ಇತ್ತೀಚಿನ ಸುದ್ದಿ
ಅಕ್ರಮ ಮರಳುಗಾರಿಕೆ ಅಡ್ಡೆಗೆ ಬಂಟ್ವಾಳ ಲೇಡಿ ತಹಶೀಲ್ದಾರ್ ಮಧ್ಯರಾತ್ರಿ ದಾಳಿ: ಸೊತ್ತು ಮುಟ್ಟುಗೋಲು
26/06/2021, 07:51

ಬಂಟ್ವಾಳ(reporterkarnataka news): ಪಾಣೆಮಂಗಳೂರು ಹಳೆ ಸೇತುವೆ ಅಡಿಭಾಗದಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್. ಆರ್. ಅವರು ಅಧಿಕಾರಿಗಳ ಜತೆ ಮಧ್ಯರಾತ್ರಿ ದಾಳಿ ನಡೆಸಿದ್ದಾರೆ.
ಅಕ್ರಮವಾಗಿ ಮಧ್ಯರಾತ್ರಿ ಮೆಷಿನ್ ಬಳಸಿ ಮರಳುಗಾರಿಕೆ ನಡೆಸುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ಹಾಗೂ ಇತರ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು. ಅಕ್ರಮ ಮರಳುಗಾರಿಕೆಗೆ ಬಳಸಿದ ಸೊತ್ತು ವಶಪಡಿಸಿಕೊಳ್ಳಾಗಿದೆ.