10:39 AM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಬ್ಯೂಟಿಪಾರ್ಲರ್ – ಸ್ಪಾ ಮಸಾಜ್ ಸೆಂಟರ್ ಹೆಸರಿನಲ್ಲಿ ವೇಶ್ಯಾವಾಟಿಕೆ ಆರೋಪ: ಇಬ್ಬರ ವಿರುದ್ದ ಪ್ರಕರಣ ದಾಖಲು; 6 ಮಂದಿ ಮಹಿಳೆಯರ ರಕ್ಷಣೆ

20/09/2025, 10:37

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಖಾಸಗಿ ಕಟ್ಟಡವನ್ನು ಭಾಡಿಗೆಗೆ ಪಡೆದು ಬ್ಯೂಟಿಪಾರ್ಲರ್ ನೊಂದಿಗೆ ಪರವಾನೆಗೆ ಇಲ್ಲದೇ ಸ್ಪಾ ಸೆಂಟರ್ ನಡೆಸುತಿದ್ದ ಕೇರಳ ಮೂಲದ ಇಬ್ಬರು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ವಿರಾಜಪೇಟೆ ನಗರದಲ್ಲಿ ನಡೆದಿದೆ.
ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಪ್ರದೀಪನ್ ಮತ್ತು ಶಿಜು ಎಂಬಿಬ್ಬರು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಗಳಾಗಿದ್ದು ಇವರ ವಿರುದ್ಧ ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿರಾಜಪೇಟೆ ಗಾಂಧಿನಗರದಲ್ಲಿ ಖಾಸಗಿ ಕಟ್ಟಡವೊಂದನ್ನು ಬಾಡಿಗೆಗೆ ಪಡೆದಿದ್ದ ಪ್ರದೀಪನ್ ಮತ್ತು ಶಿಜು ಎಂಬುವವರು ಆರೇಂಜ್ ಫ್ಯಾಮಿಲಿ ಬ್ಯೂಟಿ ಪಾರ್ಲರ್ ಮತ್ತು ಸ್ಪಾ ಸೆಂಟರ್ ನಡೆಸುತ್ತಿದ್ದರು. ಇಲ್ಲಿ ಸುಮಾರು 6 ತಿಂಗಳಿನಿಂದ ಹೊರ ರಾಜ್ಯಗಳ ಐಷಾರಾಮಿ ವಾಹನಗಳು ಬಂದು ನಿಲುಗಡೆಗೊಂಡು ಮರಳುತ್ತಿದ್ದವು. ಈ ಸೆಂಟರ್ ನಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಸ್ಥಳೀಯರಲ್ಲಿ ಸಂಶಯ ಮೂಡಿಸಿತ್ತು ಅಲ್ಲದೇ ಕೆಲವರು ಮೌಖಿಕವಾಗಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ದಿನಾಂಕ 18-09-2025 ರಂದು ಬ್ಯೂಟಿ ಪಾರ್ಲರ್ ಮೇಲೆ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಬ್ಯೂಟಿ ಪಾರ್ಲರ್ ಹೆಸರಿನಲ್ಲಿ ಪರವಾನಗೆ ಪಡೆದು ಅಕ್ರಮವಾಗಿ ಸ್ವಾ ಮಸಾಜ್ ಸೆಂಟರ್ ನಡೆಸುತ್ತಿರುವುದು ತಿಳಿದುಬಂದಿದೆ. ಅಲ್ಲದೆ ಕೆಲವು ಯುವತಿಯರನ್ನು ಮತ್ತು ಮಹಿಳೆಯರನ್ನು ಗಿರಾಕಿಗಳಿಗೆ ಪೂರೈಸುತ್ತಿದ್ದುದು ಮೇಲ್ನೋಟಕ್ಕೆ ಕಂಡುಬಂದಿದೆ.
ದಾಳಿಯ ವೇಳೆ ಕೊಡಗು ಜಿಲ್ಲೆಯ ಮತ್ತು ಮಂಗಳೂರು ಹಾಗೂ ತಮಿಳುನಾಡು ಮೂಲದ ಆರು ಮಹಿಳೆಯರನ್ನು ಪೊಲಿಸರು ರಕ್ಷಣೆ ಮಾಡಿ, ಆರೋಪಿಗಳಾದ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಪ್ರದೀಪನ್ ಮತ್ತು ಶಿಜು ಎಂಬಿಬ್ಬರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು