9:03 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಅಕ್ರಮ ಕಸಾಯಿಖಾನೆಯ ಮೇಲೆ ಕ್ರಮ: ಪೊಲೀಸ್ ಇಲಾಖೆಗೆ ಶಾಸಕ ವೇದವ್ಯಾಸ ಕಾಮತ್ ಸೂಚನೆ

04/04/2022, 16:09

ಮಂಗಳೂರು(reporterkarnataka.com); ಮಂಗಳೂರು ನಗರದಲ್ಲಿ ಕಾರ್ಯಚರಿಸುತ್ತಿರುವ‌ ಅಕ್ರಮ ಕಸಾಯಿಖಾನೆಗಳನ್ನು ಪತ್ತೆ ಹಚ್ಚಿ ಕ್ರಮ ಜರಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. 

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದರೂ ಅಕ್ರಮವಾಗಿ ಗೋಸಾಗಾಟ, ಗೋಹತ್ಯೆಗಳು ನಡೆಯುತಿದ್ದು, ಇದರ ವಿರುದ್ಧ ಕಾನೂನು ಕ್ರಮ ಜರಗಿಸುವಂತೆ ಸೂಚನೆ ನೀಡಿದ್ದಾರೆ. ಕೇರಳ – ಕರ್ನಾಟಕ ಗಡಿಭಾಗದಲ್ಲಿ ಅಕ್ರಮ ಕಸಾಯಿಖಾನೆ ನಿರ್ಮಾಣವಾಗಿದ್ದು ಇಲ್ಲಿಂದ ಕದ್ದೊಯ್ಯುವ ಗೋವುಗಳನ್ನು ವಧಿಸಿ ಮುಡಿಪು ಮೂಲಕವಾಗಿ ನಗರಕ್ಕೆ ಗೋಮಾಂಸ ಸಾಗಾಟ ನಡೆಯುತ್ತಿದೆ. ನಗರದಲ್ಲಿ ಕಾರ್ಯಾಚರಿಸುತ್ತಿರುವ ಅಕ್ರಮ ಕಸಾಯಿಖಾನೆಗಳನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಜರಗಿಸಲು ಪೊಲೀಸ್ ಇಲಾಖೆಗೆ ಶಾಸಕ ಕಾಮತ್ ಸೂಚನೆ ನೀಡಿದ್ದಾರೆ.

ಶಾಂತಿಯುತವಾಗಿರುವ ಕರಾವಳಿಯಲ್ಲಿ ಗೋಕಳ್ಳತನ, ಗೋಹತ್ಯೆಯ ಕೋಮು ಗಲಭೆ ಎಬ್ಬಿಸಲು ಕೆಲವೊಂದು ಶಕ್ತಿಗಳು ಪ್ರಯತ್ನಿಸುತ್ತಿವೆ. ಅವೆಲ್ಲವನ್ನೂ ಮಟ್ಟ ಹಾಕಲು ಸರಕಾರ ಮತ್ತು ಪೊಲೀಸ್ ಸಮರ್ಥವಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು