7:20 PM Wednesday27 - November 2024
ಬ್ರೇಕಿಂಗ್ ನ್ಯೂಸ್
ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​

ಇತ್ತೀಚಿನ ಸುದ್ದಿ

ಆಲಂಕಾರು: ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯ ವಾರ್ಷಿಕ ವಿಶೇಷ ಶಿಬಿರ 

23/01/2022, 19:24

ಉಪ್ಪಿಂಗಡಿ(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯಡಿ ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉಪ್ಪಿನಂಗಡಿಯ ಆಲಂಕಾರಿನ ದ. ಕ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆಗೊಂಡಿತು.

ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ, ಹಾಗೂ ಶಿಬಿರ ನಿರ್ದೇಶಕಿ ಡಾ. ನಾಗರತ್ನ ಕೆ. ಎ. ಕಾರ್ಯಕ್ರಮ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಮೃತ ಸಮುದಾಯ ಯೋಜನೆಯ ಸಲುವಾಗಿ ಈ ವಾರ್ಷಿಕ ವಿಶೇಷ ಶಿಬಿರ ವನ್ನು ಆಲಂಕಾರು ಗ್ರಾಮದ 102 ವರ್ಷಗಳ ಇತಿಹಾಸವುಳ್ಳ ಸರ್ಕಾರಿ ಶಾಲೆಯಲ್ಲಿ ಆಯೋಜಿಸಿರುವುದು ಸಮರ್ಪಕ ಎಂದರು .

ಶಿಬಿರವು ವಿದ್ಯಾರ್ಥಿಗಳಲ್ಲಿ ಸಂಘಟಿತ ಜವಾಬ್ದಾರಿಯ ಪ್ರಜ್ಞೆಯನ್ನು ಬೆಳೆಸುವಲ್ಲಿ ಸಹಕಾರಿ ಹಾಗೂ ವ್ಯಕ್ತಿತ್ವದ ವಿಕಸನದ ಬೆಳವಣಿಗೆಗೆ ಪೂರಕವಾಗಲಿದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿ  ಪುತ್ತೂರಿನ ಶಿಕ್ಷಣಧಿಕಾರಿ ಲೋಕೇಶ್ ಸಿ.ಮಾತನಾಡಿ, ಈ ಶಿಬಿರದಿಂದ ಗ್ರಾಮಕ್ಕೆ ಉಪಯುಕ್ತವಾಗುವ ಕೆಲಸ ಮಾಡಿ, ಮಂಗಳೂರು ವಿವಿಗೆ ಒಳ್ಳೆಯ ಹೆಸರು ತನ್ನಿ, ನಾನು ಮೈಸೂರು ಯೂನಿವರ್ಸಿಟಿ ರಾ.ಸೇ.ಯೋ ಸ್ವಯಂ ಸೇವಕನಾಗಿದ್ದೆ. ಅವಾಗ ಕಂಪೌಂಡ್ ಕಟ್ಟು ವ ತರಬೇತಿ ನೀಡುತ್ತಿದ್ದರು. ಕಂಪೌಂಡ್ ಕಟ್ಟಿದ್ದೇನೆ ಎಂಬ ಖುಷಿ , ತೃಪ್ತಿ ನನಗಿದೆ ಎಂದು ಅವರು ಹೇಳಿದರು.


ಅಧ್ಯಕ್ಷತೆಯನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಸಂಚಾಲಕ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ  ಮೋಹನ್ ರಾಮ್ ಸುಳ್ಳಿ ವಹಿಸಿದ್ದರು.ಕುಕ್ಕೆ ಮಹಾವಿದ್ಯಾಲಯದ ಐಕ್ಯೂಎಸಿ ಸಂಯೋಜಕ ಡಾ. ಪ್ರಸಾದ ಎನ್.,



ಆಲಂಕಾರು ಗ್ರಾಮ ಪಂಚಾಯತ್ ಅಧ್ಯಕ್ಷ ಸದಾನಂದ ಆಚಾರ್ಯ , ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗಳು ಡಾ. ಆಕಾಶ್, ಶಿಬಿರ ಸಹ ಸಂಯೋಜಕ  ರವಿ ಪೂಜಾರಿ, ಆಲಂಕಾರು ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯ  ನಿಂಗರಾಜು ಕೆ.ಎ,. ಶಿಬಿರದ ಸಹ ಸಂಯೋಜಕಿ  ನಮಿತಾ ಎಂ. ಎ., ಶಿಬಿರದ ನಾಯಕರುಗಳಾದ  ಇಂದ್ರಕುಮಾರ್, ಹರಿ ಚಂದನ್, ಜಯಶ್ರೀ, ಧನ್ಯ ಮತ್ತಿತರರು ಉಪಸ್ಥಿತರಿದ್ದರು.


ಶಿಬಿರದ ಸಂಯೋಜಕಿ  ಆರತಿ ಕೆ.  ಸ್ವಾಗತಿಸಿದರು. ಡಾ. ಕೃಷ್ಣ ಡಿ ಲಮಾಣಿ ವಂದಿಸಿದರು. ವಿದ್ಯಾರ್ಥಿನಿ ಚುಂಚನ ಪಿ, ವಿಘ್ನೇಶ್ ಎಸ್ . ಕಾರ್ಯಕ್ರಮ ನಿರೂಪಿಸಿದರು. ವೈಷ್ಣವಿ ಹಾಗೂ ಬಳಗ ಶಿಬಿರ ಗೀತೆಯನ್ನು ಹಾಡಿದರು

ಇತ್ತೀಚಿನ ಸುದ್ದಿ

ಜಾಹೀರಾತು