11:29 AM Wednesday3 - December 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ

ಇತ್ತೀಚಿನ ಸುದ್ದಿ

ಅಕ್ರಮ ಪಿಸ್ತೂಲ್: ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡಿಗೆ ಮನೆ ನಿವಾಸಿಯ ಬಂಧನ

04/04/2023, 10:06

ಮಂಗಳೂರು(reporterkarnataka.com):
ನಗರದ ಕದ್ರಿ ಸಮೀಪದ ಮನೆಯೊಂದರಲ್ಲಿ ಅಕ್ರಮವಾಗಿ ಪಿಸ್ತೂಲ್ ಮತ್ತು ಬುಲೆಟ್ ಹೊಂದಿದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ‌.
ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಜಾರ್ಜ್ ಮಾರ್ಟಿಸ್ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಶಿಶಿರ್ ಎಂಬಾತ ಬಂಧಿತ ಆರೋಪಿ. ಈತ ಅಕ್ರಮವಾಗಿ ಪಿಸ್ತೂಲ್ ಮತ್ತು ಬುಲೆಟ್ ಹೊಂದಿದ್ದ ಎನ್ನಲಾಗಿದೆ.
ಅಕ್ರಮ ಪಿಸ್ತೂಲ್ ಹೊಂದಿದ್ದ ಕುರಿತು
ಮನೆಯ ಮಾಲೀಕ ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಕದ್ರಿ ಪೊಲೀಸರು ಶಿಶಿರ್‌ನನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಪಿಸ್ತೂಲ್ ಪತ್ತೆಯಾಗಿದೆ. ಕಳೆದ 5 ತಿಂಗಳಿನಿಂದ ಶಿಶಿರ್ ಈ ಮನೆಯಲ್ಲಿ ವಾಸವಾಗಿದ್ದ ಎನ್ನಲಾಗಿದೆ. ತನಗೆ ಈ ಪಿಸ್ತೂಲ್‌ನ್ನು ತನ್ನ ಗೆಳೆಯ ನೀಡಿರುವುದಾಗಿ ಶಿಶಿರ್ ಪೊಲೀಸರ ಬಳಿ ಹೇಳಿಕೊಂಡಿದ್ದಾನೆ. ಈ ಬಗ್ಗೆ ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು