7:01 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಅಕ್ರಮ ಕಳ್ಳಭಟ್ಟಿ ಅಡ್ಡೆಯ ಮೇಲೆ ಪೊಲೀಸರ ದಾಳಿ: ಸುಮಾರು 400 ಲೀಟರ್ ಮದ್ಯ ನಾಶ; ಆರೋಪಿಗಳ ಹುಡುಕಾಟ

13/02/2022, 19:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಬಾಳೂರು ಠಾಣಾ ವ್ಯಾಪ್ತಿಯ ಮಲೆಮನೆ ಗುಡ್ಡದಲ್ಲಿರುವ ಅಕ್ರಮ ಕಳ್ಳಬಟ್ಟಿ ಅಡ್ಡೆಯ ಮೇಲೆ ಬಾಳೂರು ಪೊಲೀಸರು ದಾಳಿ ನಡೆಸಿದ್ದಾರೆ.

ಮಲೆಮನೆ ಗ್ರಾಮದಲ್ಲಿ ಅಕ್ರಮ ಕಳ್ಳಭಟ್ಟಿ ದಂಧೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನಲೆಯಲ್ಲಿ ಬಾಳೂರು ಠಾಣಾ ಪಿಎಸ್‌ಐ ರೇಣುಕಾ ಅವರ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು 25 ಕೊಡಗಳಲ್ಲಿ ತುಂಬಿದ್ದ ಸುಮಾರು 400 ಲೀಟರ್ ಕಳ್ಳಭಟ್ಟಿ ಕೊಳೆಯನ್ನು ನಾಶ ಪಡಿಸಿಕೊಂಡಿದ್ದಾರೆ. ಕೃತ್ಯಕ್ಕೆ ಬಳಸಿದ ಪರಿಕರಗಳನ್ನು ವಶಪಡಿಸಿಕೊಂಡಿದ್ದು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ರಿಪೋರ್ಟರ್ ಕರ್ನಾಟಕಕ್ಕೆ ಪ್ರತಿಕ್ರಿಯಿಸಿರುವ ಬಾಳೂರು ಠಾಣೆಯ ಪಿಎಸ್‌ಐ ರೇಣುಕಾ ಅವರು, ಅಕ್ರಮ ಕಳ್ಳಭಟ್ಟಿ ದಂಧೆ ನಡೆಸುತ್ತಿರುವ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿಗಳ ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಕಳ್ಳಬಟ್ಟಿ ದಂಧೆ ಹಾಗೂ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣಕ್ಕೆ ಒತ್ತಾಯ ಕಳ್ಳಭಟ್ಟಿ ದಂಧೆ ಮಿತಿಮೀರಿದ್ದು ಭಾನುವಾರ ದೊಡ್ಡ ಪ್ರಮಾಣದಲ್ಲಿ ಕಳ್ಳಭಟ್ಟಿ ಕೊಳೆ ಪತ್ತೆಯಾಗಿರುವುದು ಆತಂಕಕಾರಿ ಬೆಳೆವಣಿಗೆಯಾಗಿದೆ. ಮಲೆನಾಡಿನ ಗ್ರಾಮಗಳ ಸ್ವಾಸ್ಥ್ಯವನ್ನು ಕೆಡಿಸುವ ಕಳ್ಳಭಟ್ಟಿ ದಂಧೆಗೆ ಕಡಿವಾಣ ಹಾಕಬೇಕು ಮತ್ತು ಆರೋಪಿಗಳನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು. ಬಾಳೂರು ಠಾಣಾ ವ್ಯಾಪ್ತಿಯ ಕೆಲ ದಿನಸಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವುದು ಕಂಡು ಬಂದಿದ್ದು ಈ ಬಗ್ಗೆ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು