9:40 AM Friday22 - May 2026
ಬ್ರೇಕಿಂಗ್ ನ್ಯೂಸ್
ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:…

ಇತ್ತೀಚಿನ ಸುದ್ದಿ

ಅಕ್ರಮ ಸಂಬಂಧ: ಮಚ್ಚಿನಿಂದ ಕೊಚ್ಚಿ ನಡು ವಯಸ್ಕನ ಭೀಕರ ಕೊಲೆ; ಆರೋಪಿ ಪರಾರಿ

06/09/2024, 20:00

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಹುಣಸನಾಳು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರಂಗಸ್ವಾಮಿ (42) ಕೊಲೆಯಾದ ವ್ಯಕ್ತಿ. ಆರೋಪಿ ಮಹದೇವ ಶೆಟ್ಟಿ (45) ಪರಾರಿಯಾಗಿದ್ದಾನೆ.
ಮಹದೇವ ಶೆಟ್ಟಿ ಪತ್ನಿ ಜೊತೆ ರಂಗಸ್ವಾಮಿ ಅಕ್ರಮ ಸಂಬಂಧ ಹೊಂದಿದ್ದ ವಿಚಾರವಾಗಿ ರಂಗಸ್ವಾಮಿ ಮತ್ತು ಮಹದೇವ ಶೆಟ್ಟಿ ನಡುವೆ ಕೆಲವು ದಿನಗಳ ಹಿಂದೆ ಗಲಾಟೆ ನಡೆದಿತ್ತು.
ಇಂದು ರಂಗಸ್ವಾಮಿ ಗ್ರಾಮದ ಬೇಕರಿಯ ಬಳಿ ಕುಳಿತುಕೊಂಡಿದ್ದ ವೇಳೆ ಮಹದೇವ ಶೆಟ್ಟಿ ಮತ್ತು ರಂಗಸ್ವಾಮಿ ಇಬ್ಬರ ನಡುವೆ ಗಲಾಟೆ ನಡೆದು ಗಲೋಟೆ ವಿಕೋಪಕ್ಕೆ ತಿರುಗಿದ ಪರಿಣಾಮ ಮಹದೇವ ಶೆಟ್ಟಿ ರಂಗಸ್ವಾಮಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಡಿವೈಎಸ್ಪಿ ರಘು, ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ಐ ಸುನೀಲ್ ಕುಮಾರ್ ಸ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಪ್ರಕರಣವನ್ನು ದಾಖಲು ಮಾಡಿಕೊಂಡಿರುವ ಪೊಲೀಸರು ಆರೋಪಿಯ ಸೆರೆಗಾಗಿ ಬಲೆ ಬೀಸಿದ್ದಾರೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು