2:00 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಸರ್ಕಾರದಲ್ಲಿ ಕಮೀಶನ್ ದಂಧೆ 224 ಶಾಸಕರಿಗೂ ಗೊತ್ತಿದೆ: ಕೇಂದ್ರ ಸಚಿವ ಕುಮಾರಸ್ವಾಮಿ

22/06/2025, 13:50

ಬೆಂಗಳೂರು(reporterkarnataka.com): ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಕಮೀಶನ್ ವ್ಯವಹಾರದ ಬಗ್ಗೆ 224 ಶಾಸಕರಿಗೂ ಗೊತ್ತಿರುವ ವಿಷಯವೇ ಆಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.
ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ಶಾಸಕರ ಹಣೆಬರಹವೋ ಏನೋ, ತಮ್ಮ ಕ್ಷೇತ್ರಗಳಿಗೆ ಸರ್ಕಾರದ ಯಾವುದೇ ಕಾರ್ಯಕ್ರಮ ತೆಗೆದುಕೊಂಡು ಹೋಗಬೇಕಾದರೆ ಪೇಮೆಂಟ್ ಆಗಲೇಬೇಕು. ಈ ಸರ್ಕಾರದಲ್ಲಿ ಇದೇ ನಡೆಯುತ್ತಿದೆ ಎಂದು ಆರೋಪಿಸಿದರು.
ಈ ಮುಖ್ಯಮಂತ್ರಿಗೆ ಮಾನ‌ ಮರ್ಯಾದೆ ಎನ್ನುವುದು ಇದೆಯಾ? ಇಂಥ ಭ್ರಷ್ಟನನ್ನು ಪಕ್ಕದಲ್ಲಿ ಕೂರಿಸಿಕೊಳ್ಳುತ್ತಾರೆ. ಅಂತಹ ವ್ಯಕ್ತಿಯನ್ನು ಇನ್ನೂ ಸಂಪುಟದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.
ಈ ಸರ್ಕಾರದಲ್ಲಿ ಭ್ರಷ್ಟಾಚಾರ, ಕಮೀಶನ್ ವ್ಯವಹಾರ ಅವ್ಯಾಹತವಾಗಿ ಸಾಗಿದೆ. ಅದಕ್ಕೆ ಕೊನೆ ಎಂಬುದೇ ಇಲ್ಲ. ಪ್ರತಿಯೊಬ್ಬ ಶಾಸಕರು ಇದರಿಂದ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.
ವಸತಿ ಇಲಾಖೆಯ ಕರ್ಮಕಾಂಡದ ಬಗ್ಗೆ ಬೀದಿ ಬೀದಿಯಲ್ಲಿ ಚರ್ಚೆ ಆಗುತ್ತಿದೆ. ಇವೆಲ್ಲವನ್ನು ಇಲಾಖೆಗಳು ಅಂತಾರಾ?ಇವರೆಲ್ಲಾ ಮಂತ್ರಿಗಳಾ? ಈ ವ್ಯಕ್ತಿಯನ್ನು ಬೇರೆ ಉಪ ಮುಖ್ಯಮಂತ್ರಿಆಡಬೇಕಿತ್ತಂತೆಂತೆ

*ಹೆಚ್.ಕೆ‌. ಪಾಟೀಲ್ ಏನು ಮಾಡುತ್ತಿದ್ದರು?:*
ಗಣಿಗಾರಿಕೆ ಬಗ್ಗೆ ತನಿಖೆ ಮಾಡುವಂತೆ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ‌. ಪಾಟೀಲ್ ಅವರು ಪತ್ರ ಬರೆದಿದ್ದಾರೆ. ಅವರು ಈ ಸರ್ಕಾರದಲ್ಲಿ ಎರಡು ವರ್ಷದಿಂದ ಸಚಿವರಾಗಿದ್ದಾರೆ. ಈಗ ಪತ್ರ ಬರೆದಿದ್ದಾರೆ. ಅವರು ಇಷ್ಟು ದಿನ ಏನು ಮಾಡುತ್ತಿದ್ದರು? 2015 – 16ರಲ್ಲಿ ತನಿಖೆ ನಡೆಸುವಂತೆ ಇದೇ ಹೆಚ್.ಕೆ. ಪಾಟೀಲ್ ಅವರೇ ಶಿಫಾರಸು ಮಾಡಿದ್ದರು. ಆ ವರದಿನಿಟ್ಟುಕೊಂಡು ಅವರು ದಿನವೂ ಪೂಜೆ ಮಾಡುತ್ತಿದ್ದಾರಾ? ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು