂ ಗೋವಧೆ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಶಾಸಕ ಡಿ. ವೇದವ್ಯಾಸ ಕಾಮತ್ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾದರೂ ಅಕ್ರಮವಾಗಿ ಗೋಹತ್ಯೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕೇರಳ – ಕರ್ನಾಟಕದಲ್ಲಿ ಅಕ್ರಮವಾಗಿ ಕಾರ್ಯಚರಿಸುವ ಕಸಾಯಿ ಖಾತೆಗಳನ್ನು ನಿರ್ಮಿಸಿ ಗೋಹತ್ಯೆ ನಡೆಸುವ ಕುರಿತು ದೂರುಗಳು ಕೇಳಿಬರುತ್ತಿರುವ ಕಾರಣ ಅಂತಹ ಕಸಾಯಿಖಾನೆಗಳಿದ್ದರೆ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಇಲಾಖೆಗೆ ಸೂಚನೆ ನೀಡಿದ್ದಾರೆ.
ಅಕ್ರಮವಾಗಿ ಗೋಸಾಗಾಟ ಮಾಡುವವ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಜಿಲ್ಲೆಯ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಾರ್ಯೋನ್ಮುಖರಾಗಬೇಕು. ಜಿಲ್ಲೆಯಲ್ಲಿ ತರುವ ಕೃತ್ಯಗಳಿಗೆ ಆಸ್ಪದ ನೀಡಬಾರದು ಎಂದು ಶಾಸಕ ಕಾಮತ್ ಹೇಳಿದ್ದಾರೆ.