11:14 PM Sunday13 - July 2025
ಬ್ರೇಕಿಂಗ್ ನ್ಯೂಸ್
ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಅಕ್ರಮ ಮರಳುಗಾರಿಕೆ ಅಡ್ಡೆ: 2 ಪ್ರತ್ಯೇಕ ಸ್ಥಳಗಳಿಗೆ ಪೊಲೀಸ್ ದಾಳಿ; 12 ಲೋಡ್ ಮರಳು, ಪಿಕ್ ಅಪ್ ವಾಹನ ವಶ

24/08/2023, 14:40

ಮಂಗಳೂರು(reporterkarnataka.com): ಅಕ್ರಮ ಮರುಳುಗಾರಿಕೆ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 12 ಲೋಡ್ ಮರಳು ಹಾಗೂ ಪಿಕ್ ಅಪ್ ವಾಹನ ವಶಪಡಿಸಿಕೊಂಡಿದ್ದಾರೆ.


ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಮನ್ನೂರು ಗ್ರಾಮದ ಕಲ್ಲಾಪು ಮತ್ತು ಉಳ್ಳಾಲ ಗ್ರಾಮದ ಕೋಟೆಪುರ ಎಂಬಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮತ್ತು ಸಾಗಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ ಆ. 24ರಂದು ಬೆಳಗ್ಗಿನ ಜಾವ 4-10 ಗಂಟೆಗೆ ಉಳ್ಳಾಲ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಪೆರ್ಮನ್ನೂರು ಗ್ರಾಮದ ಕಲ್ಲಾಪು ಎಂಬಲ್ಲಿ ಅಕ್ರಮವಾಗಿ ಮರಳು ಸಾಗಾಟದ ಅಡ್ಡೆಗೆ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೆಎಲ್-29-482 ನೇ ಪಿಕ್ ಅಪ್ ವಾಹನ ಹಾಗೂ ಉಳ್ಳಾಲ ಗ್ರಾಮದ ಕೋಟೆಪುರ ಎಂಬಲ್ಲಿ ನೇತ್ರಾವತಿ ದಡದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ ಸುಮಾರು 12 ಲೋಡ್ ಸಾಮಾನ್ಯ ಮರಳನ್ನು ಪತ್ತೆ ಮಾಡಿ ಸೂಕ್ತ ಕಾನೂನು ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ವರದಿ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು