3:24 AM Thursday5 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆ: ಸಾಲದ ಸಂಕಷ್ಟಕ್ಕೆ ಯುವ ಕೃಷಿಕ ಬಲಿ

01/06/2025, 14:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಚಿಕ್ಕಮಗಳೂರು ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ಇಂದೂ ಮತ್ತೊಬ್ಬ ಕಾಫಿ ಬೆಳೆಗಾರ ಸಾಲದ ಬಾಧೆಯಿಂದ ಜೀವ ಕಳೆದುಕೊಂಡಿದ್ದಾರೆ.
ಮಾಣಿಮಕ್ಕಿ ಗ್ರಾಮದ ನಿವಾಸಿ ಅರುಣ್ (35) ಎಂಬ ಯುವ ರೈತ ತನ್ನ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೈಸಾಲ ಸೇರಿ ವಿವಿಧ ರಾಷ್ಟ್ರೀಯ ಬ್ಯಾಂಕ್‌ಗಳಿಂದ ಸಾವಿರಾರು ರೂಪಾಯಿ ಸಾಲ ಪಡೆದಿದ್ದ ಅರುಣ್, ಸಾಲ ತೀರಿಸಲಾಗದೆ ತೀವ್ರ ಮಾನಸಿಕ ದೌರ್ಬಲ್ಯಕ್ಕೆ ಒಳಗಾಗಿದ್ದರೂ ಸಹಾಯ ದೊರೆತಿಲ್ಲ.
ಘಟನೆಯ ಕುರಿತು ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
ಪ್ರತಿ ವರ್ಷಾ ಕಾಫಿ ಬೆಳೆಗಾರರು ಹವಾಮಾನ ವೈಪರೀತ್ಯ, ಬೆಲೆ ಇಳಿಕೆ ಹಾಗೂ ಸಾಲದ ಬಾಧೆಯಿಂದ ಸಂಕಷ್ಟ ಅನುಭವಿಸುತ್ತಿರುವುದು ಕರ್ನಾಟಕದ ಹಸಿರು ಬೆಲ್ಟ್‌ಗೆ ಕತ್ತಲೆ ನೆರಳು ಬೀರುತ್ತಿರುವುದು ಸ್ಪಷ್ಟವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು