12:51 PM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಜತೆ ಕುಡುಪು ಗುಂಪು ಹತ್ಯೆ, ರೆಹ್ಮಾನ್ ಕೊಲೆಯನ್ನೂ ಎನ್‌ಐಎಗೆ ನೀಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

09/06/2025, 23:31

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೂವರೆ ತಿಂಗಳಿನಿಂದೀಚೆಗೆ ನಡೆದಿರುವ ಮೂರು ಕೊಲೆ ಪ್ರಕರಣಗಳು ಇಡೀ ಕರಾವಳಿಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಕೊಲೆಗಳು ಒಂದಕ್ಕೊಂದು ಪ್ರತೀಕಾರದ ಕೊಲೆಯಾಗಿರುವ ಸಾಧ್ಯತೆಯಿದ್ದು, ಈ ಮೂರು ಪ್ರಕರಣಗಳನ್ನು ಕೂಡ ಎನ್ ‌ಐಎ ತನಿಖೆಗೆ ವಹಿಸಿದರೆ ದುಷ್ಜೃತ್ಯದ ಹಿಂದಿನ ಸತ್ಯ ಬಯಲಿಗೆ ಬರಲಿದೆ ಎಂದು ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.
ಕೇಂದ್ರ ಗೃಹ ಇಲಾಖೆಯು ಬಜಪೆ ಕಿನ್ನಿಪದವಿನಲ್ಲಿ ನಡೆದ ಸುಹಾಸ್ ಕೊಲೆ ಪ್ರಕರಣವನ್ನು ಎನ್‌ಐಎಗೆ ವಹಿಸಿದೆ. ಇದೇ ಮಾದರಿಯಲ್ಲಿ ಕುಡುಪುವಿನಲ್ಲಿ ಏ.27ರಂದು ಅಶ್ರಫ್ ಎಂಬಾತನನ್ನು ಗುಂಪು ಹತ್ಯೆ ಮಾಡಲಾಗಿದೆ. ಇದಾದ ಬಳಿಕ ಬಜಪೆ ಕಿನ್ನಿಪದವಿನಲ್ಲಿ ಮೇ 1ರಂದು ಸುಹಾಸ್ ಶೆಟ್ಟಿ ಕೊಲೆ ನಡೆದರೆ, ಈ ಘಟನೆ ನಡೆದ ಕೆಲವೇ ದಿನದ ಬಳಿಕ ಮೇ 27ರಂದು ಕುರಿಯಾಳ ಕಾಂಬೋಡಿ ಬಳಿ ಅಬ್ದುಲ್ ರಹೀಮಾನ್ ಕೊಲೆಯಾಗುತ್ತದೆ. ಈ ಮೂರು ಪ್ರಕರಣಗಳು ಒಂದಕ್ಕೊಂದು ಪ್ರತೀಕಾರದ ಕೊಲೆಯಾಗಿರುವ ಸಾಧ್ಯತೆಯಿದ್ದು, ಈ ಹಿನ್ನಲೆಯಲ್ಲಿ ಕೇಂದ್ರ ಸರಕಾರ ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಬಳಿಯುವ ಬದಲು ಮೂರು ಪ್ರಕರಣಗಳನ್ನು ಎನ್‌ ಐಎ ವಹಿಸಲಿ. ಆಗ ಇಡೀ ಕರಾವಳಿಯ ಕೋಮು ಸಂಘರ್ಷದ ಜಾಲ ಬಯಲಾಗಲಿದೆ. ನಾಗರಿಕರಿಗೂ ಇದರ ಹಿಂದಿರುವ ಸತ್ಯವನ್ನು ಅರಿಯಬಹುದಾಗಿದೆ. ಈ ಕಾರಣದಿಂದ ಕೇಂದ್ರ ಸರಕಾರ ಮೂರು ಪ್ರಕರಣವನ್ನು ಎನ್‌ಐಎಗೆ ವಹಿಸಬೇಕಾದ ಅಗತ್ಯವಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು