7:47 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ ಆಗ್ರಹ

07/07/2026, 16:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವ ನಡುವೆಯೇ ಮೂಗ್ರಹಳ್ಳಿ ಗ್ರಾಮದ ಹೇಮಾವತಿ ನದಿ ಸೇತುವೆಯ ತಡೆಗೋಡೆ ನಿರ್ಮಾಣ ಕಾಮಗಾರಿ ತರಾತುರಿಯಲ್ಲಿ ನಡೆಯುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಕಾಮಗಾರಿ ಸಲುವಾಗಿ ಮುಖ್ಯ ರಸ್ತೆಯ ಪಕ್ಕದಲ್ಲೇ ಸುಮಾರು 20 ಅಡಿ ಆಳದ ಗುಂಡಿಗಳನ್ನು ತೋಡಲಾಗಿದ್ದು, ಅಪಾಯವನ್ನು ತಡೆಯಲು ಅಗತ್ಯವಾದ ಬ್ಯಾರಿಕೇಡ್‌ಗಳು ಅಥವಾ ಎಚ್ಚರಿಕೆ ಫಲಕಗಳನ್ನು ಅಳವಡಿಸಿಲ್ಲ ಎಂದು ಅವರು ತಿಳಿಸಿದ್ದಾರೆ. ಇದರಿಂದ ವಾಹನ ಸವಾರರು ಹಾಗೂ ಪ್ರಾಣಿಗಳು ಗುಂಡಿಗೆ ಬಿದ್ದು ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಿದ್ದು, ಜೀವಹಾನಿಯ ಭೀತಿಯೂ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.


ಭಾರೀ ಮಳೆಯ ಸಂದರ್ಭದಲ್ಲಿ ಇಂತಹ ಅಪಾಯಕಾರಿ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಆದ್ದರಿಂದ ಕಾಮಗಾರಿಯ ಗುಣಮಟ್ಟ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಪರಿಗಣಿಸಿ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕು. ಜೊತೆಗೆ ಕಾಮಗಾರಿ ಸ್ಥಳದಲ್ಲಿ ಕಡ್ಡಾಯವಾಗಿ ಬ್ಯಾರಿಕೇಡ್‌ಗಳು, ಎಚ್ಚರಿಕೆ ಫಲಕಗಳು ಹಾಗೂ ಅಗತ್ಯ ಸುರಕ್ಷತಾ ಕ್ರಮಗಳನ್ನು ತಕ್ಷಣವೇ ಅಳವಡಿಸಬೇಕು ಎಂದು ಸಂಬಂಧಪಟ್ಟ ಇಲಾಖೆ ಹಾಗೂ ಅಧಿಕಾರಿಗಳಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು