5:04 PM Tuesday26 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ಅಕ್ರಮ ಮದ್ಯ ಮಾರಾಟ ನಿಯಂತ್ರಣಕ್ಕೆ ರೈತ ಸಂಘ ಆಗ್ರಹ: ವಿಶೇಷ ತಂಡ ರಚಿಸಿ ಅಕ್ರಮಕ್ಕೆ ಕಡಿವಾಣ ಹಾಕಲು ಆಗ್ರಹ

18/09/2022, 20:07

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ  ತಾಲ್ಲೂಕಿನಾದ್ಯಂತ ಗ್ರಾಮೀಣ ಪ್ರದೇಶಗಳು ಹಾಗೂ ಡಾಬಾಗಳಲ್ಲಿ ಅಕ್ರಮ ಮದ್ಯ ಮಾರಾಟ ನಿಯಂತ್ರಣ ಮಾಡಲು ವಿಶೇಷ ತಂಡ ರಚಿಸುವಂತೆ ಆಗ್ರಹಿಸಿ ರೈತ ಸಂಘದಿಂದ ಅಬಕಾರಿ ಇಲಾಖೆ ಮುಂದೆ ಪ್ರತಿಭಟನೆ ನಡೆಸಲಾಯಿತು.

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ ಮನವಿ ಸಲ್ಲಿಸಿ ಮಾತನಾಡಿ , ಮಾಜಿ ವಿಧಾನ ಸಭಾಧ್ಯಕ್ಷ ಹಾಗೂ ಶಾಸಕರಾದ ಕೆ.ಆರ್.ರಮೇಶ್‌ ಕುಮಾರ್‌ರ ತವರಿನ ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ದಂಧೆ ರಾಜಾರೋಷವಾಗಿ ನಡೆಯುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದೆ ಮೌನವಾಗಿದ್ದಾರೆ ಎಂದು ಆರೋಪಿಸಿದರು. 

ಕುಡಿಯುವವನು ಕೇವಲ ಮದ್ಯವನ್ನು ಕುಡಿಯವುದಿಲ್ಲ. ತಾಯಿಯ ಸುಖ, ಹೆಂಡತಿಯ ನೆಮ್ಮದಿ, ಮಕ್ಕಳ ಕನಸುಗಳು , ತಂದೆಯ ಪ್ರತಿಷ್ಠೆ ಎಲ್ಲವನ್ನು ಒಂದೇ ಗುಟಕಿನಲ್ಲಿ ಕುಡಿದು ಇಡೀ ಸಂಸಾರದ ಮಾನ ಸಾರ್ವಜನಿಕವಾಗಿ ಹರಾಜು ಹಾಕಿ ಕುಟುಂಬಗಳೇ ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಗಳು ಇದ್ದರೂ ಈ ದುರಂತಗಳ ತಡೆಗೆ ಅಬಕಾರಿ ಇಲಾಖೆಯ ಅಧಿಕಾರಿಗಳು ಮುಂದಾಗುತ್ತಿಲ್ಲ ಎಂದು ಟೀಕಿಸಿದರು. 

ಸಾಂಕ್ರಾಮಿಕ ರೋಗಗಳು ಅತಿವೃಷ್ಟಿಯಿಂದ ತತ್ತರಿಸಿ ದುಡಿಯುವ ಕೈಗೆ ಕೆಲಸ ವಿಲ್ಲದೆ ಬೆಳೆದ ಬೆಳೆಗೆ ಬೆಲೆ ಇಲ್ಲದೆ ತತ್ತರಿಸಿರುವ ಜನ ಸಾಮಾನ್ಯರು ಬುದುಕು ಕಟ್ಟಿಕೊಳ್ಳುತ್ತಿರುವ ಸಮಯದಲ್ಲಿ ಗ್ರಾಮೀಣ ಪ್ರದೇಶಗಳ ಅಕ್ರಮ ಮದ್ಯ ಮಾರಾಟ ಬಡವರ ಅನ್ನವನ್ನು ಕಸಿದುಕೊಳ್ಳುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ರೈತ ಸಂಘದ ತಾಲ್ಲೂಕು ಅಧ್ಯಕ್ಷ ತೆರಹಳ್ಳಿ ಆಂಜಿನಪ್ಪ ಮಾತನಾಡಿ , ಸರ್ಕಾರ ನಿಂತಿರುವುದು ಬಡ ರೈತ ಕೂಲಿಕಾರ್ಮಿಕರ ಕುಟುಂಬಗಳನ್ನು ಹಾಳು ಮಾಡುವ ಮದ್ಯ ಮಾರಾಟದ ಆದಾಯದಿಂದ ಎಂಬ ಹೇಳಿಕೆಗಳು ಖಂಡನೀಯವಾಗಿದ್ದು , ಅಕ್ರಮ ಮದ್ಯ ಮಾರಾಟ ತಡೆಯದಿದ್ದರೆ ಬಡವರು ಹಾಗೂ ಮಹಿಳೆಯರ ಶಾಪ ತಟ್ಟಲಿದೆ ಎಂದು ಎಚ್ಚರಿಸಿದರು.

ಲಕ್ಷಾಂತರ ಕುಟುಂಬಗಳ ಸ್ವಾಭಿಮಾನ ಬುದುಕು ಕಟ್ಟಿಕೊಟ್ಟಿರುವ ಹಾಲಿನ ದರ 25 ರೂಪಾಯಿ ಅದೇ ಕುಟುಂಬಗಳನ್ನು ನಾಶ ಮಾಡುವ ಮದ್ಯದ ಬೆಲೆ 150 ರಿಂದ 1000 ರೂಪಾಯಿಯವರೆಗೆ ಮಾರಾಟ ಮಾಡುತ್ತಿರುವ ಸರ್ಕಾರಕ್ಕೆ ಬಡವನ ಬದುಕಿನ ಬೆಲೆ ಗೊತ್ತಿಲ್ಲ ಎಂದರು. 

24 ಗಂಟೆಯಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ ಮದ್ಯ ಮಾರಾಟ ಮಾಡುವ ದಂಧೆ ಕೋರರ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಸಾವಿರಾರು ಮಹಿಳೆಯರೊಂದಿಗೆ ಅಹೋರಾತ್ರಿ ಧರಣಿ ನಡೆಸುವ ಎಚ್ಚರಿಕೆ ನೀಡಿದರು.

ಹೋರಾಟದಲ್ಲಿ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ , ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ , ಕೋಟೆ ಶ್ರೀನಿವಾಸ್ , ಶೇಷಾದ್ರಿ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ , ಮಂಗಸಂದ್ರ ತಿಮ್ಮಣ್ಣ , ರಾಮಕ್ಕ , ವೆಂಕಟಮ್ಮ , ಕೊಲ್ಲೂರು ವೆಂಕಟ್ , ರಾಜೇಂದ್ರಣ್ಣ , ಶೇಕ್ಷ ಪಿವುಲ್ಲಾ , ಕುಡುವನ ಹಳ್ಳಿ ಸುರೇಶ್ , ಮುಳಬಾಗಿಲು ತಾಲ್ಲೂಕು ಅಧ್ಯಕ್ಷ ಯಲುವಳ್ಳಿ ಪ್ರಭಾಕರ್ , ವಕ್ಕಲೇರಿ ಹನುಮಯ್ಯ , ಸಂದೀಪ್‌ರೆಡ್ಡಿ , ಸಂದೀಪ್‌ಗೌಡ , ವೇಣು , ಮುದುವಾಡಿ ಗಂಗಪ್ಪ , ಲೋಕೇಶ್ , ಸಹದೇವಣ್ಣ , ಗಂಗಾಧರ್ , ಆಲವಾಟಿ ಶಿವ ಮುಂತಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು